ರಾಹುಲ್ ಗಾಂಧಿ ಸಿಖ್ಖರ ಬಗ್ಗೆ ಹೇಳಿದ್ದನ್ನು ಭಾರತದಲ್ಲಿ ಮತ್ತೊಮ್ಮೆ ಹೇಳಲಿ: ಬಿಜೆಪಿ ಮುಖಂಡನ ಸವಾಲು

ದೆಹಲಿಯಲ್ಲಿ 3000 ಸಿಖ್ಖರನ್ನು ಕಗ್ಗೊಲೆ ಮಾಡಲಾಯಿತು. ಅವರ ಪೇಟಗಳನ್ನು ತೆಗೆಯಲಾಯಿತು, ಅವರ ಕೂದಲನ್ನು ಕತ್ತರಿಸಲಾಯಿತು ಮತ್ತು ಗಡ್ಡವನ್ನು ಬೋಳಿಸಿದರು ... ಅವರು (ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ ಇದು ಸಂಭವಿಸಿತು ಎಂದು ರಾಹುಲ್ ಗಾಂಧಿ ಹೇಳುವುದಿಲ್ಲ. ರಾಹುಲ್ ಗಾಂಧಿ ಅವರು ಸಿಖ್ಖರ ಬಗ್ಗೆ ಏನು ಹೇಳಿದ್ದಾರೆ ಎಂಬುದನ್ನು ಭಾರತದಲ್ಲಿ ಮತ್ತೊಮ್ಮೆ ಹೇಳಲಿ ಎಂದು ನಾನು ಸವಾಲು ಹಾಕುತ್ತೇನೆ ಎಂದ ಬಿಜೆಪಿ ನಾಯಕ.

ರಾಹುಲ್ ಗಾಂಧಿ ಸಿಖ್ಖರ ಬಗ್ಗೆ ಹೇಳಿದ್ದನ್ನು ಭಾರತದಲ್ಲಿ ಮತ್ತೊಮ್ಮೆ ಹೇಳಲಿ: ಬಿಜೆಪಿ ಮುಖಂಡನ ಸವಾಲು
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Sep 10, 2024 | 4:50 PM

ದೆಹಲಿ ಸೆಪ್ಟೆಂಬರ್ 10: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಿಖ್ಖರ ಬಗ್ಗೆ ತಮ್ಮ ಹೇಳಿಕೆಗಳನ್ನು ಭಾರತದಲ್ಲಿ ಪುನರಾವರ್ತಿಸಲಿ ನೋಡೋಣ. ಅವರನ್ನು ನ್ಯಾಯಾಲಯದ ಮುಂದೆ ತರುತ್ತೇವೆ ಎಂದು ಬಿಜೆಪಿ ವಕ್ತಾರ ಆರ್‌ಪಿ ಸಿಂಗ್ (RP Singh) ಮಂಗಳವಾರ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ದೆಹಲಿಯಲ್ಲಿ 1984 ರ ಗಲಭೆಯಲ್ಲಿ 3000 ಸಿಖ್ಖರು ಕೊಲ್ಲಲ್ಪಟ್ಟರು ಎಂದು ಆರ್‌ಪಿ ಸಿಂಗ್ ಹೇಳಿದರು.

“ದೆಹಲಿಯಲ್ಲಿ 3000 ಸಿಖ್ಖರನ್ನು ಕಗ್ಗೊಲೆ ಮಾಡಲಾಯಿತು. ಅವರ ಪೇಟಗಳನ್ನು ತೆಗೆಯಲಾಯಿತು, ಅವರ ಕೂದಲನ್ನು ಕತ್ತರಿಸಲಾಯಿತು ಮತ್ತು ಗಡ್ಡವನ್ನು ಬೋಳಿಸಿದರು … ಅವರು (ಕಾಂಗ್ರೆಸ್) ಅಧಿಕಾರದಲ್ಲಿದ್ದಾಗ ಇದು ಸಂಭವಿಸಿತು ಎಂದು ರಾಹುಲ್ ಗಾಂಧಿ ಹೇಳುವುದಿಲ್ಲ. ರಾಹುಲ್ ಗಾಂಧಿ ಅವರು ಸಿಖ್ಖರ ಬಗ್ಗೆ ಏನು ಹೇಳಿದ್ದಾರೆ ಎಂಬುದನ್ನು ಭಾರತದಲ್ಲಿ ಮತ್ತೊಮ್ಮೆ ಹೇಳಲಿ ಎಂದು ನಾನು ಸವಾಲು ಹಾಕುತ್ತೇನೆ. ನಂತರ ನಾನು ಅವರ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಲಯದ ಮುಂದೆ ತರುತ್ತೇನೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.

ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ, ತಾನು ನಡೆಸುತ್ತಿರುವ ರಾಜಕೀಯ ಹೋರಾಟವೆಂದರೆ ಭಾರತದಲ್ಲಿ ಸಿಖ್ಖರಿಗೆ ಪೇಟ ಧರಿಸಲು ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದಾಗಿದೆ ಎಂದು ಹೇಳಿದ್ದರು.

ವರ್ಜೀನಿಯಾದಲ್ಲಿ ಮಾತನಾಡಿದ ರಾಹುಲ್, “ಮೊದಲನೆಯದಾಗಿ, ಹೋರಾಟ ಯಾಕೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ಹೋರಾಟವು ರಾಜಕೀಯದ ಬಗ್ಗೆ ಅಲ್ಲ. ಇದು ಮೇಲ್ನೋಟಕ್ಕೆ ಸಂಬಂಧಿಸಿದೆ. ನಿಮ್ಮ ಹೆಸರೇನು? ಹೋರಾಟ ಯಾವುದರ ಬಗ್ಗೆ ಎಂದರೆ ಅವರು ಸಿಖ್ಖರು ಅವರಿಗೆ ಭಾರತದಲ್ಲಿ ತನ್ನ ಪೇಟವನ್ನು ಧರಿಸಲು ಅವಕಾಶ ನೀಡುತ್ತಾರೆಯೇ ಎಂಬುದರ ಬಗ್ಗೆ ಆಗಿದೆ. ಅಥವಾ ಅವರು ಸಿಖ್ಖರಾಗಿ ಭಾರತದಲ್ಲಿ ಕಾಡಾವನ್ನು ಧರಿಸಲು ಅನುಮತಿಸಲಾಗುವುದೇ? ಅಥವಾ ಅವನೊಬ್ಬ ಸಿಖ್, ಅವರಿಗೆ ಗುರುದ್ವಾರಕ್ಕೆ ಹೋಗಲು ಸಾಧ್ಯವಾಗುವುದೇ? ಇದು ಹೋರಾಟ, ಇದು ಅವರಿಗೆ ಮಾತ್ರವಲ್ಲ ಎಲ್ಲ ಧರ್ಮದವರದ್ದೂ ಎಂದಿದ್ದಾರೆ.

ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ವಿರೋಧ ಪಕ್ಷದ ನಾಯಕರಾಗಿ ಅಟಲ್ ಬಿಹಾರಿ ವಾಜಪೇಯಿ ಅವರು ಎಂದಿಗೂ ವಿದೇಶದಲ್ಲಿ ಸರ್ಕಾರದ ಮೇಲೆ ದಾಳಿ ನಡೆಸಿಲ್ಲ ಎಂದಿದ್ದಾರೆ.

“ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಹೊಂದಿದ್ದು, ಆ ಸ್ಥಾನವು ಜವಾಬ್ದಾರಿಯುತ ಸ್ಥಾನವಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಲೋಕಸಭೆಯಲ್ಲಿ ವಿಪಕ್ಷ ನಾಯಕರಾಗಿದ್ದಾಗ, ವಿದೇಶದಲ್ಲಿ ಅವರು ಎಂದಿಗೂ ದೇಶದ ಪ್ರತಿಷ್ಠೆಯನ್ನು ಕೆಡಿಸಲು ಪ್ರಯತ್ನಿಸಲಿಲ್ಲ ಎಂಬುದನ್ನು ನಾನು ರಾಹುಲ್ ಗಾಂಧಿಗೆ ನೆನಪಿಸಲು ಬಯಸುತ್ತೇನೆ. ಸತತ ಮೂರನೇ ಬಾರಿ ಸೋಲನುಭವಿಸಿದ್ದರಿಂದ ಅವರ ಮನಸ್ಸಿನಲ್ಲಿ ಬಿಜೆಪಿ, ಆರೆಸ್ಸೆಸ್ ಮತ್ತು ಮೋದಿ ವಿರೋಧಿ ಭಾವನೆಗಳು ಬೇರೂರಿವೆ. ಅವರು ನಿರಂತರವಾಗಿ ದೇಶದ ಪ್ರತಿಷ್ಠೆಯನ್ನು ಕೆಡಿಸಲು ಪ್ರಯತ್ನಿಸುತ್ತಿದ್ದಾರೆ. ದೇಶದ ಪ್ರತಿಷ್ಠೆಗೆ ಧಕ್ಕೆ ತರುವುದು ದೇಶದ್ರೋಹಕ್ಕೆ ಸಮ ಸಂವಿಧಾನದ ಮೇಲೆ ದಾಳಿ ಮಾಡಿದವರು ಯಾರು? ತುರ್ತುಪರಿಸ್ಥಿತಿ ಹೇರಿದವರು ಯಾರು? ಅವರು ಭಾರತ್ ಜೋಡೋ ಯಾತ್ರೆಗೆ ಹೋಗುತ್ತಾರೆ ಆದರೆ ಅವರು ಭಾರತದೊಂದಿಗೆ ಅಥವಾ ಭಾರತದ ಜನರೊಂದಿಗೆ ಒಂದಾಗಲು ಸಾಧ್ಯವಿಲ್ಲ,” ಎಂದು ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಚೀನಾವನ್ನು ಹೊಗಳಿ ಭಾರತವನ್ನು ಕೀಳಾಗಿ ಬಿಂಬಿಸುತ್ತಾರೆ: ಹಿಮಂತ ಬಿಸ್ವಾ ಶರ್ಮಾ

ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಪಕ್ಷವು ತಮ್ಮ ಸುಳ್ಳು ಪ್ರಚಾರ ಬಹಿರಂಗಗೊಳ್ಳುವ ಭಯದಲ್ಲಿದೆ ಎಂದಿದ್ದಾರೆ.

ಇಂದು ಎಲ್ಲಿಯಾದರೂ ಭಯವಿದ್ದರೆ ಅದು ಕಾಂಗ್ರೆಸ್ ಪಕ್ಷದೊಳಗೇ ಇದೆ, ಕಾಂಗ್ರೆಸ್‌ನ ಮಹಿಳೆಯೊಬ್ಬರು ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದಾಗ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ, ಕಾಂಗ್ರೆಸ್ ಕಾರ್ಯಕರ್ತರು ಇಂದು ಭಯಭೀತರಾಗಿದ್ದಾರೆ. ಏಕೆಂದರೆ ಅದರ ಹೈಕಮಾಂಡ್ ಕೇವಲ ರೇಪಿಸ್ಟ್‌ಗಳನ್ನು ಅಥವಾ ರೇಪ್ ಆರೋಪಿಗಳನ್ನು ರಕ್ಷಿಸುತ್ತದೆ. 2014, 2019 ರಲ್ಲಿ ಮೋದಿ ನೇತೃತ್ವದ ಬಿಜೆಪಿ ಮತ್ತು 2024 ರಲ್ಲಿ ಮೋದಿ ನೇತೃತ್ವದ ಎನ್‌ಡಿಎ ಅವರ ಸುಳ್ಳು ಪ್ರಚಾರವು ಬಹಿರಂಗಗೊಳ್ಳುತ್ತದೆ ಎಂದು ಕಾಂಗ್ರೆಸ್ ಪಕ್ಷವು ಇಂದು ಹೆದರುತ್ತಿದೆ ಎಂದಿದ್ದಾರೆ ಭಂಡಾರಿ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ