ಮಹಾರಾಷ್ಟ್ರ ಗೃಹ ಸಚಿವರ ರಾಜೀನಾಮೆಗೆ ದೇವೇಂದ್ರ ಫಡ್ನವಿಸ್ ಒತ್ತಾಯ; ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್ಮುಖ್
ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಮುಂಬೈ: ಮಾಜಿ ಪೊಲೀಸ್ ಆಯುಕ್ತ ಹಾಗೂ ಹಾಲಿ ಕಮಾಂಡೆಂಟ್ ಜನರಲ್ ಆಫ್ ಹೋಮ್ ಗಾರ್ಡ್ಸ್ ಆಗಿರುವ ಪರಮ್ವೀರ್ ಸಿಂಗ್, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಸದ್ಯ ಸಸ್ಪೆಂಡ್ ಆಗಿರುವ ಎಎಸ್ಐ ಸಚಿನ್ ವಾಜೆ ಬಳಿ ಬಾರ್ ಮತ್ತು ರೆಸ್ಟೊರೆಂಟ್ಗಳಿಂದ ಪ್ರತಿ ತಿಂಗಳು 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಆರೋಪಿಸಿರುವ ಬೆನ್ನಲ್ಲೇ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅನಿಲ್ ದೇಶ್ಮುಖ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಪರಮ್ವೀರ್ ಸಿಂಗ್ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಗೃಹ ಸಚಿವ, ಎನ್ಸಿಪಿ ನಾಯಕ ಅನಿಲ್ ದೇಶ್ಮುಖ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಪ್ರತಿ ತಿಂಗಳು 100 ಕೋಟಿ ರೂಪಾಯಿ ಸಂಗ್ರಹಿಸಲು ಹೇಳಿದ್ದರು ಎಂದು ಭ್ರಷ್ಟಾಚಾರದ ಆರೋಪ ಮಾಡಿದ್ದರು.
ಈ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರೂ ಆಗಿರುವ ದೇವೇಂದ್ರ ಫಡ್ನವಿಸ್, ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಮುಖ್ಯಮಂತ್ರಿಗೆ ಅರಿವಿತ್ತು ಎಂದೂ ಪತ್ರದಲ್ಲಿ ಹೇಳಲಾಗಿದೆ. ಹಾಗಾಗ್ಯೂ ಯಾಕೆ ಅವರು ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಳಿದ್ದಾರೆ.
Interacting with media on serious allegations against Maharashtra Home Minister Anil Deshmukh ji. (Deferred Live) https://t.co/uv98bIexF7
— Devendra Fadnavis (@Dev_Fadnavis) March 20, 2021
ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್ಮುಖ್ ಆದರೆ, ಪರಮ್ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ.
ಪರಮ್ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.
ಪರಮ್ವೀರ್ ಸಿಂಗ್ ಪತ್ರದ ಸಂಪೂರ್ಣ ವಿವರ ಇಲ್ಲಿದೆ: ಪರಮ್ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ
ಇದನ್ನೂ ಓದಿ: ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್ವೀರ್ ಸಿಂಗ್ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..
Published On - 10:19 pm, Sat, 20 March 21