ಮಹಾರಾಷ್ಟ್ರ ಗೃಹ ಸಚಿವರ ರಾಜೀನಾಮೆಗೆ ದೇವೇಂದ್ರ ಫಡ್ನವಿಸ್ ಒತ್ತಾಯ; ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್

| Updated By: ganapathi bhat

Updated on: Apr 06, 2022 | 6:57 PM

ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವರ ರಾಜೀನಾಮೆಗೆ ದೇವೇಂದ್ರ ಫಡ್ನವಿಸ್ ಒತ್ತಾಯ; ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್
ದೇವೇಂದ್ರ ಫಡ್ನವಿಸ್
Follow us on

ಮುಂಬೈ: ಮಾಜಿ ಪೊಲೀಸ್ ಆಯುಕ್ತ ಹಾಗೂ ಹಾಲಿ ಕಮಾಂಡೆಂಟ್ ಜನರಲ್ ಆಫ್ ಹೋಮ್ ಗಾರ್ಡ್ಸ್ ಆಗಿರುವ ಪರಮ್​ವೀರ್ ಸಿಂಗ್, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಸದ್ಯ ಸಸ್ಪೆಂಡ್ ಆಗಿರುವ ಎಎಸ್ಐ​ ಸಚಿನ್ ವಾಜೆ ಬಳಿ ಬಾರ್ ಮತ್ತು ರೆಸ್ಟೊರೆಂಟ್​​ಗಳಿಂದ ಪ್ರತಿ ತಿಂಗಳು 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಆರೋಪಿಸಿರುವ ಬೆನ್ನಲ್ಲೇ ಬಿಜೆಪಿ ನಾಯಕ ಹಾಗೂ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪರಮ್​ವೀರ್ ಸಿಂಗ್ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಬರೆದ ಪತ್ರದಲ್ಲಿ ಗೃಹ ಸಚಿವ, ಎನ್​ಸಿಪಿ ನಾಯಕ ಅನಿಲ್ ದೇಶ್​ಮುಖ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಪ್ರತಿ ತಿಂಗಳು 100 ಕೋಟಿ ರೂಪಾಯಿ ಸಂಗ್ರಹಿಸಲು ಹೇಳಿದ್ದರು ಎಂದು ಭ್ರಷ್ಟಾಚಾರದ ಆರೋಪ ಮಾಡಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರೂ ಆಗಿರುವ ದೇವೇಂದ್ರ ಫಡ್ನವಿಸ್, ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಮುಖ್ಯಮಂತ್ರಿಗೆ ಅರಿವಿತ್ತು ಎಂದೂ ಪತ್ರದಲ್ಲಿ ಹೇಳಲಾಗಿದೆ. ಹಾಗಾಗ್ಯೂ ಯಾಕೆ ಅವರು ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಳಿದ್ದಾರೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್
ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ.

ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಪರಮ್​ವೀರ್ ಸಿಂಗ್ ಪತ್ರದ ಸಂಪೂರ್ಣ ವಿವರ ಇಲ್ಲಿದೆ: ಪರಮ್​ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ

ಇದನ್ನೂ ಓದಿ: ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 10:19 pm, Sat, 20 March 21