BJP leader Ganpat Gaikwad: ಶಿಂಧೆ ಬಣದ ಮುಖಂಡನ ಮೇಲೆ ಗುಂಡಿನ ದಾಳಿ: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಬಂಧನ

|

Updated on: Feb 03, 2024 | 10:51 AM

ಮಹಾರಾಷ್ಟ್ರದ ಆಡಳಿತಾರೂಢ ಶಿಂಧೆ ಬಣದ ಶಿವ ಸೇನೆ ಮತ್ತು ಬಿಜೆಪಿ ನಾಯಕರೇ ಪರಸ್ಪರ ಗಂಭೀರ ಸಂಘರ್ಷ ಮಾಡಿಕೊಂಡಿದ್ದಾರೆ. ಶಿಂಧೆ ಬಣದ ಶಾಸಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದಲ್ಲಿ ಭಾರತೀಯ ಜನತಾ ಪಕ್ಷದ ಶಾಸಕ ಗಣಪತ್ ಗಾಯಕ್ವಾಡ್ ಸೇರಿ ಮೂವರನ್ನು ಬಂಧಿಸಲಾಗಿದೆ.

BJP leader Ganpat Gaikwad: ಶಿಂಧೆ ಬಣದ ಮುಖಂಡನ ಮೇಲೆ ಗುಂಡಿನ ದಾಳಿ: ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಬಂಧನ
ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್
Follow us on

ಮುಂಬೈ, ಫೆಬ್ರವರಿ 3: ಶಿವಸೇನೆ (Shiv Sena) (ಏಕನಾಥ್ ಶಿಂಧೆ) ಬಣದ ನಾಯಕ ಮಹೇಶ್ ಗಾಯಕ್ವಾಡ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದಲ್ಲಿ ಭಾರತೀಯ ಜನತಾ ಪಕ್ಷದ (BJP) ಶಾಸಕ ಗಣಪತ್ ಗಾಯಕ್ವಾಡ್ (Ganpat Gaikwad) ಅವರನ್ನು ಬಂಧಿಸಲಾಗಿದೆ. ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿತ್ತು. ಗಣಪತ್ ಗಾಯಕ್ವಾಡ್ ಅವರನ್ನು ಬಂಧಿಸಲಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತಡರಾತ್ರಿ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಒಟ್ಟು 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶಾಸಕ ಸೇರಿದಂತೆ 3 ಮಂದಿಯನ್ನು ಬಂಧಿಸಲಾಗಿದೆ. ಉಳಿದ 3 ಮಂದಿ ಸದ್ಯ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹೇಶ್ ಬೆಂಬಲಿಗರು ನನ್ನ ಮಗನ ಮೇಲೆ ಅನುಚಿತವಾಗಿ ವರ್ತಿಸಿದ್ದು, ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದೆ ಎಂದು ಗಾಯಕ್ವಾಡ್ ಸ್ಪಷ್ಟನೆ ನೀಡಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮಹೇಶ್ ಗಾಯಕವಾಡ್ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ರಸ್ತೆಗಳಲ್ಲಿ ಜಮಾಯಿಸಿದ್ದರು.

ಥಾಣೆಯ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಆ ಪ್ರದೇಶದಲ್ಲಿ ಗಣನೀಯ ಪ್ರಭಾವ ಹೊಂದಿದ್ದಾರೆ. ಅವರು ಮುಂಬೈನಿಂದ ಸುಮಾರು 40 ಕಿಮೀ ದೂರದಲ್ಲಿರುವ ಕಲ್ಯಾಣ್‌ನ ಕಲ್ಯಾಣ್ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಅವರ ಪಕ್ಷವು ಮಹಾರಾಷ್ಟ್ರ ಸರ್ಕಾರದಲ್ಲಿ ಶಿಂಧೆ ಬಣದ ಶಿವ ಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ.

ನಡೆದಿದ್ದೇನು?

ವಿವಾದವೊಂದಕ್ಕೆ ಸಂಬಂಧಿಸಿದ ಚರ್ಚೆಗಾಗಿ ಇಬ್ಬರೂ ರಾಜಕೀಯ ನಾಯಕರು ಕಲ್ಯಾಣ್ ಪೂರ್ವ ಕ್ಷೇತ್ರದ ಹಿಲ್ ಲೈನ್ ಪೊಲೀಸ್ ಠಾಣೆಗೆ ತೆರಳಿದಾಗ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಆದರೆ, ಪರಿಸ್ಥಿತಿ ನಿಯಂತ್ರಣ ತಪ್ಪಿ ಪೊಲೀಸ್ ಠಾಣೆಯ ಆವರಣದಲ್ಲಿ ಗುಂಡಿನ ಚಕಮಕಿ ನಡೆಯಿತು. ಮಹೇಶ್ ಗಾಯಕ್ವಾಡ್ ಅವರನ್ನು ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ನಾಲ್ಕು ಗುಂಡೇಟು ತಗುಲಿತ್ತು. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ. ಮತ್ತೋರ್ವ ಗಾಯಾಳು ರಾಹುಲ್ ಪಾಟೀಲ್ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಶಿಂಧೆ ಬಣದ ಮುಖಂಡನ ಮೇಲೆ ಬಿಜೆಪಿ ಶಾಸಕನ ಬೆಂಬಲಿಗರಿಂದ ಗುಂಡಿನ ದಾಳಿ

ರಾಹುಲ್ ಪಾಟೀಲ್ ಅವರ ದೇಹದಲ್ಲಿ ಐದು ಗುಂಡುಗಳು ಪತ್ತೆಯಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ