Himanta Biswa Sarma: ಅಸ್ಸಾಂನ ಸಿಎಂ ಹಿಮಂತ ಬಿಸ್ವ ಶರ್ಮಾ ಪ್ರಮಾಣವಚನ ಸ್ವೀಕಾರ; ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿ
ಅಸ್ಸಾಂ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 2ರಂದು ಹೊರಬಿದ್ದಿದ್ದರೂ ಇಲ್ಲಿ ಮುಖ್ಯಮಂತ್ರಿ ಆಯ್ಕೆ ಸ್ವಲ್ಪ ತೊಡಕಾಗಿತ್ತು. ಈ ಹಿಂದಿನ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಮತ್ತು ಹಿಮಂತ ಬಿಸ್ವ ಶರ್ಮಾ ನಡುವೆ ತೀವ್ರ ಪೈಪೋಟಿ ಇತ್ತು.
ಗುವಾಹಟಿ: ಅಸ್ಸಾಂನಲ್ಲಿ ಬಿಜೆಪಿ ನಾಯಕ ಹಿಮಂತ ಬಿಸ್ವ ಶರ್ಮಾ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅಲ್ಲಿನ ಶ್ರೀಮಂತ ಶಂಕರದೇವ ಕಲಾಕ್ಷೇತ್ರದಲ್ಲಿ ಸರಳವಾಗಿಯೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಜಗದೀಶ್ ಮುಖಿ ಪ್ರಮಾಣವಚನ ಬೋಧಿಸಿದರು. ಹಿಮಂತ ಬಿಸ್ವ ಶರ್ಮಾ ಅವರು ಅಸ್ಸಾಂನ 15ನೇ ಮುಖ್ಯಮಂತ್ರಿ.
ಅಸ್ಸಾಂ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 2ರಂದು ಹೊರಬಿದ್ದಿದ್ದರೂ ಇಲ್ಲಿ ಮುಖ್ಯಮಂತ್ರಿ ಆಯ್ಕೆ ಸ್ವಲ್ಪ ತೊಡಕಾಗಿತ್ತು. ಈ ಹಿಂದಿನ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಮತ್ತು ಹಿಮಂತ ಬಿಸ್ವ ಶರ್ಮಾ ನಡುವೆ ತೀವ್ರ ಪೈಪೋಟಿ ಇತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರ ಬಿಜೆಪಿ ನಾಯಕರಾದ ಜೆ.ಪಿ.ನಡ್ಡಾ, ಅಮಿತ್ ಶಾ ಇವರಿಬ್ಬರೊಂದಿಗೂ ಮಾತುಕತೆ ನಡೆಸಿದ್ದರು. ಅಂತಿಮವಾಗಿ ಹಿಮಂತ ಬಿಸ್ವ ಶರ್ಮಾರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿದ್ದರು.
ಇಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾರೊಂದಿಗೆ ಕ್ಯಾಬಿನೆಟ್ನ 13 ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಅಸ್ಸಾಂ ಮಾಜಿ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು. ಅಲ್ಲದೆ, ತ್ರಿಪುರ ಸಿಎಂ ಬಿಪ್ಲಬ್ ದೇಬ್, ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಮಣಿಪುರ ಸಿಎಂ ಬಿರೆನ್ ದೇಬ್, ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೊ ಕೂಡ ಹಾಜರಿದ್ದರು.
ಮುಖ್ಯಮಂತ್ರಿಯಾಗಿ ಆಯ್ಕೆ ಆಗುತ್ತಿದ್ದಂತೆ ಹಿಮಂತ ಬಿಸ್ವ ಶರ್ಮಾ ಭಾನುವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ, ತನ್ನ ಕ್ಯಾಬಿನೆಟ್ನ ಸಚಿವರ ಲಿಸ್ಟ್ ಕೊಟ್ಟಿದ್ದರು.
Himanta Biswa Sarma takes oath as the Chief Minister of Assam. He is being administered the oath by Governor Jagdish Mukhi. BJP national president JP Nadda and other leaders present at the ceremony. pic.twitter.com/1bZQVPlWsd
— ANI (@ANI) May 10, 2021
ಇದನ್ನೂ ಓದಿ: Himanta Biswa Sarma: ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಶರ್ಮಾ ಇಂದು ಪ್ರಮಾಣ ವಚನ