ನಾಮಪತ್ರ ಹಿಂಪಡೆದ ಇಂದೋರ್‌ ಕಾಂಗ್ರೆಸ್ ಅಭ್ಯರ್ಥಿ, ಪಕ್ಷಕ್ಕೆ ಸ್ವಾಗತ ಎಂದ ಬಿಜೆಪಿ ನಾಯಕ

|

Updated on: Apr 29, 2024 | 1:01 PM

ಮಧ್ಯಪ್ರದೇಶದ ಇಂದೋರ್​​ ಲೋಕಸಭೆ ಕ್ಷೇತ್ರದ ಕಾಂಗ್ರಸ್​​​ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ತಮ್ಮ ನಾಮಪತ್ರವನ್ನು ವಾಪಸ್ಸು ಪಡೆದಿದ್ದಾರೆ. ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಬಿಜೆಪಿಗೆ ಸೂರತ್​​​ನಂತೆ ಇಲ್ಲಿಯು ಗೆಲ್ಲುವು ಸಾಧಿಸುವ ಸಾಧ್ಯತೆ ಎಂದು ಹೇಳಲಾಗಿದೆ. ಇದರ ಜತೆಗೆ ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಎಕ್ಸ್​​​ನಲ್ಲಿ 'ಪಕ್ಷಕ್ಕೆ ಸ್ವಾಗತ' ಎಂದು ಅಕ್ಷಯ್ ಕಾಂತಿ ಬಾಮ್ ಅವರ ಜತೆಗಿನ ಫೋಟೋವೊಂದು ಎಕ್ಸ್​​​ನಲ್ಲಿ ಹಂಚಿಕೊಂಡಿದ್ದಾರೆ.

ನಾಮಪತ್ರ ಹಿಂಪಡೆದ ಇಂದೋರ್‌ ಕಾಂಗ್ರೆಸ್ ಅಭ್ಯರ್ಥಿ, ಪಕ್ಷಕ್ಕೆ ಸ್ವಾಗತ ಎಂದ ಬಿಜೆಪಿ ನಾಯಕ
Follow us on

ಮಧ್ಯಪ್ರದೇಶ, ಏ.29: ಮಧ್ಯಪ್ರದೇಶದ (madhya pradesh) ಇಂದೋರ್‌ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್​​​​ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಇದರ ಜತೆಗೆ ಬಿಜೆಪಿ ಅವರು ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಎಕ್ಸ್​​​ನಲ್ಲಿ ‘ಪಕ್ಷಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್‌ನ ಇಂದೋರ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಂಬ್ ಅವರನ್ನು ಬಿಜೆಪಿ ಸ್ವಾಗತಿಸುತ್ತದೆ” ಎಂದು ಹಿಂದಿಯಲ್ಲಿ ವಿಜಯವರ್ಗಿಯ ಎಕ್ಸ್​​ ಬರೆದುಕೊಂಡಿದ್ದಾರೆ. ಇದೀಗ ಸೂರತ್​​ನಂತೆ ಇಲ್ಲಿಯು ಬಿಜೆಪಿ ಅಭ್ಯರ್ಥಿಯೇ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾಂಗ್ರೆಸ್​​​​ ನಾಯಕನ ಈ ನಡೆ ಕಾಂಗ್ರೆಸ್​​​ ಪಕ್ಷ ಮುಜುಗರ ಉಂಟು ಮಾಡಿದೆ.

ಶುಕ್ರವಾರ, ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಡಿಯ ಸೊರೊ ಶಾಸಕ ಪರಶುರಾಮ್ ಧಾಡಾ ಬಿಜೆಪಿಗೆ ಮತ್ತೆ ಬಂದಿದ್ದಾರೆ. ಇದರ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ. ಇದಕ್ಕೂ ಮುನ್ನ ಏಪ್ರಿಲ್ 27 ರಂದು ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸಿಖ್ಖರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಸಹಾಯ ಮಾಡಲು ಸರ್ಕಾರ ಕೈಗೊಂಡಿರುವ ಹಲವಾರು ಕ್ರಮಗಳನ್ನು ಉಲ್ಲೇಖಿಸಿದ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಯಾರಾದರೂ ನಿಜವಾಗಿಯೂ ಈ ಸಮುದಾಯಕ್ಕಾಗಿ ಕೆಲಸ ಮಾಡಿದ್ದರೆ ಎಂದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ಎಂದು ಹೇಳಿದ್ದಾರೆ. 1,000 ಕ್ಕೂ ಹೆಚ್ಚು ಸಿಖ್ಖರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್

ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು

ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಈ ಮೂಲಕ ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದೆ. ಗುಜರಾತ್‌ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ. ಚುನಾವಣೆಗೂ ಮುನ್ನವೇ ಸೂರತ್‌ ಕ್ಷೇತ್ರ ಬಿಜೆಪಿ ಖಾತೆಯನ್ನು ತೆರೆದಿದೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದರು. ನಿನ್ನೆ ಸೂರತ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ಫಾರಂ ಕೂಡ ರದ್ದಾಗಿತ್ತು. ಅದರ ನಂತರ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದರು, ಹಾಗಾಗಿ ಮುಖೇಶ್​ ದಲಾಲ್ ಅವಿರೋಧವಾಗಿ ಸಂಸದನಾಗಿ ಆಯ್ಕೆಯಾಗಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:42 pm, Mon, 29 April 24