ಮಣಿಪುರ ರಾಜ್ಯಪಾಲರಾಗಿ ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದ ಲಾ. ಗಣೇಶನ್​ ನೇಮಕ

ಆರ್​ಎಸ್​ಎಸ್ ಮೂಲದವರಾದ ಗಣೇಶನ್​ ನಂತರ ತಮಿಳುನಾಡು ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಅದಾದ ಬಳಿಕ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಮಣಿಪುರ ರಾಜ್ಯಪಾಲರಾಗಿ ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದ ಲಾ. ಗಣೇಶನ್​ ನೇಮಕ
ಲಾ ಗಣೇಶನ್​
Follow us
TV9 Web
| Updated By: Lakshmi Hegde

Updated on:Aug 22, 2021 | 12:42 PM

ಮಣಿಪುರದ ರಾಜ್ಯಪಾಲರನ್ನಾಗಿ ಲಾ. ಗಣೇಶನ್​ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್​ ನೇಮಕ ಮಾಡಿದ್ದಾರೆ. ಬಿಜೆಪಿ ರಾಜ್ಯಸಭಾ ಸದಸ್ಯರು ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಗಣೇಶನ್​ ಅವರು ಇಂದು ಮಣಿಪುರದ 17ನೇ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.  ಬಿಜೆಪಿಯ ಹಲವು ಹುದ್ದೆಗಳನ್ನು ಇವರು ನಿಭಾಯಿಸಿದ್ದಾರೆ. 2016ರಲ್ಲಿ ಮಣಿಪುರದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದ ನಜ್ಮಾ ಹೆಪ್ಟುಲ್ಲಾ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ, ಸಿಕ್ಕಿಂ ರಾಜ್ಯಪಾಲ ಗಂಗಾ ಪ್ರಸಾದ್ ಚೌರಾಸಿಯಾ ಮಣಿಪುರದ ರಾಜ್ಯಪಾಲರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದರು. ಅದಾದ ಒಂದು ವಾರದ ಬಳಿಕ ಲಾ.ಗಣೇಶನ್​ ನೇಮಕಗೊಂಡಿದ್ದಾರೆ. 

ಲಾ.ಗಣೇಶನ್​ ಅವರು 1945ರ ಫೆಬ್ರವರಿ 16ರಂದು ತಮಿಳುನಾಡಿನಲ್ಲಿ ಹುಟ್ಟಿದ್ದಾರೆ. ಆರ್​ಎಸ್​ಎಸ್ ಮೂಲದವರಾದ ಗಣೇಶನ್​ ನಂತರ ತಮಿಳುನಾಡು ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಅದಾದ ಬಳಿಕ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ನಂತರ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.  ಇನ್ನೊಂದು ಆಸಕ್ತಿದಾಯಕ ವಿಷಯವೆಂದರೆ, 2016ರಲ್ಲಿ ಮಧ್ಯಪ್ರದೇಶದಿಂದ ಗಣೇಶನ್​ ಅವರು ರಾಜ್ಯಸಭೆಗೆ ಹೋಗುವಾಗಲೂ ಇದೇ ನಜ್ಮಾ ಹೆಪ್ಟುಲ್ಲಾ ಬದಲಿಗೇ ಹೋಗಿದ್ದರು.

ಇದನ್ನೂ ಓದಿ: ತಾಲಿಬಾನಿಗಳ ಕ್ರೌರ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಸಲ್ಮಾನ್​ ಖಾನ್​ ನಾಯಕಿ; 20 ವರ್ಷ ಹಿಂದಕ್ಕೆ ಹೋದ ಆಪ್ಘನ್​

ಸುಶಾಂತ್​ ಸಿಂಗ್​ಗೆ ರಕ್ಷಾ ಬಂಧನದ ಶುಭಾಶಯ ಕೋರಿದ ಸಹೋದರಿ ಶ್ವೇತಾ; ಚಿತ್ರ ನೋಡಿ ಭಾವುಕರಾದ ಅಭಿಮಾನಿಗಳು

(BJP Leader La Ganesan Appointed as governor of Manipur)

Published On - 12:12 pm, Sun, 22 August 21

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ