ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ: ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಅವರನ್ನು ಹತ್ಯೆಗೈದ ಆರೋಪದ ಮೇಲೆ 15 ಮಂದಿ ಪಿಎಫ್‌ಐ ಸದಸ್ಯರಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ಶಿಕ್ಷೆ ವಿಧಿಸಿದೆ. 2021 ರ ಡಿಸೆಂಬರ್‌ನಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ದೊಂದಿಗೆ ಸಂಬಂಧ ಹೊಂದಿರುವ 15 ಮಂದಿಗೆ ಕೇರಳ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಿ ಶ್ರೀದೇವಿ ಅವರು ಈ ಶಿಕ್ಷೆ ವಿಧಿಸಿದ್ದಾರೆ.

ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ: ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ
ರಂಜಿತ್

Updated on: Jan 30, 2024 | 12:31 PM

ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್(Ranjith Sreenivasan) ಅವರನ್ನು ಹತ್ಯೆಗೈದ ಆರೋಪದ ಮೇಲೆ 15 ಮಂದಿ ಪಿಎಫ್‌ಐ ಸದಸ್ಯರಿಗೆ ಕೇರಳ ನ್ಯಾಯಾಲಯ ಮಂಗಳವಾರ ಮರಣದಂಡನೆ ಶಿಕ್ಷೆ ವಿಧಿಸಿದೆ. 2021 ರ ಡಿಸೆಂಬರ್‌ನಲ್ಲಿ ಅಲಪ್ಪುಳ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಒಬಿಸಿ ವಿಭಾಗದ ನಾಯಕ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಈಗ ನಿಷೇಧಿತ ಇಸ್ಲಾಂ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ದೊಂದಿಗೆ ಸಂಬಂಧ ಹೊಂದಿರುವ 15 ಮಂದಿಗೆ ಕೇರಳ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ವಿಜಿ ಶ್ರೀದೇವಿ ಅವರು ಈ ಶಿಕ್ಷೆ ವಿಧಿಸಿದ್ದಾರೆ.

ಪ್ರಾಸಿಕ್ಯೂಷನ್ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ಕೋರಿತ್ತು. ವ್ಯಕ್ತಿಯನ್ನು ಮಗು, ಹೆಂಡತಿ ಮುಂದೆಯೇ ಹತ್ಯೆಗೈಯಲಾಗಿತ್ತು.

ಕೇರಳದಲ್ಲಿ ಇದೇ ಮೊದಲ ಬಾರಿಗೆ ಒಂದೇ ಪ್ರಕರಣದಲ್ಲಿ ಇಷ್ಟು ಮಂದಿಗೆ ಮರಣದಂಡನೆ ವಿಧಿಸಲಾಗಿದೆ. ಜನವರಿ 20 ರಂದು, ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಪ್ರಕರಣದಲ್ಲಿ ಪಿಎಫ್‌ಐ-ಎಸ್‌ಡಿಪಿಐಗೆ ನಂಟು ಹೊಂದಿರುವ 15 ಜನರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು.ನ್ಯಾಯಾಲಯ ಇಂದು ಶಿಕ್ಷೆಯನ್ನು ಪ್ರಕಟಿಸಿದೆ.

ಮೊದಲ ಎಂಟು ಆರೋಪಿಗಳ ವಿರುದ್ಧ ಕೊಲೆಯ ಅಪರಾಧ ಸಾಬೀತಾಗಿದೆ ಮತ್ತು ಇತರ ಆರೋಪಿಗಳು ಕ್ರಿಮಿನಲ್ ಪಿತೂರಿಯಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯವು ಕಂಡುಹಿಡಿದಿದೆ.

ನಿಜಾಮ್, ಅಜ್ಮಲ್, ಅನೂಪ್, ಎಂಡಿ ಅಸ್ಲಾಂ, ಸಲಾಂ, ಅಬ್ದುಲ್ ಕಲಾಂ, ಸಫರುದ್ದೀನ್, ಮುನ್ಶಾದ್, ಜಜೀಬ್, ನವಾಜ್, ಶೆಮೀರ್, ನಜೀರ್, ಜಾಕೀರ್ ಹುಸೇನ್, ಶಾಜಿ, ಶಮ್ನಾಜ್ ಶಿಕ್ಷೆಗೊಳಗಾದವರು.

2021 ರ ಡಿಸೆಂಬರ್ 19ರಂದು ಬೆಳಗ್ಗೆ, ಬಿಜೆಪಿ ಒಬಿಸಿ ಮೋರ್ಚಾದ ನಾಯಕರಾಗಿದ್ದ ವಕೀಲ ರಂಜಿತ್ ಶ್ರೀನಿವಾಸನ್ ಅವರನ್ನು ಎಸ್‌ಡಿಪಿಐ ಹತ್ಯೆ ಮಾಡಿದ ಕೆಲವೇ ಗಂಟೆಗಳ ನಂತರ ಅಲಪ್ಪುಳದ ಅವರ ಮನೆಯಲ್ಲಿ ಕುಟುಂಬ ಸದಸ್ಯರ ಎದುರೇ ಹತ್ಯೆಮಾಡಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:25 pm, Tue, 30 January 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us