AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh Firing: ಮಾರ್ಕೆಟ್​ನಲ್ಲಿ ಬಿಜೆಪಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಸದಾ ಜನರಿಂದ ತುಂಬಿ ತುಳುಕುತ್ತಿರುವ ಮಧ್ಯಪ್ರದೇಶದ ಮಾರ್ಕೆಟ್ ಒಂದರ ಬಳಿ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ.

Madhya Pradesh Firing: ಮಾರ್ಕೆಟ್​ನಲ್ಲಿ ಬಿಜೆಪಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಸಿಸಿಟಿವಿ ದೃಶ್ಯImage Credit source: NDTV
TV9 Web
| Edited By: |

Updated on: Jan 09, 2023 | 7:46 AM

Share

ಸದಾ ಜನರಿಂದ ತುಂಬಿ ತುಳುಕುತ್ತಿರುವ ಮಧ್ಯಪ್ರದೇಶದ ಮಾರ್ಕೆಟ್ ಒಂದರ ಬಳಿ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ. ಮಧ್ಯಪ್ರದೇಶದ ಮೊರೆನಾದಲ್ಲಿರುವ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ, ಬೈಕ್​ನಲ್ಲಿ ಬಂದ ಮೂವರು ಅಪರಿಚಿತರು ಗುಂಡಿನ ದಾಳಿ ನಡೆಸಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಿಜೆಪಿ ನಾಯಕ ಸಂತೋಷ್ ಕುಮಾರ್ ಶರ್ಮಾ ಆಭರಣ ವ್ಯಾಪಾರಿಯೂ ಕೂಡ ಆಗಿದ್ದಾರೆ. ಗುಂಡಿನ ದಾಳಿ ನಡೆದ ವೇಳೆ ಅವರು ತಮ್ಮ ಆಭರಣ ಅಂಗಡಿಯಲ್ಲಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಸಂತೋಷ್ ಕುಮಾರ್ ಸ್ನೇಹಿತರೊಂದಿಗೆ ಮಾತನಾಡುತ್ತಾ ಕುಳಿತಿರುವ ಸಂದರ್ಭದಲ್ಲಿ ದಾಳಿ ನಡೆದಿದೆ, ಅವರು ತನ್ನನ್ನು ತಾನು ರಕ್ಷಿಸಿಕೊಳ್ಳಲು ಕೆಳಗೆ ಬಾಗಿದ್ದರು.

ಒಂದೇ ಬೈಕ್‌ನಲ್ಲಿ ಮುಖವಾಡ ಧರಿಸಿಕೊಂಡು ಬಂದ ಮೂವರು ಗುಂಡು ಹಾರಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಮಧ್ಯದಲ್ಲಿ ಕುಳಿತವನು ತನ್ನ ಎರಡೂ ಕೈಗಳಿಂದ ಆಭರಣ ವ್ಯಾಪಾರಿ ಸಂತೋಷ್ ಕುಮಾರ್ ಶರ್ಮಾ ಮೇಲೆ ಗುಂಡು ಹಾರಿಸಿದ್ದಾನೆ.

ಈ ಗುಂಡಿನ ದಾಳಿ ನಡೆದ ಸಮಯದಲ್ಲಿ ಅಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕಾಣಿಸಿಕೊಂಡಿದ್ದು, ಜತೆಗೆ ಸ್ವಲ್ಪ ದೂರದಲ್ಲಿ ಮತ್ತೊಬ್ಬ ನಿಂತಿರುವುದು ಕಂಡುಬಂದಿದೆ. ಗುಂಡಿನ ದಾಳಿ ನಡೆದ ಕೆಲ ಕ್ಷಣಗಳಲ್ಲೇ ಸ್ಥಳದಲ್ಲಿ ಸಾರ್ವಜನಿಕರು ಬಂದು ಜಮಾಯಿಸಿದ್ದರು.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ, ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ದಾಳಿಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಆರೋಪಿಗಳ ವಿರುದ್ಧ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್