BJP Leaders Meet: ಪ್ರಧಾನಿ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ಯುಸಿಸಿ, ವಿಧಾನಸಭೆ, ಲೋಕಸಭೆ ಚುನಾವಣೆ ಕುರಿತು ಗಹನವಾದ ಚರ್ಚೆ

|

Updated on: Jun 29, 2023 | 8:48 AM

ಪ್ರಧಾನಿ ನರೇಂದ್ರ ಮೋದಿ(Narendra Modi)ಅಧ್ಯಕ್ಷತೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ.

BJP Leaders Meet: ಪ್ರಧಾನಿ ನಿವಾಸದಲ್ಲಿ ಬಿಜೆಪಿ ನಾಯಕರ ಸಭೆ, ಯುಸಿಸಿ, ವಿಧಾನಸಭೆ, ಲೋಕಸಭೆ ಚುನಾವಣೆ ಕುರಿತು ಗಹನವಾದ ಚರ್ಚೆ
ನರೇಂದ್ರ ಮೋದಿ
Follow us on

ಪ್ರಧಾನಿ ನರೇಂದ್ರ ಮೋದಿ(Narendra Modi)ಅಧ್ಯಕ್ಷತೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಬುಧವಾರ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ  ಬಿಎಲ್ ಸಂತೋಷ್ ಕೂಡ ಉಪಸ್ಥಿತರಿದ್ದರು. ಆದರೆ ಮೂಲಗಳ ಪ್ರಕಾರ, ಐದು ರಾಜ್ಯಗಳಲ್ಲಿ ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಮುಂದಿನ ವರ್ಷ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹಲವಾರು ವಿಷಯಗಳನ್ನು ಸಮಗ್ರ ರೀತಿಯಲ್ಲಿ ಚರ್ಚಿಸಲಾಗಿದೆ.

ಕೇಂದ್ರ ಸಚಿವ ಸಂಪುಟ ಪುನಾರಚನೆಯಿಂದ ಹಿಡಿದು ಪಕ್ಷ ಸಂಘಟನೆಯಲ್ಲಿನ ಬದಲಾವಣೆಗಳು ಇದರಲ್ಲಿ ಸೇರಿವೆ. ಮೂಲಗಳ ಪ್ರಕಾರ, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿಷಯದ ಬಗ್ಗೆಯೂ ಆಳವಾಗಿ ಚರ್ಚಿಸಲಾಗಿದೆ.

ಮತ್ತಷ್ಟು ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಅನ್ವಯಿಸುತ್ತೆ ಇಲ್ಲಿದೆ ಮಾಹಿತಿ

ಪ್ರಧಾನಿ ಮೋದಿ ಅಮೆರಿಕದಿಂದ ಮರಳಿದ ಕೆಲವೇ ದಿನಗಳಲ್ಲಿ ಈ ಸಭೆ ನಡೆದಿದೆ. ಐದು ಗಂಟೆಗಳ ಕಾಲ ನಡೆದ ಸಭೆ ನಡೆದಿದೆ.
ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಈ ಪೈಕಿ ಮಧ್ಯಪ್ರದೇಶದಲ್ಲಿ ಮಾತ್ರ ಬಿಜೆಪಿ ಆಡಳಿತವಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವಿನ ಸೂತ್ರ ಹಿಡಿಯಲು ಏನು ಮಾಡಬೇಕು ಎನ್ನುವ ಕುರಿತ ಚರ್ಚೆಗಳು ನಡೆದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ