AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಪ್ರಣಾಳಿಕೆ ವಿರುದ್ಧ ಪೋಸ್ಟ್​, ಗೋವಾದಲ್ಲಿ ಭಿಕುಮಾತ್ರೆಯನ್ನು ಬಂಧಿಸಿದ ಬೆಂಗಳೂರಿನ ಸೈಬರ್​ ಕ್ರೈಂ ಪೊಲೀಸರು

ಕಾಂಗ್ರೆಸ್​ ಪ್ರಣಾಳಿಕೆ ವಿರುದ್ಧ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಭಿಕುಮಾತ್ರೆ ಎಂಬುವವರನ್ನು ಬೆಂಗಳೂರಿನ ಸೈಬರ್​ಕ್ರೈಂ ಪೊಲೀಸರು ಗೋವಾದಲ್ಲಿ ಭಿಕುಮಾತ್ರೆ ಎಂಬುವವರನ್ನು ಬಂಧಿಸಿದ್ದಾರೆ. ಇದೀಗ ಬಿಜೆಪಿ ನಾಯಕರು ಕಾಂಗ್ರೆಸ್​ ನಡೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿ ಭಿಕುಮಾತ್ರೆ ಪರವಾಗಿ ನಿಂತಿದ್ದಾರೆ.

ಕಾಂಗ್ರೆಸ್​ ಪ್ರಣಾಳಿಕೆ ವಿರುದ್ಧ ಪೋಸ್ಟ್​, ಗೋವಾದಲ್ಲಿ ಭಿಕುಮಾತ್ರೆಯನ್ನು ಬಂಧಿಸಿದ ಬೆಂಗಳೂರಿನ ಸೈಬರ್​ ಕ್ರೈಂ ಪೊಲೀಸರು
ಭಿಕುಮಾತ್ರೆ
ನಯನಾ ರಾಜೀವ್
|

Updated on:May 19, 2024 | 10:08 AM

Share

ಕಾಂಗ್ರೆಸ್ ಪ್ರಣಾಳಿಕೆ(Congress Manifesto) ವಿರುದ್ಧ ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ ಗೋವಾದಲ್ಲಿ ಭಿಕುಮಾತ್ರೆ ಎಂಬ ವ್ಯಕ್ತಿಯೊಬ್ಬನನ್ನು ಬಂಧಿಸಿದ ಕೆಲವೇ ಗಂಟೆಗಳ ನಂತರ, ಬಿಜೆಪಿ ನಾಯಕರು ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಟ್ವೀಟ್ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಗೋವಾ ಮೂಲದ ವ್ಯಕ್ತಿಯನ್ನು ಶನಿವಾರ ಬಂಧಿಸಿದ್ದಾರೆ .

ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ತಿರುಚಿ ಪೋಸ್ಟ್​ ಮಾಡಲಾಗಿದೆ ಎನ್ನುವ ಆರೋಪ ಮಾಡಲಾಗಿದೆ.

ಭಿಕುಮಾತ್ರೆ ಖಾತೆಯ ಅಡಿಯಲ್ಲಿ, ಏಪ್ರಿಲ್ 22 ರಂದು ಟ್ವೀಟ್ ಮಾಡಿದ್ದರು. ಕಾಂಗ್ರೆಸ್​ ಮ್ಯಾನಿಫೆಸ್ಟೋದಲ್ಲಿ ಮುಸ್ಲಿಂ​ ಎಂಬುದನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿಲ್ಲ, ಇದು ಎಸ್​ಸಿಇ/ಎಸ್​ಟಿಗಳನ್ನೂ ಒಳಗೊಂಡಿದೆ ಎಂದು ವಾದಿಸುತ್ತಿರುವವರ ಮುಖಕ್ಕೆ ಇದನ್ನು ಎಸೆಯಿರಿ ಎಂದು ವಿಡಿಯೋವೊಂದನ್ನು ಹಂಚಿಕೊಂಡಿದ್ದರು,  ಕಾಂಗ್ರೆಸ್​ ಹಿಂದೂಗಳ ಸಂಪತ್ತನ್ನು ಕಸಿದುಕೊಳ್ಳಲು ಬಯಸುತ್ತಿದೆ ಎಂದು ಟ್ವೀಟ್​ ಮಾಡಿ ಆಗಲೇ ಡಿಲೀಟ್​ ಕೂಡ ಮಾಡಿದ್ದರು.

ಬೆಂಗಳೂರಿನ ನಿವಾಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತ ಜೆ ಸರವಣನ್ ಅವರು ಏಪ್ರಿಲ್ 29 ರಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಸೈಬರ್ ಕ್ರೈಂ ಪೊಲೀಸರು ಎಕ್ಸ್ ಬಳಕೆದಾರರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ 66 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ಧರ್ಮಾಧಾರಿತ ಮತಯಾಚನೆ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೇಸ್‌ ಬುಕ್

ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನನ್ನ ತಂದೆಯನ್ನು ಬೆಂಗಳೂರು ಪೊಲೀಸರು ಇದ್ದಕ್ಕಿದ್ದಂತೆ ಬಂಧಿಸಿ ಕರೆದೊಯ್ದಿದ್ದಾರೆ, ಅವರನ್ನು ಬಿಡುಗಡೆ ಮಾಡಿ ಎಂದು ಮಗ ನಾಗೇಶ್​ ನಾಯ್ಕ್​ ಟ್ವೀಟ್​ ಮಾಡಿದ್ದಾರೆ.

ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ, ಕರ್ನಾಟಕ ಪೊಲೀಸರು ಗೋವಾದಲ್ಲಿ ಭಿಕುಮಾತ್ರೆಯನ್ನು ಬಂಧಿಸಿದ್ದಾರೆ. ನಾವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಅವರು ಎಲ್ಲಾ ಕಾನೂನು ಬೆಂಬಲವನ್ನು ನೀಡುತ್ತೇವೆ, ಕಾಂಗ್ರೆಸ್ ಅರಾಜಕತೆಯನ್ನು ಹೊರಹಾಕಿದೆ ಎಂದು ಬರೆದಿದ್ದಾರೆ.

ತೇಜಸ್ವಿ ಟ್ವೀಟ್​

ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪೋಸ್ಟ್​ ಮಾಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗಿದೆ. ನಾವು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಹೋರಾಡಲು ಸಿದ್ಧರಿದ್ದೇವೆ ಎಂದು ಬರೆದಿದ್ದಾರೆ.

ಸ್ಮೃತಿ ಇರಾನಿ ಟ್ವೀಟ್​

ತೇಜಸ್ವಿ ಸೂರ್ಯ ಬಳಿ ಮಾತನಾಡಿದ್ದೇವೆ, ನಿಮಗೆ ಎಲ್ಲಾ ಕಾನೂನು ಬೆಂಬಲವನ್ನು ನೀಡುವ ಭರವಸೆ ನೀಡುತ್ತೇವೆ ಎಂದು ಸ್ಮೃತಿ ಇರಾನಿ ಟ್ವೀಟ್​ ಮಾಡಿದ್ದಾರೆ. ಈ ವಿಚಾರವಾಗಿ ಭಿಕುಮಾತ್ರೆ ಪ್ರತಿಕ್ರಿಯೆ ನೀಡಿದ್ದು, ಸತ್ಯ ಹೇಳಿದ್ದಕ್ಕಾಗಿ ಕಾಂಗ್ರೆಸ್​ಗೆ ಕೋಪ ಬಂದಿದೆ, ಸತ್ಯಕ್ಕಾಗಿ ಹೋರಾಡಲು ನಾನು ಸಿದ್ಧನಿದ್ದೇನೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:04 am, Sun, 19 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ