ಬಿಜೆಪಿ ನಾಯಕರು ಶ್ರೀರಾಮ ಮಂದಿರದ ಹೆಸರಲ್ಲಿ ಹಣ ಸಂಗ್ರಹಿಸಿ, ಮದ್ಯ ಕುಡಿಯುತ್ತಿದ್ದಾರೆ: ಕಾಂಗ್ರೆಸ್ ಶಾಸಕನಿಂದ ಆರೋಪ

ಮಧ್ಯಪ್ರದೇಶ ಸಚಿವ ವಿಶ್ವಾಸ್​ ಸಾರಂಗ್​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷ ಯಾವತ್ತೂ ಶ್ರೀರಾಮನ ವಿರುದ್ಧವೇ ಮಾತನಾಡುತ್ತಿದೆ ಎಂದಿದ್ದಾರೆ.

ಬಿಜೆಪಿ ನಾಯಕರು ಶ್ರೀರಾಮ ಮಂದಿರದ ಹೆಸರಲ್ಲಿ ಹಣ ಸಂಗ್ರಹಿಸಿ, ಮದ್ಯ ಕುಡಿಯುತ್ತಿದ್ದಾರೆ: ಕಾಂಗ್ರೆಸ್ ಶಾಸಕನಿಂದ ಆರೋಪ
ಕಾಂತಿಲಾಲ್ ಭುರಿಯಾ
Follow us
Lakshmi Hegde
| Updated By: ರಾಜೇಶ್ ದುಗ್ಗುಮನೆ

Updated on: Feb 02, 2021 | 7:50 PM

ಭೋಪಾಲ್​: ಬಿಜೆಪಿ ನಾಯಕರು ಅಯೋಧ್ಯೆ ಶ್ರೀರಾಮ ಮಂದಿರದ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ, ಆ ಹಣದಲ್ಲಿ ಮದ್ಯ ಖರೀದಿ ಮಾಡಿ ಕುಡಿಯುತ್ತಿದ್ದಾರೆ ಎಂದು ಮಧ್ಯಪ್ರದೇಶದ ಜಬುವಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕಾಂತಿಲಾಲ್ ಭುರಿಯಾ ಆರೋಪಿಸಿದ್ದಾರೆ. ಈ ಮೂಲಕ ದೊಡ್ಡದಾದ ವಿವಾದವನ್ನು ಸೃಷ್ಟಿಸಿದ್ದಾರೆ.

ಬಿಜೆಪಿ ನಾಯಕರು ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ 2020ರಿಂದಲೂ ಕೋಟಿ ಕೋಟಿ ರೂಪಾಯಿ ಸಂಗ್ರಹ ಮಾಡಿದ್ದಾರೆ. ಆ ಹಣವೆಲ್ಲ ಎಲ್ಲಿ ಹೋಯಿತು? ಈ ನಾಯಕರು ಬೇರೇನೂ ಮಾಡುತ್ತಿಲ್ಲ. ಬೆಳಗ್ಗೆಯೆಲ್ಲ ಹಣ ಸಂಗ್ರಹ ಮಾಡಿ, ಅಂದೇ ರಾತ್ರಿ ಮದ್ಯ ಸೇವನೆ ಮಾಡುತ್ತಿದ್ದಾರೆ. ಈ ಮೂಲಕ ಹಣವನ್ನು ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರಾದ್ಯಂತ ಸುತ್ತುವರಿದು ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುವ ಜವಾಬ್ದಾರಿಯನ್ನು ಆರ್​ಎಸ್​ಎಸ್​, ವಿಶ್ವ ಹಿಂದೂ ಪರಿಷತ್​ ಸೇರಿ ಹಲವು ವಿಶ್ವಾಸಾರ್ಹ ಸಂಘಟನೆಗಳಿಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ವಹಿಸಿದೆ. ಇದೀಗ ಇವರ ಕೆಲಸದ ಬಗ್ಗೆ ಕಾಂಗ್ರೆಸ್ ಎಂಎಲ್ಎ ಅನುಮಾನ ವ್ಯಕ್ತಪಡಿಸಿದ್ದಾರೆ. ಎಲ್ಲವನ್ನೂ ಮದ್ಯಕ್ಕಾಗಿಯೇ ಖಾಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಭುರಿಯಾ ಹೇಳಿಕೆಗೆ, ಮಧ್ಯಪ್ರದೇಶ ಸಚಿವ ವಿಶ್ವಾಸ್​ ಸಾರಂಗ್​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷ ಯಾವತ್ತೂ ಶ್ರೀರಾಮನ ವಿರುದ್ಧವೇ ಮಾತನಾಡುತ್ತಿದೆ ಎಂದಿದ್ದಾರೆ. ಅಂದು ಸಂಗ್ರಹ ಮಾಡಿದ ಹಣವೆಲ್ಲ ಅಂದೇ ಶ್ರೀರಾಮ ಮಂದಿರದ ಬ್ಯಾಂಕ್​ ಅಕೌಂಟ್​ಗೆ ಹೋಗುತ್ತಿದೆ ಎಂದು ಮಧ್ಯಂತರ ಸ್ಪೀಕರ್​ ರಾಮೇಶ್ವರ್​ ಶರ್ಮಾ ಸ್ಪಷ್ಟನೆ ನೀಡಿದ್ದಾರೆ.

ACB Raid ಟಿಪಿಒ ಜಯರಾಜ್ ಮನೆಯಲ್ಲಿ ಭಾರೀ ಆಸ್ತಿ ಪತ್ತೆ, ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ