ಗುಜರಾತ್​​ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಗುಟ್ಟಾಗಿ ಸಹಾಯ ಮಾಡುತ್ತಿದೆ; ಅರವಿಂದ್ ಕೇಜ್ರಿವಾಲ್ ಶಾಕಿಂಗ್ ಹೇಳಿಕೆ

ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷವು ಸೋಲಬೇಕೆಂದು ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಆಮ್ ಆದ್ಮಿ ಪಕ್ಷಕ್ಕೆ ಗುಟ್ಟಾಗಿ ಸಹಾಯ ಮಾಡುತ್ತಿದ್ದಾರೆ ಎನ್ನುವ ಮೂಲಕ ಅರವಿಂದ್ ಕೇಜ್ರಿವಾಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಗುಜರಾತ್​​ನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಿಜೆಪಿ ಗುಟ್ಟಾಗಿ ಸಹಾಯ ಮಾಡುತ್ತಿದೆ; ಅರವಿಂದ್ ಕೇಜ್ರಿವಾಲ್ ಶಾಕಿಂಗ್ ಹೇಳಿಕೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 10, 2022 | 7:52 AM

ಅಹಮದಾಬಾದ್: ಆಮ್ ಆದ್ಮಿ ಪಕ್ಷದ (AAP) ಅಧ್ಯಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಗುಜರಾತ್ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಈ ವರ್ಷದ ಡಿಸೆಂಬರ್‌ನಲ್ಲಿ ಗುಜರಾತ್​ ವಿಧಾನಸಭೆ ಚುನಾವಣೆ (Gujarat Assembly Elections) ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಗುಜರಾತ್​ನಲ್ಲಿ ತಮ್ಮ ಆಮ್ ಆದ್ಮಿ ಪಕ್ಷದ ಪ್ರಚಾರದ ನಡುವೆಯೇ ಅರವಿಂದ್ ಕೇಜ್ರಿವಾಲ್ ಬಿಜೆಪಿ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ.

ಗುಜರಾತ್‌ನಲ್ಲಿ ಬಿಜೆಪಿಯ ಬಹಳಷ್ಟು ಕಾರ್ಯಕರ್ತರು ಮತ್ತು ಮುಖಂಡರು ನನ್ನನ್ನು ರಹಸ್ಯವಾಗಿ ಭೇಟಿಯಾಗುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷವು ಸೋಲಬೇಕೆಂದು ಆ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಆಮ್ ಆದ್ಮಿ ಪಕ್ಷಕ್ಕೆ ಗುಟ್ಟಾಗಿ ಸಹಾಯ ಮಾಡುತ್ತಿದ್ದಾರೆ ಎನ್ನುವ ಮೂಲಕ ಅರವಿಂದ್ ಕೇಜ್ರಿವಾಲ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಬದಲು ಆಮ್ ಆದ್ಮಿ ಪಕ್ಷಕ್ಕೆ ಸಹಾಯ ಮಾಡುವುದಾಗಿ ಅವರು ನನಗೆ ಹೇಳಿದ್ದಾರೆ. ಅಲ್ಲದೆ, ಆಮ್ ಆದ್ಮಿ ಪಕ್ಷಕ್ಕಾಗಿ ರಹಸ್ಯವಾಗಿ ಕೆಲಸ ಮಾಡಲು ಮತ್ತು ಗುಜರಾತ್​​ನಲ್ಲಿ ಆಡಳಿತ ಪಕ್ಷ ಬಿಜೆಪಿಯನ್ನು ಸೋಲಿಸಲು ಕೆಲಸ ಮಾಡಲು ಗುಜರಾತ್‌ನ ಎಲ್ಲಾ ಬಿಜೆಪಿ ನಾಯಕರನ್ನು ಆಹ್ವಾನಿಸುತ್ತಿದ್ದೇನೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಗುಜರಾತಿನ ಬುಡಕಟ್ಟು ಪ್ರಾಬಲ್ಯದ ವಲ್ಸಾದ್ ಜಿಲ್ಲೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ ಈ ಹೇಳಿಕೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: Arvind Kejriwal: ಸಿಸೋಡಿಯಾ ಮೇಲೆ ಸಿಬಿಐ ದಾಳಿ ಬಳಿಕ ಗುಜರಾತ್​ನಲ್ಲಿ ಆಮ್ ಆದ್ಮಿ ಪಕ್ಷದ ಜನಪ್ರಿಯತೆ ಶೇ 4ರಷ್ಟು ಏರಿದೆ: ಅರವಿಂದ ಕೇಜ್ರೀವಾಲ್

ಹಲವು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ನನ್ನನ್ನು ಭೇಟಿಯಾಗುತ್ತಿದ್ದಾರೆ. ಬಿಜೆಪಿ ಪಕ್ಷವನ್ನು ಸೋಲಿಸಲು ಏನಾದರೂ ಮಾಡುವಂತೆ ರಹಸ್ಯವಾಗಿ ನನ್ನ ಬಳಿ ಮನವಿ ಮಾಡಿದ್ದಾರೆ. ಬಿಜೆಪಿ ಪಕ್ಷದ ನಾಯಕರೇ ಬಿಜೆಪಿ ಸರ್ಕಾರದಿಂದ ಬೇಸತ್ತುಹೋಗಿದ್ದಾರೆ. ತಮ್ಮ ಪಕ್ಷವನ್ನು ಸೋಲಿಸಲು ಬಯಸುವ ಎಲ್ಲಾ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರಿಗೆ ಆಪ್​ಗಾಗಿ ರಹಸ್ಯವಾಗಿ ಕೆಲಸ ಮಾಡಲು ನಾನು ಆಹ್ವಾನಿಸುತ್ತೇನೆ ಎಂದಿದ್ದಾರೆ.

27 ವರ್ಷಗಳ ಬಿಜೆಪಿಯ ದುರಹಂಕಾರವನ್ನು ನಾವು ಮುರಿಯಬೇಕಾಗಿದೆ. ನೀವು ಬಿಜೆಪಿಯಲ್ಲಿಯೇ ಇರಿ, ಆದರೆ ಆ ಪಕ್ಷವನ್ನು ಸೋಲಿಸಲು ಆಪ್​ಗೆ ರಹಸ್ಯವಾಗಿ ಕೆಲಸ ಮಾಡಿ. ಕಾಂಗ್ರೆಸ್ ಕಾರ್ಯಕರ್ತರು ಕೂಡ ಭಯಪಡುವ ಅಗತ್ಯವಿಲ್ಲ. ನೀವು ಕಾಂಗ್ರೆಸ್ ಪಕ್ಷ ತೊರೆದು ಆಪ್ ಸೇರಬಹುದು. ನಿಮ್ಮ ಪಕ್ಷವನ್ನು ಮರೆತುಬಿಡಿ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ