AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suvendu Adhikari: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಗೆ ನಾಯಕರ ಅತಿ ಆತ್ಮವಿಶ್ವಾಸವೇ ಕಾರಣ; ಸುವೇಂದು ಅಧಿಕಾರಿ ಬೇಸರ

West Bengal Polls: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ, 170ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬರಲಿದ್ದೇವೆ ಎಂದು ಬಿಜೆಪಿಯ ಕೆಲವು ನಾಯಕರು ಅತಿಯಾದ ಆತ್ಮವಿಶ್ವಾಸ ಹೊಂದಿದ್ದರು ಎಂದು ಸುವೇಂದು ಅಧಿಕಾರಿ ಬಿಜೆಪಿ ಪಕ್ಷದ ಸಭೆಯಲ್ಲಿ ಹೇಳಿದ್ದಾರೆ.

Suvendu Adhikari: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸೋಲಿಗೆ ನಾಯಕರ ಅತಿ ಆತ್ಮವಿಶ್ವಾಸವೇ ಕಾರಣ; ಸುವೇಂದು ಅಧಿಕಾರಿ ಬೇಸರ
ಸುವೇಂದು ಅಧಿಕಾರಿ
ಸುಷ್ಮಾ ಚಕ್ರೆ
|

Updated on: Jul 19, 2021 | 12:01 PM

Share

ಕೊಲ್ಕತ್ತಾ: ಈ ಬಾರಿ ಬಹಳ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ವಿಶ್ವಾಸದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಮುಖಭಂಗವಾಗಿತ್ತು. ಯಥಾಪ್ರಕಾರ ಮಮತಾ ಬ್ಯಾನರ್ಜಿ (Mamata Banergee) ನೇತೃತ್ವದ ಟಿಎಂಸಿ (TMC) ಸರ್ಕಾರ ಅಧಿಕಾರದ ಗದ್ದುಗೆ ಏರಿತ್ತು. ಈ ಬಾರಿ ದೀದಿ ನಾಡಿನಲ್ಲಿ ಕೇಸರಿ ಬಾವುಟ ಹಾರಿಸಲೇಬೇಕೆಂದು ಬಿಜೆಪಿ ಶತಾಯಗತಾಯ ಪ್ರಯತ್ನಪಟ್ಟಿತ್ತು. ಕೊರೋನಾ ಕೇಸುಗಳು ಅತಿರೇಕಕ್ಕೆ ಏರಿದ ಸಂದರ್ಭದಲ್ಲೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮತ್ತಿತರ ಬಿಜೆಪಿ ನಾಯಕರು ಬಂಗಾಳದ ರಸ್ತೆಗಳಲ್ಲಿ ರ್ಯಾಲಿ ನಡೆಸಿ ಟೀಕೆಗೂ ಗುರಿಯಾಗಿದ್ದರು. ಇಷ್ಟೆಲ್ಲ ಆದರೂ ಪಶ್ಚಿಮ ಬಂಗಾಳದಲ್ಲಿ ಮತ್ತೆ ಮಮತಾ ಬ್ಯಾನರ್ಜಿ ವಿಜಯ ಪತಾಕೆ ಹಾರಿಸಿದ್ದರು. ಈ ಸೋಲಿಗೆ ನಮ್ಮ ಪಕ್ಷದ ನಾಯಕರ ಅತಿಯಾದ ಆತ್ಮವಿಶ್ವಾಸವೇ ಕಾರಣ ಎಂದು ಬಿಜೆಪಿ ನಾಯಕ ಮತ್ತು ಮಮತಾ ಬ್ಯಾನರ್ಜಿ ವಿರುದ್ಧ ನಂದಿಗ್ರಾಮದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಶಾಸಕ ಸುವೇಂದು ಅಧಿಕಾರ (Suvendu Adhikari) ಅಸಮಾಧಾನ ಹೊರಹಾಕಿದ್ದಾರೆ.

ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ, 170ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬರಲಿದ್ದೇವೆ ಎಂದು ಬಿಜೆಪಿಯ ಕೆಲವು ನಾಯಕರು ಅತಿಯಾದ ಆತ್ಮವಿಶ್ವಾಸ ಹೊಂದಿದ್ದರು. ಆದರೆ, ಈ ಆತ್ಮವಿಶ್ವಾಸವೇ ನಮ್ಮ ಪಕ್ಷಕ್ಕೆ ಮುಳುವಾಯಿತು. ಈ ಅತಿ ಆತ್ಮವಿಶ್ವಾಸದಿಂದ ನಾಯಕರು ಬಂಗಾಳದ ಚುನಾವಣಾ ಕಣದ ವಾಸ್ತವ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಲು ಮುಂದಾಗಲಿಲ್ಲ ಎಂದು ಪಶ್ಚಿಮ ಬಂಗಾಳದ ಮೇದಿನೀಪುರ ಜಿಲ್ಲೆಯಲ್ಲಿ ನಡೆದ ಬಿಜೆಪಿ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.

ಮೊದಲ ಎರಡು ಹಂತದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ಬಂದಿದ್ದರಿಂದ ನಮ್ಮ ನಾಯಕರು ಮೈಮರೆತುಬಿಟ್ಟರು. ಇದರಿಂದ ಅತಿ ಆತ್ಮವಿಶ್ವಾಸ ಹೊಂದಿದ ಅವರು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ 170ರಿಂದ 180 ಸೀಟುಗಳು ಸಿಗುವುದು ಖಚಿತ ಎಂದು ನಂಬಿದ್ದರು. ಆದರೆ, ಅವರು ಚುನಾವಣಾ ಕಣಕ್ಕಿಳಿದು ಯಾವ ಪ್ರಯತ್ನವನ್ನೂ ಪಡಲಿಲ್ಲ. ಇದೇ ಕಾರಣದಿಂದ ನಾವು ಹೀನಾಯವಾಗಿ ಸೋಲನ್ನು ಅನುಭವಿಸುವಂತಾಯಿತು ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.

ನಾವು ನಮ್ಮ ಗುರಿಯನ್ನು ಹಾಕಿಕೊಂಡು ಅದನ್ನು ಮುಟ್ಟಲು ನಿರಂತರವಾಗಿ ತಳಮಟ್ಟದಿಂದಲೇ ಪ್ರಯತ್ನ ಪಡಬೇಕಾಗುತ್ತದೆ. ಆದರೆ, ಬಂಗಾಳದಲ್ಲಿ ಬಿಜೆಪಿ ನಾಯಕರು ಆ ರೀತಿ ಮಾಡಲಿಲ್ಲ. ಇದರ ಬೆಲೆಯನ್ನು ನಾವು ತೆರಬೇಕಾಯಿತು ಎಂದು ಸುವೇಂದು ಅಧಿಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಈ ಬಾರಿಯ ಚುನಾವಣೆಯಲ್ಲಿ 292 ಸ್ಥಾನಗಳ ಪೈಕಿ 213 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ತೃಣಮೂಲ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ದಿಗ್ವಿಜಯ ಸಾಧಿಸಿತ್ತು. ಬಿಜೆಪಿ ಕೇವಲ 77 ಸ್ಥಾನಗಳಲ್ಲಿ ಗೆಲುವು ಕಂಡು ಹೀನಾಯ ಸೋಲು ಅನುಭವಿಸಿತ್ತು.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಸುವೇಂದು ಅಧಿಕಾರಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ನಂದಿಗ್ರಾಮ ಕ್ಷೇತ್ರದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರಾಳಿಯಾಗಿ ಬಿಜೆಪಿಯಿಂದ ಸುವೇಂದು ಅಧಿಕಾರಿಯನ್ನು ಕಣಕ್ಕೆ ಇಳಿಸಲಾಗಿತ್ತು. ಕೊನೆ ಹಂತದವರೆಗೂ ಪೈಪೋಟಿ ನೀಡಿದ್ದ ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ 1,956 ಮತಗಳ ಅಂತರದಿಂದ ಮಮತಾ ಬ್ಯಾನರ್ಜಿ ವಿರುದ್ಧ ಗೆಲುವು ಸಾಧಿಸಿದ್ದರು. ಈ ಮೂಲಕ ಮಮತಾ ಬ್ಯಾನರ್ಜಿಗೆ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯವಾದರೂ ಸ್ವಕ್ಷೇತ್ರ ನಂದಿಗ್ರಾಮದಲ್ಲೇ ಸೋಲನ್ನು ಅನುಭವಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸೆ ಪ್ರಕರಣದ ವಿಚಾರಣೆ ಜಾರಿಯಲ್ಲಿರುವಾಗಲೇ ದೆಹಲಿಗೆ ಭೇಟಿ ನೀಡಲಿದ್ದಾರೆ ಮಮತಾ ಬ್ಯಾನರ್ಜಿ

ಬಂಗಾಳದ ಚುನಾವಣೋತ್ತರ ಗಲಭೆಗೆ ದೀದಿ ಸರ್ಕಾರವೇ ಕಾರಣ; ಹೈಕೋರ್ಟ್​ಗೆ ವರದಿ ಸಲ್ಲಿಸಿದ ಮಾನವ ಹಕ್ಕುಗಳ ಆಯೋಗ

(BJP Lost In West Bengal Polls Due To Overconfident Leaders: Suvendu Adhikari)

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ