ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಬಿಜೆಪಿಗೆ ಹಿನ್ನಡೆ

ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ನಮಗೆ ತೃಪ್ತಿ ನೀಡಿಲ್ಲ. ಮೈತ್ರಿಕೂಟ ಅಭ್ಯರ್ಥಿಗಳ ಸಾಮರ್ಥ್ಯವನ್ನು ನಾವು ತಪ್ಪಾಗಿ ಅಂದಾಜಿಸಿದ್ದೆವು ಎಂದು ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್​ ಪ್ರತಿಕ್ರಿಯಿಸಿದ್ದಾರೆ.

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಬಿಜೆಪಿಗೆ ಹಿನ್ನಡೆ
ಶಿವಸೇನೆ-ಎನ್ಸಿಪಿ, ಕಾಂಗ್ರೇಸ್ನ ಮೈತ್ರಿಕೂಟ ಒಟ್ಟು ನಾಲ್ಕು ಸ್ಥಾನವನ್ನು ಗಳಿಸಿದ್ದೂ, ಪಕ್ಷೇತರ ಒಂದು ಸ್ಥಾನವನ್ನು ಪಡೆದುಕೊಂಡಿದೆ. ಮೈತ್ರಿ ಒಕ್ಕೂಟವು ನಾಲ್ಕು ಸ್ಥಾನವನ್ನು ಪಡೆದಿದ್ದರೂ ಶಿವಸೇನೆ ಮಾತ್ರ ಒಂದು ಸ್ಥಾನವನ್ನು ಗೆಲ್ಲಲಿಲ್ಲ.
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 04, 2020 | 5:53 PM

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಮತ್ತೆ ಹಿನ್ನಡೆಯಾಗಿದೆ. ಇಂದು ಪ್ರಕಟವಾದ ವಿಧಾನಪರಿಷತ್ ಚುನಾವಣೆ ಫಲಿತಾಂಶಗಳಲ್ಲಿ ಬಿಜೆಪಿ ಕೇವಲ ಒಂದು ಸ್ಥಾನದಲ್ಲಿ ಜಯಗಳಿಸಿದೆ. ಆಡಳಿತಾರೂಢ ಮಹಾಅಘಾಡಿ ಮೈತ್ರಿಕೂಟದ ಅಭ್ಯರ್ಥಿಗಳು ನಾಲ್ಕರಲ್ಲಿ ಜಯಗಳಿಸಿದ್ದರೆ, ಒಂದು ಸ್ಥಾನ ಪಕ್ಷೇತರ ಅಭ್ಯರ್ಥಿಯ ಪಾಲಾಗಿದೆ.

ಶಿವಸೇನೆ, ಎನ್​ಸಿಪಿ ಹಾಗೂ ಕಾಂಗ್ರೇಸ್​ನ ಮೈತ್ರಿಕೂಟಕ್ಕೆ ನಾಲ್ಕು ಸ್ಥಾನ ದಕ್ಕಿದರೂ, ಮೈತ್ರಿಒಕ್ಕೂಟದ ಮುಖ್ಯಮಂತ್ರಿ ಸ್ಥಾನ ಸೇರಿದಂತೆ ಪ್ರಮುಖ ಸಚಿವ ಸ್ಥಾನ ಹೊಂದಿರುವ ಶಿವಸೇನೆ ಮಾತ್ರ ಒಂದೂ ಸ್ಥಾನವನ್ನು ಗೆದ್ದಿಲ್ಲ. ಶಿವಸೇನೆಯ ಏಕೈಕ ಅಭ್ಯರ್ಥಿ ಅಮರಾವತಿಯಲ್ಲಿ ಸೋಲನ್ನು ಅನುಭವಿಸಿದ್ದಾರೆ. ಧುಲೆ-ನಂದುರ್ಬಾರ್ ಸ್ಥಳಿಯ ಸಂಸ್ಥೆಯ ಸ್ಥಾನದಲ್ಲಿ ಮಾತ್ರ ಬಿಜೆಪಿ ಜಯಗಳಿಸಿದೆ.

ಬಹುಕಾಲದಿಂದ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸುತ್ತಿತ್ತು. ಆದರೆ ಈ ಬಾರಿ ಅಲ್ಲಿಯೂ ಹಿನ್ನಡೆಯಾಗಿದೆ. ಪಕ್ಷದ ಭದ್ರಕೋಟೆಯಾದ ನಾಗಪುರ ಕ್ಷೇತ್ರದಲ್ಲಿಯೂ ಬಿಜೆಪಿಗೆ ಹಿನ್ನಡೆಯಾಗದೆ. ಪುಣೆ ಕ್ಷೇತ್ರದತ್ತ ಬಿಜೆಪಿ ಹೆಚ್ಚಿನ ಲಕ್ಷ್ಯವಹಿಸಿತ್ತು. ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಸೇರಿದಂತೆ ಹಲವು ಬಿಜೆಪಿ ನಾಯಕರು ಪುಣೆಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಆದರೂ ಈ ಕ್ಷೇತ್ರ ಮೈತ್ರಿಕೂಟ ಅಭ್ಯರ್ಥಿಯ ಪಾಲಾಗಿದೆ.

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ನಮಗೆ ತೃಪ್ತಿ ನೀಡಿಲ್ಲ. ಮೈತ್ರಿಕೂಟದ ಅಭ್ಯರ್ಥಿಗಳ ಸಾಮರ್ಥ್ಯವನ್ನು ನಾವು ತಪ್ಪಾಗಿ ಅಂದಾಜಿಸಿದ್ದೆವು ಎಂದು ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್​ ಎಎನ್​ಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.

ಎನ್​ಸಿಪಿ ಮತ್ತು ಕಾಂಗ್ರೆಸ್ ತಲಾ ಎರಡು ಸ್ಥಾನಗಳಿಗೆ ಸ್ಪರ್ಧಿಸಿದ್ದವು. ಶಿವಸೇನೆ ತನ್ನ ಅಭ್ಯರ್ಥಿಯನ್ನು ಒಂದೇ ಸ್ಥಾನದಲ್ಲಿ ಕಣಕ್ಕಿಳಿಸಿತ್ತು. ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಮತ್ತೊಂದು ಸ್ಥಾನದಲ್ಲಿ ಮಿತ್ರಪಕ್ಷಕ್ಕೆ ಅವಕಾಶ ಮಾಡಿಕೊಟ್ಟಿತ್ತು.

ಇದನ್ನೂ ಓದಿ: ಶಿವಸೇನೆಗೆ ಸೇರಿದ ಒಂದೇ ತಾಸಿನಲ್ಲಿ ವಿಧಾನ ಪರಿಷತ್​ ಸದಸ್ಯೆಯಾದ ಊರ್ಮಿಳಾ ಮಾತೋಂಡ್ಕರ್

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ