ಲೋಕಸಭೆ ಚುನಾವಣೆ, ರಾಮ ಮಂದಿರ, ಹೊಸ ಮತದಾರರ ಓಲೈಕೆ, ಬಿಜೆಪಿ ಪದಾಧಿಕಾರಿಗಳ ಸಭೆಯ ಪ್ರಮುಖಾಂಶಗಳು

|

Updated on: Dec 24, 2023 | 7:45 AM

ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ಪದಾಧಿಕಾರಿಗಳ ಸಭೆ ನಡೆದಿದೆ. ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಸರ್ಕಾರ ಮಾಡಿರುವ ಕೆಲಸಗಳನ್ನು ಎತ್ತಿ ತೋರಿಸಬೇಕು ಮತ್ತು ಚುನಾವಣೆಯಲ್ಲಿ ಪಕ್ಷವನ್ನು ಭಾರಿ ಅಂತರದಿಂದ ಗೆಲ್ಲಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಸಭೆಯಲ್ಲಿ ಹೇಳಿದ್ದಾರೆ. ನಮ್ಮ ಮುಂದೆ ನಿಲ್ಲುವ ಮೊದಲು ಪ್ರತಿಪಕ್ಷಗಳು 10 ಬಾರಿ ಯೋಚಿಸಬೇಕಾದಂತಹ ದೊಡ್ಡ ವಿಜಯವನ್ನು ನಾವು ಸಾಧಿಸಬೇಕಾಗಿದೆ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆ, ರಾಮ ಮಂದಿರ, ಹೊಸ ಮತದಾರರ ಓಲೈಕೆ, ಬಿಜೆಪಿ ಪದಾಧಿಕಾರಿಗಳ ಸಭೆಯ ಪ್ರಮುಖಾಂಶಗಳು
ಅಮಿತ್ ಶಾ
Image Credit source: ABP Live
Follow us on

ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ಪದಾಧಿಕಾರಿಗಳ ಸಭೆ ನಡೆದಿದೆ. ಮುಂಬರುವ ಲೋಕಸಭೆ ಚುನಾವಣೆ(Lok Sabha Election)ಗೂ ಮುನ್ನ ಸರ್ಕಾರ ಮಾಡಿರುವ ಕೆಲಸಗಳನ್ನು ಎತ್ತಿ ತೋರಿಸಬೇಕು ಮತ್ತು ಚುನಾವಣೆಯಲ್ಲಿ ಪಕ್ಷವನ್ನು ಭಾರಿ ಅಂತರದಿಂದ ಗೆಲ್ಲಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಸಭೆಯಲ್ಲಿ ಹೇಳಿದ್ದಾರೆ. ನಮ್ಮ ಮುಂದೆ ನಿಲ್ಲುವ ಮೊದಲು ಪ್ರತಿಪಕ್ಷಗಳು 10 ಬಾರಿ ಯೋಚಿಸಬೇಕಾದಂತಹ ದೊಡ್ಡ ವಿಜಯವನ್ನು ನಾವು ಸಾಧಿಸಬೇಕಾಗಿದೆ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರದ ಉದ್ಘಾಟನೆಯ ಸಂದರ್ಭದಲ್ಲಿ ದೇಶಾದ್ಯಂತ ಪ್ರಾರ್ಥನೆ ಮತ್ತು ಇತರ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾರ್ವಜನಿಕರನ್ನು ಪ್ರೋತ್ಸಾಹಿಸುವಂತೆ ಸಭೆಯಲ್ಲಿ ಶಾ ಅಧಿಕಾರಿಗಳಿಗೆ ಸೂಚಿಸಿದರು.

ಜನವರಿ 1ರಿಂದ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಅಕ್ಷತೆ ಹಂಚುವುದು, ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ, ದೀಪ ಹಚ್ಚುವುದು ಮುಂತಾದ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.

ಹೊಸ ಮತದಾರರನ್ನು ಸೆಳೆಯಲು ಪಕ್ಷ ದೇಶಾದ್ಯಂತ ದೊಡ್ಡ ಮಟ್ಟದ ಪ್ರಚಾರ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯು ದೇಶಾದ್ಯಂತ ಮಹಿಳೆಯರು, ಬಡವರು, ಯುವಕರು ಮತ್ತು ರೈತರನ್ನು ಬೆಂಬಲಿಸುವತ್ತ ಗಮನಹರಿಸಲಿದೆ ಮತ್ತು 2024 ರ ಲೋಕಸಭೆ ಚುನಾವಣೆಯವರೆಗೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಿದೆ.

ಭವ್ಯವಾದ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರದ ಪ್ರಯತ್ನಗಳ ಬಗ್ಗೆ ಪಕ್ಷದ ಕಾರ್ಯಕರ್ತರ ಸಹಾಯದಿಂದ ಮಾಹಿತಿ ಪ್ರಸಾರ ಮಾಡಲು ಬಿಜೆಪಿ ನಾಯಕರಿಗೆ ಸೂಚಿಸಲಾಯಿತು.

ಮುಂಬರುವ ಚುನಾವಣೆಯಲ್ಲಿ ಶೇಕಡವಾರು ಮತಗಳಿಕೆಗೆ ಒತ್ತು ನೀಡುವಂತೆ ಸಭೆಯಲ್ಲಿ ಬಿಜೆಪಿ ಪದಾಧಿಕಾರಿಗಳಿಗೆ ಸೂಚಿಸಲಾಗಿದೆ. ಇದಕ್ಕಾಗಿ ಹೊಸ ಮತದಾರರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುವುದು.

ಜನವರಿ 24ರಿಂದ ಯುವಮೋರ್ಚಾ ವತಿಯಿಂದ ಹೊಸ ಮತದಾರರ ಸಮಾವೇಶಗಳನ್ನು ಆರಂಭಿಸಲಾಗುವುದು. ಇದರ ಅಡಿಯಲ್ಲಿ ದೇಶಾದ್ಯಂತ 5000 ಸಮ್ಮೇಳನಗಳನ್ನು ಆಯೋಜಿಸಲಾಗುವುದು. ಈ ಸಮಾವೇಶಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಕೂಡ ಭಾಗವಹಿಸಲಿದ್ದಾರೆ.
ಯುವ ದಿನಾಚರಣೆಯಂದು (ಜನವರಿ 12) ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಮತದಾರರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಬಹುದು. ಯುವ ದಿನಾಚರಣೆಯ ಸಂದರ್ಭದಲ್ಲಿ ಹಲವು ಕಾರ್ಯಕ್ರಮಗಳನ್ನೂ ಆಯೋಜಿಸಬಹುದು ಎನ್ನಲಾಗಿದೆ.

ಮುಂದಿನ ದಿನಗಳಲ್ಲಿ ಮಹಿಳೆಯರು ಮತ್ತು ಫಲಾನುಭವಿಗಳ ಮೇಲೆ ಬಿಜೆಪಿ ವಿಶೇಷ ಗಮನ ಹರಿಸಲಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಎಲ್ಲಾ ರಂಗಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಿದೆ. ಬಿಜೆಪಿ ತನ್ನ ಮಿತ್ರ ಪಕ್ಷಗಳ ಮೂಲಕ ಜನರನ್ನು ತಲುಪಲು ಪ್ರಯತ್ನಿಸಲಿದೆ.

ವಿಶೇಷವಾಗಿ ಮಹಿಳಾ ಮೋರ್ಚಾ, ಯುವಜನ ಮತ್ತು ಕಿಸಾನ್ ಮೋರ್ಚಾಗೆ ದೊಡ್ಡ ಜವಾಬ್ದಾರಿ ನೀಡಲಾಗುವುದು. ಇದರೊಂದಿಗೆ ದೇಶಾದ್ಯಂತ ಸಾಮಾಜಿಕ ಸಮಾವೇಶಗಳನ್ನೂ ಆಯೋಜಿಸಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸೇರುವಂತೆ ಮನವಿ ಮಾಡಲಾಗುವುದು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ