ಉಪರಾಷ್ಟ್ರಪತಿ ಚುನಾವಣೆ ಕುರಿತು ಆ.5ರಂದು ಬಿಜೆಪಿ ಸಭೆ: ಸಚಿವ ಪ್ರಹ್ಲಾದ್ ಜೋಶಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 02, 2022 | 6:16 PM

ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಆಗಸ್ಟ್ 5ರಂದು ಸಭೆ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ. ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ನಾವು ಆಗಸ್ಟ್ 5 ರಂದು ಮತ್ತೊಮ್ಮೆ ಸಭೆ ನಡೆಸುತ್ತೇವೆ ಎಂದು ಹೇಳಿದರು.

ಉಪರಾಷ್ಟ್ರಪತಿ ಚುನಾವಣೆ ಕುರಿತು ಆ.5ರಂದು ಬಿಜೆಪಿ ಸಭೆ: ಸಚಿವ ಪ್ರಹ್ಲಾದ್ ಜೋಶಿ
Prahlad Joshi
Image Credit source: NDTV
Follow us on

ದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಆಗಸ್ಟ್ 5ರಂದು ಸಭೆ ನಡೆಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ. ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ನಾವು ಆಗಸ್ಟ್ 5 ರಂದು ಮತ್ತೊಮ್ಮೆ ಸಭೆ ನಡೆಸುತ್ತೇವೆ ಎಂದು ಹೇಳಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಮಂಗಳವಾರ ಬೆಳಗ್ಗೆ ಸಂಸತ್ತಿನ ಗ್ರಂಥಾಲಯ ಭವನದಲ್ಲಿ ಬಿಜೆಪಿ ಸಂಸದೀಯ ಪಕ್ಷದ ಸಭೆ ಆರಂಭವಾಯಿತು. ಸಂಸತ್ ಲೈಬ್ರರಿ ಕಟ್ಟಡದಲ್ಲಿ ನಡೆದ ಸಭೆಗೆ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಶ್ವಿನಿ ವೈಷ್ಣವ್, ಎಸ್ ಜೈಶಂಕರ್, ಅನುರಾಗ್ ಠಾಕೂರ್ ಮತ್ತು ಪ್ರಲ್ಹಾದ್ ಜೋಶಿ ಸೇರಿದಂತೆ ಹಲವರು ಆಗಮಿಸಿದ್ದರು. ರಾಜನಾಥ್ ಸಿಂಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10ಕ್ಕೆ ಕೊನೆಗೊಳ್ಳುವ ಕಾರಣ ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಜಗದೀಪ್ ಧನಕರ್ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದರೆ, ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ ಅವರನ್ನು ತಮ್ಮ ಅಭ್ಯರ್ಥಿ ಎಂದು ಘೋಷಿಸಿವೆ.

ಇದನ್ನೂ ಓದಿ
ಸಾಮಾಜಿಕ ಮಾಧ್ಯಮಗಳಲ್ಲಿ ರಾಷ್ಟ್ರಧ್ವಜದ ಡಿಪಿ ಹಾಕುವಂತೆ ಅಮಿತ್ ಶಾ ಕರೆ
National Herald case ಇಡಿ ದಾಳಿ ಖಂಡಿಸಿ ದೆಹಲಿಯ ಹೆರಾಲ್ಡ್ ಹೌಸ್ ಹೊರಗೆ ಕಾಂಗ್ರೆಸ್ ಪ್ರತಿಭಟನೆ
BIG NEWS: ಭಾರತದಿಂದ ಹೊರನಡೆಯುವಂತೆ 81 ಚೀನಾ ನಾಗರಿಕರಿಗೆ ನೋಟಿಸ್: ಸಚಿವ ನಿತ್ಯಾನಂದ ರೈ
Breaking News: ದೆಹಲಿಯಲ್ಲಿ 3ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ: ದೇಶದಲ್ಲಿ ಮಂಕಿಪಾಕ್ಸ್ 8ಕ್ಕೆ ಏರಿಕೆ

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿರುವ ಭಾರತದ ಉಪರಾಷ್ಟ್ರಪತಿಯನ್ನು ರಾಜ್ಯಸಭೆ ಮತ್ತು ಲೋಕಸಭೆಯ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಮೂಲಕ ಆಯ್ಕೆ ಮಾಡಲಾಗುತ್ತದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಆಜಾದಿ ಕಾ ಅಮೃತ್ ಮಹೋತ್ಸವ’ ಮತ್ತು ‘ಹರ್ ಘರ್ ತಿರಂಗ’ ಪ್ರಚಾರ ಸೇರಿದಂತೆ ಆಗಸ್ಟ್ 9 ರಿಂದ 15 ರವರೆಗೆ ನಡೆಸುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಸದರಿಗಾಗಿ ‘ತಿರಂಗ’ ಬೈಕ್ ರ್ಯಾಲಿಯನ್ನು ಕೆಂಪುಕೋಟೆಯಿಂದ ಸಂಸತ್ತಿನವರೆಗೆ ನಡೆಸಲಿದ್ದಾರೆ ಎಂದು ಹೇಳಿದರು.

Published On - 6:16 pm, Tue, 2 August 22