AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JP Nadda: ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಸಚಿವ ಜೆ.ಪಿ ನಡ್ಡಾ ಆಯ್ಕೆ ಸಾಧ್ಯತೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಮತ್ತು ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು ರಾಜ್ಯಸಭೆಯಲ್ಲಿ ಸದನದ ನಾಯಕರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

JP Nadda: ರಾಜ್ಯಸಭೆಯಲ್ಲಿ ಸದನದ ನಾಯಕರಾಗಿ ಸಚಿವ ಜೆ.ಪಿ ನಡ್ಡಾ ಆಯ್ಕೆ ಸಾಧ್ಯತೆ
ಜೆ.ಪಿ. ನಡ್ಡಾ
ಸುಷ್ಮಾ ಚಕ್ರೆ
|

Updated on: Jun 21, 2024 | 10:13 PM

Share

ನವದೆಹಲಿ: ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ಜೆ.ಪಿ. ನಡ್ಡಾ (JP Nadda) ಅವರು ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದಾರೆ. ಅವರ ಅವಧಿಯು ಈ ತಿಂಗಳು ಕೊನೆಗೊಳ್ಳುತ್ತದೆ. ಆದರೆ ಈ ವರ್ಷದ ಕೊನೆಯಲ್ಲಿ ನಡೆಯಲಿರುವ 4 ರಾಜ್ಯಗಳ ಚುನಾವಣೆಗಳು ಪೂರ್ಣಗೊಳ್ಳುವವರೆಗೆ ಅವರನ್ನು ಮುಂದುವರಿಸಲು ಸೂಚಿಸಲಾಗಿದೆ. ಅಷ್ಟರೊಳಗೆ ಅವರ ಬದಲಾಗಿ ಬೇರೆಯವರನ್ನು ಆಯ್ಕೆ ಮಾಡಲಾಗುವುದು. ಅಲ್ಲಿಯವರೆಗೆ ದಿನನಿತ್ಯದ ಕರ್ತವ್ಯಗಳಲ್ಲಿ ಅವರಿಗೆ ಸಹಾಯ ಮಾಡಲು ಕಾರ್ಯಾಧ್ಯಕ್ಷರನ್ನು ನೇಮಿಸಬಹುದು.

ಜೆ.ಪಿ. ನಡ್ಡಾ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನ ರಾಜ್ಯಸಭಾ ಸದಸ್ಯರಾಗಿದ್ದಾರೆ. ಕಳೆದ ವಾರ ಹೊಸ ಸಂಪುಟದ ಭಾಗವಾಗಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ಆರೋಗ್ಯ ಸಚಿವ ಸ್ಥಾನದ ಜೊತೆಗೆ ರಾಸಾಯನಿಕಗಳು ಮತ್ತು ರಸಗೊಬ್ಬರ ಸಚಿವಾಲಯದ ಜವಾಬ್ದಾರಿಯನ್ನು ಸಹ ನೀಡಲಾಯಿತು.

ಇದನ್ನೂ ಓದಿ: Nana Patole: ಕಾಂಗ್ರೆಸ್ ಕಾರ್ಯಕರ್ತ ನಾನಾ ಪಟೋಲೆಯ ಪಾದ ತೊಳೆಯುತ್ತಿರುವ ವಿಡಿಯೋ ವೈರಲ್; ಬಿಜೆಪಿ ಟೀಕೆ

ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಜೆ.ಪಿ. ನಡ್ಡಾ ಅವರು ತಮ್ಮ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂಬ ಊಹಾಪೋಹವಿತ್ತು, ಅವರು 2020ರಲ್ಲಿ ಪ್ರಸ್ತುತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇನ್ನುಮುಂದೆ ಜೆ.ಪಿ. ನಡ್ಡಾ ಅವರ ಬದಲು ಯಾರು ಬಿಜೆಪಿ ರಾಷ್ಟ್ರಾಧ್ಯಕ್ಷರಾಗಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.

ಇದನ್ನೂ ಓದಿ: Atal Setu: ಅಟಲ್ ಸೇತು ಮೇಲೆ ಬಿರುಕು; ಮಹಾರಾಷ್ಟ್ರ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು

ಎಲ್ಲಾ ರಾಜ್ಯಗಳಲ್ಲಿ ಶೇ. 50ರಷ್ಟು ಸಾಂಸ್ಥಿಕ ಚುನಾವಣೆಗಳು ಪೂರ್ಣಗೊಂಡ ನಂತರವೇ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಬಿಜೆಪಿಯ ಕಾನೂನುಗಳು ಹೇಳುತ್ತವೆ. ಇದು ಸುಮಾರು 6 ತಿಂಗಳವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಹಾಗಾಗಿ ಹೊಸ ಅಧ್ಯಕ್ಷರನ್ನು ಡಿಸೆಂಬರ್-ಜನವರಿಯಲ್ಲಿ ಆಯ್ಕೆ ಮಾಡಬಹುದು. ಈ ವರ್ಷದ ಏಪ್ರಿಲ್‌ನಲ್ಲಿ ಜೆ.ಪಿ. ನಡ್ಡಾ ಗುಜರಾತ್‌ನಿಂದ ರಾಜ್ಯಸಭಾ ಸಂಸದರಾಗಿ ಆಯ್ಕೆಯಾದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ