ಅನರ್ಹತೆ ಬಗ್ಗೆ ಜರ್ಮನಿ ಪ್ರತಿಕ್ರಿಯೆ; ಧನ್ಯವಾದ ರಾಹುಲ್ ಗಾಂಧಿ ಎಂದು ಕಾಂಗ್ರೆಸ್​​ನ್ನು ಟೀಕಿಸಿದ ಬಿಜೆಪಿ

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ಲೋಕಸಭೆಯಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಮೂಲಭೂತ ಪ್ರಜಾಪ್ರಭುತ್ವ ತತ್ವಗಳು ಅನ್ವಯಿಸಬೇಕು ಎಂದು ಜರ್ಮನಿ ಗುರುವಾರ ಹೇಳಿದ ನಂತರ ವಿವಾದ ಭುಗಿಲೆದ್ದಿದೆ

ಅನರ್ಹತೆ ಬಗ್ಗೆ ಜರ್ಮನಿ ಪ್ರತಿಕ್ರಿಯೆ; ಧನ್ಯವಾದ ರಾಹುಲ್ ಗಾಂಧಿ ಎಂದು ಕಾಂಗ್ರೆಸ್​​ನ್ನು ಟೀಕಿಸಿದ ಬಿಜೆಪಿ
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Mar 30, 2023 | 6:53 PM

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅನರ್ಹತೆ ಕುರಿತು ಜರ್ಮನಿಯ (Germany) ಪ್ರತಿಕ್ರಿಯೆಯ ಬಗ್ಗೆ ಬಿಜೆಪಿ (BJP) ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಭಾರತದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ವಿದೇಶಿ ಶಕ್ತಿಗಳನ್ನು ಆಹ್ವಾನಿಸುತ್ತಿದೆ ಎಂದು ಆರೋಪಿಸಿದೆ. ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಅನುರಾಗ್ ಠಾಕೂರ್ ಟ್ವೀಟ್ ಮೂಲಕ ರಾಹುಲ್ ಗಾಂಧಿಯನ್ನು ಟೀಕಿಸಿದ್ದು ರಾಹುಲ್ ದೇಶೀಯ ವ್ಯವಹಾರಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಬಯಸುತ್ತಾರೆ ಎಂದು ಮತ್ತೊಮ್ಮೆ ಆರೋಪಿಸಿದ್ದಾರೆ. ಆದಾಗ್ಯೂ ಕಾಂಗ್ರೆಸ್ ಈ ಆರೋಪವನ್ನು ತಳ್ಳಿಹಾಕಿದ್ದು, ರಾಹುಲ್ ಗಾಂಧಿ ಅಂತಹ ಹಸ್ತಕ್ಷೇಪವನ್ನು ಬಯಸಿದ ಉದಾಹರಣೆಗಳನ್ನು ನೀಡುವಂತೆ ಬಿಜೆಪಿಗೆ ಸವಾಲು ಹಾಕಿದೆ. ರಾಹುಲ್ ಗಾಂಧಿ ಅವರು ವಿದೇಶದಲ್ಲಿ ತಮ್ಮ ಕಾರ್ಯಕ್ರಮದಲ್ಲಿ ಭಾರತದ ವ್ಯವಹಾರಗಳ ಸ್ಥಿತಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ ಅವರು ಯಾರ ಸಹಾಯವನ್ನು ಕೇಳುತ್ತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾದ ನಂತರ ಲೋಕಸಭೆಯಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರ ಪ್ರಕರಣದಲ್ಲಿ ಮೂಲಭೂತ ಪ್ರಜಾಪ್ರಭುತ್ವ ತತ್ವಗಳು ಅನ್ವಯಿಸಬೇಕು ಎಂದು ಜರ್ಮನಿ ಗುರುವಾರ ಹೇಳಿದ ನಂತರ ವಿವಾದ ಭುಗಿಲೆದ್ದಿದೆ.ಭಾರತದ ವಿರೋಧ ಪಕ್ಷದ ರಾಜಕಾರಣಿ ರಾಹುಲ್ ಗಾಂಧಿ ವಿರುದ್ಧದ ಮೊದಲ ಪ್ರಕರಣದ ತೀರ್ಪನ್ನು ನಾವು ಗಮನಿಸಿದ್ದೇವೆ. ಅವರ ಸಂಸದೀಯ ಸ್ಥಾನವನ್ನು ರದ್ದು ಮಾಡಲಾಗಿದೆ. ನಮಗೆ ತಿಳಿದಿರುವಂತೆ ರಾಹುಲ್ ಗಾಂಧಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವವರಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜರ್ಮನ್ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.

ಈ ತೀರ್ಪು ನಿಲ್ಲುತ್ತದೆಯೇ ಮತ್ತು ಅವರ ಆದೇಶದ ಅಮಾನತು ಯಾವುದೇ ಆಧಾರವನ್ನು ಹೊಂದಿದೆಯೇ ಎಂಬುದು ನಂತರ ಸ್ಪಷ್ಟವಾಗುತ್ತದೆ” ಎಂದು ಅವರು ಹೇಳಿದರು. ನ್ಯಾಯಾಂಗ ಸ್ವಾತಂತ್ರ್ಯ ಮತ್ತು ಮೂಲಭೂತ ಪ್ರಜಾಪ್ರಭುತ್ವದ ತತ್ವಗಳ ಮಾನದಂಡಗಳು ಪ್ರಕರಣದಲ್ಲಿ ಅನ್ವಯವಾಗುತ್ತವೆ ಎಂದು ಜರ್ಮನಿ ನಿರೀಕ್ಷಿಸುತ್ತದೆ ಎಂದು ವಕ್ತಾರೆ ಹೇಳಿದ್ದರು.

ಈ ವಾರದ ಆರಂಭದಲ್ಲಿ ಅಮೆರಿಕ ಕೂಡಾ ರಾಹುಲ್ ಗಾಂಧಿ ಪ್ರಕರಣವನ್ನು ಗಮನಿಸುತ್ತಿದೆ ಮತ್ತು ಅವರು ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಹಂಚಿಕೆಯ ಬದ್ಧತೆಯ ಮೇಲೆ ಭಾರತ ಸರ್ಕಾರದೊಂದಿಗೆ ತೊಡಗಿಸಿಕೊಂಡಿದ್ದಾರೆ ಎಂದು ಹೇಳಿತ್ತು.

ಇದನ್ನೂ ಓದಿ:Video Viral: ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಮೊಬೈಲ್​​ನಲ್ಲಿ ಪೋರ್ನ್ ವೀಡಿಯೊ ವೀಕ್ಷಿಸಿದ ಬಿಜೆಪಿ ಶಾಸಕ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ‘ಮೋದಿ ಉಪನಾಮ’ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ ದಿನಾಂಕದಿಂದ ಲೋಕಸಭೆಯ ಸದಸ್ಯ ಸ್ಥಾನದಿಂದ ಕಳೆದ ವಾರ ಅನರ್ಹರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್