ಅಸ್ಸಾಂ ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಬಂದ ಶಾಸಕರನ್ನು ಬೆನ್ನ ಮೇಲೆ ಹೊತ್ತು ಸಾಗಿದ ರಕ್ಷಣಾ ಕಾರ್ಯಕರ್ತ; ವಿಡಿಯೊ ವೈರಲ್

ಮುಂಗಾರು ಮುನ್ನ ಬಂದ ಭಾರೀ ಮಳೆಗೆ ಅಸ್ಸಾಂನಲ್ಲಿ ಪ್ರವಾಹವುಂಟಾಗಿದ್ದು48,000ಕ್ಕಿಂತಲೂ ಹೆಚ್ಚು ಜನರನ್ನು 248 ಸಂತ್ರಸ್ತರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಹೊಜೈ ಮತ್ತು ಕ್ಯಾಚಾರ್ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿವೆ.

ಅಸ್ಸಾಂ ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಬಂದ ಶಾಸಕರನ್ನು ಬೆನ್ನ ಮೇಲೆ ಹೊತ್ತು ಸಾಗಿದ ರಕ್ಷಣಾ ಕಾರ್ಯಕರ್ತ; ವಿಡಿಯೊ ವೈರಲ್
ರಕ್ಷಣಾ ಕಾರ್ಯಕರ್ತ ಬಿಜೆಪಿ ಶಾಸಕರನ್ನು ಬೆನ್ನ ಮೇಲೆ ಹೊತ್ತು ಸಾಗುತ್ತಿರುವುದು Image Credit source: ANI
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: May 19, 2022 | 6:44 PM

ದೆಹಲಿ: : ಅಸ್ಸಾಂನ ಬಿಜೆಪಿ (BJP)  ಶಾಸಕರೊಬ್ಬರನ್ನು ಪ್ರವಾಹ ರಕ್ಷಣಾ ಕಾರ್ಯಕರ್ತ ಬೆನ್ನ ಮೇಲೆಹೊತ್ತು ದೋಣಿ ಹತ್ತಿರ ತಲುಪಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (Viral Video)ಆಗಿದ್ದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಸ್ಸಾಂನ 27 ಜಿಲ್ಲೆಗಳಲ್ಲಿ 6.6 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ನಲುಗಿದ್ದು ಕನಿಷ್ಠ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. ಇಂಥಾ ಸಂದರ್ಭದಲ್ಲಿ ಲುಮ್ಡಿಂಗ್ ವಿಧಾನಸಭೆಯ ಶಾಸಕ ಸಿಬು ಮಿಶ್ರಾ ಅವರ ಈ ನಡೆ ಸಂವೇದನೆ ರಹಿತವಾದುದು ಎಂದು ಜನರು ಟೀಕಿಸಿದ್ದಾರೆ. ಮಿಶ್ರಾ ಅವರು ಪ್ರವಾಹ ಪರಿಸ್ಥಿತಿ (Assam Flood) ಪರಿಶೀಲಿಸಲು ಹೊಜೈ ಜಿಲ್ಲೆಗೆ ಬಂದಿದ್ದರು. ಸ್ವಲ್ಪವೇ ದೂರದಲ್ಲಿರುವ ದೋಣಿ ಬಳಿ ಹೋಗಲು ಮೊಣಕಾಲು ಮುಳುಗುವಷ್ಟು ನೀರಲ್ಲಿ ರಕ್ಷಣಾ ಕಾರ್ಯಕರ್ತರೊಬ್ಬರು ಶಾಸಕರನ್ನು ಬೆನ್ನಮೇಲೆ ಹೊತ್ತು ಸಾಗುತ್ತಿರುವ ವಿಡಿಯೊವನ್ನು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಮುಂಗಾರು ಮುನ್ನ ಬಂದ ಭಾರೀ ಮಳೆಗೆ ಅಸ್ಸಾಂನಲ್ಲಿ ಪ್ರವಾಹವುಂಟಾಗಿದ್ದು48,000ಕ್ಕಿಂತಲೂ ಹೆಚ್ಚು ಜನರನ್ನು 248 ಸಂತ್ರಸ್ತರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಹೊಜೈ ಮತ್ತು ಕ್ಯಾಚಾರ್ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿವೆ. ಪ್ರತಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ರಕ್ಷಣಾ ಕಾರ್ಯಗಳ ಭಾಗವಾಗಿ ಹೊಜೈ ಜಿಲ್ಲೆಯಲ್ಲಿ ಸಿಲುಕಿದ್ದ 2,000ಕ್ಕೂ ಹೆಚ್ಚು ಜನರನ್ನು ಸೇನೆ ರಕ್ಷಿಸಿದೆ.

ದಕ್ಷಿಣ ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯು ಇಂದು ಐದನೇ ದಿನವೂ ಸಂಪರ್ಕ ಕಡಿತಗೊಂಡಿದೆ. ಮಳೆಯಿಂದ ಉಂಟಾದ ಭೂಕುಸಿತಗಳಿಂದಾಗಿ ದಿಮಾ ಹಸಾವೊಗೆ ರಸ್ತೆ ಮತ್ತು ರೈಲು ಸಂಪರ್ಕಗಳನ್ನು ಕಡಿತಗೊಂಡಿದೆ. ಭಾರೀ ಮಳೆಯ ನಂತರ ನೀರಿನ ಮಟ್ಟ ಹೆಚ್ಚಾದ ಕಾರಣ ವಿಶ್ವದ ಅತಿದೊಡ್ಡ ನದಿಗಳಲ್ಲಿ ಒಂದಾದ ಬ್ರಹ್ಮಪುತ್ರದ ಹಳ್ಳಿಗಳು ಜಲಾವೃತವಾಗಿವೆ. ಇದರಿಂದಾಗಿ ಭಾನುವಾರದಿಂದ ಬರಾಕ್ ಕಣಿವೆ ಮತ್ತು ತ್ರಿಪುರಾ, ಮಿಜೋರಾಂ ಮತ್ತು ಮಣಿಪುರದ ಪ್ರಮುಖ ಭಾಗಗಳಿಗೆ ರಸ್ತೆ ಮತ್ತು ರೈಲು ಸಂಪರ್ಕವನ್ನು ಕಡಿತಗೊಂಡಿದೆ. ಮೃತರ ಕುಟುಂಬಗಳಿಗೆ ಅಸ್ಸಾಂ ಸರ್ಕಾರ ತಲಾ ₹ 4 ಲಕ್ಷ ಆರ್ಥಿಕ ನೆರವು ನೀಡಲಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್