AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal ಪಶ್ಚಿಮ ಬಂಗಾಳದಲ್ಲಿ ತನ್ಮಯ್ ಘೋಷ್ ನಂತರ ಟಿಎಂಸಿ ಸೇರಿದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್

Biswajit Das: ಟಿಎಂಸಿಯಿಂದ ಎರಡು ಬಾರಿ ಶಾಸಕರಾಗಿದ್ದ ದಾಸ್ ಅವರು ಈ ಹಿಂದೆ ಬಿಜೆಪಿಗೆ ಸೇರಿದ್ದರು.ದಾಸ್ ಬೊಂಗಾವ್ (ಉತ್ತರ) ದ ಶಾಸಕರಾಗಿದ್ದರು. ಮುಕುಲ್ ರಾಯ್ ಬಿಜೆಪಿಗೆ ಸೇರಿದ ಬೆನ್ನಲ್ಲೇ ದಾಸ್ ಪಕ್ಷಾಂತರ ಮಾಡಿದ್ದು ಅವರ ಮತ್ತು ಶಾಂತನು ಠಾಕೂರ್ ನಡುವೆ ಭಿನ್ನಾಭಿಪ್ರಾಯಗಳು ತಲೆದೋರಿದವು

West Bengal ಪಶ್ಚಿಮ ಬಂಗಾಳದಲ್ಲಿ ತನ್ಮಯ್ ಘೋಷ್ ನಂತರ ಟಿಎಂಸಿ ಸೇರಿದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್
ಬಿಸ್ವಜಿತ್ ದಾಸ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 31, 2021 | 3:52 PM

Share

ಕೊಲ್ಕತ್ತಾ: ಬಿಷ್ಣುಪುರದ ಶಾಸಕ ತನ್ಮಯ್ ಘೋಷ್ ಅವರು ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್‌ಗೆ ಸೇರಿದ ಬೆನ್ನಲ್ಲೇ  ಬಾಗ್ದಾದ ಮತ್ತೊಬ್ಬ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್ (Biswajit Das) ಮಂಗಳವಾರ ಟಿಎಂಸಿಗೆ ಸೇರಿದ್ದಾರೆ. ನ್ಯೂಸ್ 18 ಜೊತೆ ಮಾತನಾಡಿದ ದಾಸ್   ಬಿಜೆಪಿಯಲ್ಲಿ ಕೆಲಸ ಮಾಡುವುದು ತೃಪ್ತಿ ನೀಡಲಿಲ್ಲ ಮತ್ತು ಹಿತಕರವಾಗಿರಲಿಲ್ಲ ಎಂದು ಹೇಳಿದರು. “ನಾನು ತಪ್ಪು ಮಾಡಿದೆ ಮತ್ತು ಹಿಂತಿರುಗಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ. ಟಿಎಂಸಿಯಿಂದ ಎರಡು ಬಾರಿ ಶಾಸಕರಾಗಿದ್ದ ದಾಸ್ ಅವರು ಈ ಹಿಂದೆ ಬಿಜೆಪಿಗೆ ಸೇರಿದ್ದರು.ದಾಸ್ ಬೊಂಗಾವ್ (ಉತ್ತರ) ದ ಶಾಸಕರಾಗಿದ್ದರು. ಮುಕುಲ್ ರಾಯ್ ಬಿಜೆಪಿಗೆ ಸೇರಿದ ಬೆನ್ನಲ್ಲೇ ದಾಸ್ ಪಕ್ಷಾಂತರ ಮಾಡಿದ್ದು ಅವರ ಮತ್ತು ಶಾಂತನು ಠಾಕೂರ್ ನಡುವೆ ಭಿನ್ನಾಭಿಪ್ರಾಯಗಳು ತಲೆದೋರಿದವು. ಇದಲ್ಲದೆ ಅವರು ಬೊಂಗಾವ್ (ಉತ್ತರ) ಸ್ಥಾನದಿಂದ ಸ್ಪರ್ಧಿಸಲು ಬಯಸಿದ್ದರು. ಆದರೆ ಬಾಗ್ದಾದಿಂದ ಸ್ಪರ್ಧಿಸಲು ಕೇಳಲಾಯಿತು.

ಅಂದಿನಿಂದ ಅವರು ಅತೃಪ್ತರಾಗಿದ್ದರು, ಆದರೆ ರಾಯ್ ಮತ್ತು ಅರ್ಜುನ್ ಸಿಂಗ್ ಅವರನ್ನು ಅಸೆಂಬ್ಲಿ ಚುನಾವಣೆಗೆ ಮುನ್ನ ಟಿಎಂಸಿಗೆ ಹಿಂತಿರುಗಿಸದಂತೆ ತಡೆದರು. ಆದಾಗ್ಯೂ, ಫಲಿತಾಂಶಗಳ ನಂತರ, ರಾಯ್ ಟಿಎಂಸಿಗೆ ಹಿಂದಿರುಗಿದಾಗ ದಾಸ್ ಕೂಡಾ ಅವರನ್ನೇ ಅನುಸರಿಸಿದರು.

ಅಂದ ಹಾಗೆ ಪಕ್ಷಾಂತರವು ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ಹೇಳಿದೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಸಂಖ್ಯೆ ಈಗ 77 ರಿಂದ 72 ಕ್ಕೆ ಇಳಿದಿದೆ. ಬಿಜೆಪಿಯಿಂದ ಹೊರಹೋಗಲು ಹೆಚ್ಚಿನ ಶಾಸಕರು ಸರದಿಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ ಮತ್ತು ಸದ್ಯ ದಿನಜ್‌ಪುರ್ ಶಾಸಕರು ಕೂಡ ಟಿಎಂಸಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ.

ಇದನ್ನೂ ಓದಿ: ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಸೂಚನೆ, ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆದಿಲ್ಲ

ಇದನ್ನೂ ಓದಿ:  ಮುಕುಲ್ ರಾಯ್ ನಂತರ ತೃಣಮೂಲ ಕಾಂಗ್ರೆಸ್ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್

(BJP MLA from Bagda Biswajit Das Joins TMC Says he was made a mistake and wanted to come back)

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್