AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಭಾಗಿಯಾಗಿರುವ ಬಗ್ಗೆ ಸುಳಿವು ನೀಡಿದ ಬಿಜೆಪಿ ಶಾಸಕ; ದ್ವೇಷ ಭಾಷಣದ ವಿಡಿಯೊ ವೈರಲ್

ಈ ತಿಂಗಳ ಆರಂಭದಲ್ಲಿ ಈಶಾನ್ಯ ದೆಹಲಿಯ ಸುಂದರ್ ನಗರಿಯಲ್ಲಿ ಹಿಂದೂ ಯುವಕ ಮನೀಶ್ ಹತ್ಯೆ ಖಂಡಿಸಿ ಭಾನುವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ದ್ವೇಷ ಭಾಷಣಗಳು ನಡೆದಿವೆ.

2020ರ ಈಶಾನ್ಯ ದೆಹಲಿ ಗಲಭೆಯಲ್ಲಿ ಭಾಗಿಯಾಗಿರುವ ಬಗ್ಗೆ ಸುಳಿವು ನೀಡಿದ ಬಿಜೆಪಿ ಶಾಸಕ; ದ್ವೇಷ ಭಾಷಣದ ವಿಡಿಯೊ ವೈರಲ್
ನಂದ್ ಕಿಶೋರ್ ಗುರ್ಜರ್Image Credit source: Twitter/@nkgurjar4bjp
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 11, 2022 | 3:26 PM

Share

ದೆಹಲಿ: ವಿಎಚ್‌ಪಿ (VHP) ಮತ್ತು ಇತರ ಸಂಘಟನೆಗಳು ಭಾನುವಾರ ಆಯೋಜಿಸಿದ್ದ ‘ವಿರಾಟ್ ಹಿಂದೂ ಸಭಾ’ದ ಹಲವು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಇದರಲ್ಲಿ ಗಾಜಿಯಾಬಾದ್‌ನ ಲೋನಿ ಬಿಜೆಪಿ ಶಾಸಕ ನಂದ್ ಕಿಶೋರ್ ಗುರ್ಜರ್(Nand Kishor Gurjar)ಯಾವುದೇ ಹಿಂದೂ ಹತ್ಯೆಯಾದರೆ ನಾನು ಜಿಹಾದಿಗಳನ್ನು ಕೊಲ್ಲಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ. ಗುರ್ಜರ್ ಅವರು ಫೆಬ್ರವರಿ 2020 ರ ಈಶಾನ್ಯ ದೆಹಲಿ ಗಲಭೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾತನಾಡಿದ್ದಾರೆ ಎಂದು ಸೂಚಿಸಿದ ಕೆಲವು ವರದಿಗಳಿವೆ. ಆದರೆ ಗಲಭೆ ವೇಳೆ ದೆಹಲಿಗೆ ಬಂದಿಲ್ಲ ಎಂದು ಶಾಸಕರು ಹೇಳಿದ್ದಾರೆ. “ದೆಹಲಿಯಲ್ಲಿನ ಗಲಭೆಗಳಿಗೂ ನನಗೂ ಏನು ಸಂಬಂಧ? ನಾನು ಅಲ್ಲಿಗೆ ಹೋಗಲಿಲ್ಲ. ನಾನು ಲೋನಿಯಲ್ಲಿ 25,000 ಜನರೊಂದಿಗೆ ಸಿದ್ಧನಿದ್ದೇನೆ ಎಂದು ಸಮಾರಂಭದಲ್ಲಿ ಹೇಳಿದ್ದೇನೆ ಆದ್ದರಿಂದ ದೆಹಲಿಯಲ್ಲಿ ಗಲಭೆಗಳು ನಡೆದರೂ ಇಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ ಎಂದು ಪಿಟಿಐ ಜತೆ ದೂರವಾಣಿಯಲ್ಲಿ ಮಾತನಾಡಿದ ಗುರ್ಜರ್ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಈಶಾನ್ಯ ದೆಹಲಿಯ ಸುಂದರ್ ನಗರಿಯಲ್ಲಿ ಹಿಂದೂ ಯುವಕ ಮನೀಶ್ ಹತ್ಯೆ ಖಂಡಿಸಿ ಭಾನುವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ದ್ವೇಷ ಭಾಷಣಗಳು ನಡೆದಿವೆ. ಈ ಕಾರ್ಯಕ್ರಮದ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಗುರ್ಜರ್ ತಮ್ಮ ಫೈರ್‌ಬ್ರಾಂಡ್ ಶೈಲಿಯಲ್ಲಿ ಭಾಷಣ ಮಾಡುವುದು ಇದರಲ್ಲಿದೆ. ಸಿಎಎ ವಿಚಾರವಾಗಿ ದೆಹಲಿಯಲ್ಲಿ ಗಲಭೆ ನಡೆದಿದೆ. ಜಿಹಾದಿಗಳು ಹಿಂದೂಗಳನ್ನು ಕೊಲ್ಲಲು ಪ್ರಾರಂಭಿಸಿದರು. ನೀವು ನಮ್ಮನ್ನು ಅಲ್ಲಿಗೆ ಕರೆದುಕೊಳ್ಳಿ. ನಾನು 2.5 ಲಕ್ಷ ಜನರೊಂದಿಗೆ ದೆಹಲಿಗೆ ಪ್ರವೇಶಿಸಿದ್ದೇನೆ ಎಂದು ಆರೋಪವಿದೆ.

“ಹಮ್ ತೋ ಸಮ್ಜಾನೆ ಕೆ ಲಿಯೇ ಗಯೇ ತೇ ಲೇಕಿನ್ ಹಮ್ ಪರ್ ಪೋಲೀಸ್ ನೆ ಮುಕದ್ಮಾ ದರ್ಜ್ ಕರ್ ದಿಯಾ ಕಿ ಹಮ್ನೆ ಜೆಹಾದಿಯೋಂ ಕೊ ಮರ್ನೆ ಕಾ ಕಾಮ್ ಕಿಯಾ (ನಾವು ಜನರಿಗೆ ವಿವರಿಸಲು ಅಲ್ಲಿಗೆ ಹೋಗಿದ್ದೆವು. ಆದರೆ ನಾವು ಜಿಹಾದಿಗಳನ್ನು ಕೊಲ್ಲಲು ಹೋಗಿದ್ದೇವೆ ಎಂದು ಪೊಲೀಸರು ನಮ್ಮ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಗುರ್ಜರ್ ವಿಡಿಯೊದಲ್ಲಿ ಹೇಳುವುದನ್ನು ಕೇಳಬಹುದು.

ಯಾವುದೇ ಹಿಂದೂಗಳನ್ನು ಕೊಂದರೆ “ಜಿಹಾದಿಗಳನ್ನು” ಕೊಲ್ಲುವುದಕ್ಕೆ ಹಿಂಜರಿಯುವುದಿಲ್ಲ ಎಂದು ಗುರ್ಜರ್ ವಿಡಿಯೊದಲ್ಲಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವಿಡಿಯೊಗಳನ್ನು ನೋಡಿದ್ದೇನೆ. ಅವುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಗುರ್ಜರ್ ಪ್ರತಿಕ್ರಿಯಿಸಿದ್ದಾರೆ. ಮತ್ತೊಂದು ವಿಡಿಯೊದಲ್ಲಿ, ಪಶ್ಚಿಮ ದೆಹಲಿಯ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರು ಸಮುದಾಯವನ್ನು “ಸಂಪೂರ್ಣ ಬಹಿಷ್ಕಾರ” ಕ್ಕೆ ಕರೆ ನೀಡುವುದನ್ನು ಕೇಳಬಹುದು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಕಾರ್ಯಕ್ರಮದ ಇತರ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.  ಪೊಲೀಸರಿಂದ ಅನುಮತಿ ಪಡೆಯದಿದ್ದಕ್ಕಾಗಿ ಸಂಘಟಕರ ವಿರುದ್ಧ ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ಆಯುಕ್ತ (ಶಹದ್ರಾ) ಆರ್ ಸತ್ಯಸುಂದರಂ ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ನಗರ ಪೊಲೀಸರಿಂದ ಅನುಮತಿ ಪಡೆದಿಲ್ಲ ಎಂಬ ಹೇಳಿಕೆಯನ್ನು ವಿಎಚ್‌ಪಿ ತಳ್ಳಿಹಾಕಿದೆ ದಿಲ್ಶಾದ್ ಗಾರ್ಡನ್‌ನಲ್ಲಿರುವ ಕಾರ್ಯಕ್ರಮದ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವಿಎಚ್‌ಪಿ ಹೇಳಿದೆ.

ಈ ತಿಂಗಳ ಆರಂಭದಲ್ಲಿ ದೆಹಲಿಯ ಸುಂದರ್ ನಗರಿಯಲ್ಲಿ ಮನೀಶ್‌ನನ್ನು ಇರಿದು ಹತ್ಯೆ ಮಾಡಲಾಗಿತ್ತು. ದೆಹಲಿ ಪೊಲೀಸರು ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಾದ ಆಲಂ, ಬಿಲಾಲ್ ಮತ್ತು ಫೈಜಾನ್ ಅವರನ್ನು ಬಂಧಿಸಿದ್ದು ಹಳೆ ವೈಷಮ್ಯದಿಂದ ಮನೀಶ್ ಹತ್ಯೆ ಮಾಡಲಾಗಿದೆ ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

Published On - 1:56 pm, Tue, 11 October 22

ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ