Big News: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬಂಧನ
ರಾಜಾ ಸಿಂಗ್ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಹೈದರಾಬಾದ್: ಪ್ರವಾದಿ ಮೊಹಮ್ಮದ್ (Prophet Muhammad) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಶಾಸಕ ರಾಜಾ ಸಿಂಗ್ (T Raja Singh) ಪ್ರವಾದಿ ಕುರಿತು ಮಾತನಾಡುವ ವಿಡಿಯೋವನ್ನು ಬಿಡುಗಡೆ ಮಾಡಿದ ನಂತರ ಪ್ರತಿಭಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಗೋಶಾಮಹಲ್ ಬಿಜೆಪಿ ಶಾಸಕ ರಾಜಾ ಸಿಂಗ್ ಅವರು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಸೋಮವಾರ ಮಧ್ಯರಾತ್ರಿ ಮತ್ತು ನಂತರ ಇಂದು ಬೆಳಿಗ್ಗೆ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಮತ್ತು ಪಟ್ಟಣದ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು. ರಾಜಾ ಸಿಂಗ್ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ರಾಜಾ ಸಿಂಗ್ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದರು. ಬಶೀರ್ ಬಾಗ್‌ನಲ್ಲಿರುವ ಕಮಿಷನರ್ ಕಚೇರಿಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಹಲವು ಪೊಲೀಸ್ ಠಾಣೆಗಳಿಗೆ ಸ್ಥಳಾಂತರಿಸಿದ್ದಾರೆ.
ಪ್ರತಿಭಟನೆಯ ನಡುವೆ ಕಳೆದ ವಾರ ಹೈದರಾಬಾದ್‌ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದ ಹಾಸ್ಯನಟ ಮುನಾವರ್ ಫರುಕಿ ವಿರುದ್ಧ ಬಿಜೆಪಿ ಶಾಸಕ ಪ್ರವಾದಿ ಮೊಹಮ್ಮದ್ ಬಗ್ಗೆ ಕಾಮಿಡಿಯಾಗಿ ಮಾತನಾಡಿ ವಿಡಿಯೋವನ್ನು ಮಾಡಿದ್ದರು. ಇದಕ್ಕೂ ಮೊದಲು, ರಾಜಾ ಸಿಂಗ್ ಅವರು ನನ್ನ ಕಾರ್ಯಕ್ರಮವನ್ನು ನಿಲ್ಲಿಸುವಂತೆ ಬೆದರಿಕೆ ಹಾಕಿದ್ದರು. ಅಲ್ಲದೆ, ಕಾರ್ಯಕ್ರಮದ ಸ್ಥಳದಲ್ಲಿದ್ದ ಸೆಟ್ ಅನ್ನು ಸುಟ್ಟುಹಾಕುವುದಾಗಿ ಹೇಳಿದ್ದರು ಎಂದು ಮುನಾವರ್ ಫರುಕಿ ತಿಳಿಸಿದ್ದಾರೆ.
ಇದನ್ನೂ ಓದಿ: ತೆಲಂಗಾಣ: ಬಿಜೆಪಿ ಪ್ರಜಾ ಸಂಗ್ರಾಮ ಯಾತ್ರೆ ವೇಳೆ ಟಿಆರ್‌ಎಸ್ ಕಾರ್ಯಕರ್ತರೊಂದಿಗೆ ಸಂಘರ್ಷ; ಹಲವರಿಗೆ ಗಾಯ
ಹೈದರಾಬಾದ್‌ನಲ್ಲಿ ಹಾಸ್ಯನಟನ ಕಾರ್ಯಕ್ರಮ ನಡೆದ ಎರಡು ದಿನಗಳ ನಂತರ ರಾಜಾ ಸಿಂಗ್, ಇದನ್ನು “ಕಾಮಿಡಿ” ಎಂದು ಕರೆದಿದ್ದರು. ಅಲ್ಲದೆ, ಹಾಸ್ಯನಟ ಮುನಾವರ್ ಫರುಕಿ ಮತ್ತು ಅವರ ತಾಯಿಯನ್ನು ನಿಂದಿಸಿದ್ದರು. ಅವರ ಹೇಳಿಕೆಗಳಿಂದಾಗಿ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಅವರ ವೀಡಿಯೊವನ್ನು ಅನುಸರಿಸಿ, ಬಿಜೆಪಿ ಶಾಸಕನ ಹೇಳಿಕೆಗಾಗಿ ದಬೀರ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರತಿಭಟನೆಗಳು ಭುಗಿಲೆದ್ದ ನಂತರ ಇಂದು ಕೂಡ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
Telangana Police detains BJP MLA Raja Singh for his alleged derogatory comments against Prophet Muhammad https://t.co/wZrwhIX1D1 pic.twitter.com/e4kkvM10ZQ
— ANI (@ANI) August 23, 2022
ಪ್ರವಾದಿ ಮುಹಮ್ಮದ್ ವಿರುದ್ಧ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದ ಕಾರಣದಿಂದ ಹೈದರಾಬಾದ್ ಪೊಲೀಸ್ ಆಯುಕ್ತರ ಕಚೇರಿ, ಲಕ್ಡಿಕಾಪುಲ್‌ನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮತ್ತು ಪುರಾನಿ ಹವೇಲಿಯಲ್ಲಿರುವ ಹಳೆಯ ಪೊಲೀಸ್ ಕಮಿಷನರ್ ಕಚೇರಿ ಮತ್ತು ನಗರದ ಇತರ ಪ್ರಮುಖ ಸ್ಥಳಗಳ ಹೊರಗೆ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.
.‘ಅವನು ಭಗವಾನ್ ರಾಮ ಮತ್ತು ಸೀತೆಯನ್ನು ನಿಂದಿಸುತ್ತಿದ್ದಾನೆ’ ಎಂದು ನನಗೆ ಅನಿಸಿದ್ದರಿಂದ ನಾನು ಅವನ ಮತ್ತು ಮುಸ್ಲಿಮರು ಧರಿಸಿರುವ ವೃತ್ತಾಕಾರದ ಟೋಪಿಗಳ ಬಗ್ಗೆ ಸಂಶೋಧನೆ ಮಾಡಬೇಕು ಎಂದು ಹೇಳಿದೆ ಎಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ರಾಜಾ ಸಿಂಗ್ 10 ನಿಮಿಷ 27 ಸೆಕೆಂಡುಗಳ ವೀಡಿಯೊದಲ್ಲಿ ಹೇಳಿದ್ದಾರೆ. ವೀಡಿಯೊದ ಕೊನೆಯಲ್ಲಿ, ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ ನಂತರ ರಾಜಾ ಸಿಂಗ್ ತಾವು ಏನು ಹೇಳಿದರೂ ಅದು ಕಾಮಿಡಿ ಎಂದು ಹೇಳಿದ್ದಾರೆ. ತೆಲಂಗಾಣದ ಶ್ರೀರಾಮ್ ಚಾನೆಲ್ನಲ್ಲಿ ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ.
ಇದನ್ನೂ ಓದಿ: Video Viral: ಅಮಿತ್ ಶಾ ಪಾದರಕ್ಷೆ ತರುತ್ತಿರುವ ವೀಡಿಯೊ ವೈರಲ್, ತೆಲಂಗಾಣಕ್ಕೆ ಇದು ಹೆಮ್ಮೆ ಎಂದ ಟಿಆರ್‌ಎಸ್
ತೆಲಂಗಾಣ ಪೊಲೀಸರು ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ. ರಾಜಾ ಸಿಂಗ್ ಮೇಲಿನ ದಾಳಿಯ ಭೀತಿಯಿಂದ ಪೊಲೀಸರು ಮಂಗಲ್‌ಹಟ್ ಮತ್ತು ಧೂಲ್‌ಪೇಟ್ ಮತ್ತು ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನೋಡಿದಂತೆ ‘ಚಲೋ ಗೋಶಾಮಹಲ್’ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿರುವುದರಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ತೆಲಂಗಾಣ ರಾಜ್ಯ ವಿಶೇಷ ಪೊಲೀಸ್, ಗ್ರೇಹೌಂಡ್ಸ್ ಮತ್ತು ನೆರೆಯ ಜಿಲ್ಲೆಗಳ ಮೀಸಲು ವಿಭಾಗಗಳಿಂದ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಪೊಲೀಸ್ ಪಡೆಗಳನ್ನು ಸಹ ನಿಯೋಜಿಸಲಾಗಿದೆ. ಹೈದರಾಬಾದ್‌ನ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತು ಹಳೆಯ ನಗರದಲ್ಲಿ ಪೊಲೀಸ್ ಪಿಕೆಟ್‌ಗಳನ್ನು ಸಹ ಪೋಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು ಇಂದು ಬೆಳಗ್ಗೆ ಸಭೆ ನಡೆಸಿ ಇಡೀ ರಾಜ್ಯದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಆದಿಲಾಬಾದ್, ಕರೀಂನಗರ, ನಿಜಾಮಾಬಾದ್, ವಿಕಾರಾಬಾದ್ ಮತ್ತು ಮಹೆಬೂಬ್‌ನಗರ ಜಿಲ್ಲೆಗಳಲ್ಲಿ ಅನಧಿಕೃತವಾಗಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಅವಮಾನಕಾರಿ ಹೇಳಿಕೆ ನೀಡಿ ಇಡೀ ಜಗತ್ತಿನಾದ್ಯಂತ ಚರ್ಚೆಗೀಡಾಗಿದ್ದರು. ನಂತರ ಬಿಜೆಪಿ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಿತ್ತು. ಅವರು ಹೇಳಿದ ವಿಷಯಗಳನ್ನು ರಾಜಾ ಸಿಂಗ್ ಮತ್ತೆ ಪುನರಾವರ್ತಿಸಿ, ಗಲಭೆ ಎಬ್ಬಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:57 am, Tue, 23 August 22