Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ

| Updated By: ರಶ್ಮಿ ಕಲ್ಲಕಟ್ಟ

Updated on: Dec 25, 2022 | 3:52 PM

ತುನಿಶಾ ಶರ್ಮಾ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಆಕೆಯ ಅವರ ಸಹೋದ್ಯೋಗಿಗಳು ಹೇಳಿದ್ದಾರೆ. ಆದರೆ ಪೊಲೀಸರು ಸ್ಥಳದಲ್ಲೇ ತನಿಖೆ ನಡೆಸಿದ್ದು, ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ

Tunisha Sharma’s Death: ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಲವ್​​ ಜಿಹಾದ್​​ ಕಾರಣವೇ ಎಂಬುದು ತನಿಖೆಯಾಗಬೇಕು: ಬಿಜೆಪಿ ಶಾಸಕ
ತುನಿಶಾ ಶರ್ಮಾ
Follow us on

ಮುಂಬೈ: ಮಹಾರಾಷ್ಟ್ರದ ಜನಪ್ರಿಯ ನಟಿ ತುನಿಶಾ ಶರ್ಮಾ(Tunisha Sharma) ಆತ್ಮಹತ್ಯೆ ಪ್ರಕರಣವನ್ನು ಬಿಜೆಪಿ ಶಾಸಕ ರಾಮ್ ಕದಮ್ (Ram Kadam) ಲವ್ ಜಿಹಾದ್ (love jihad) ಎಂದಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸೈ ಎಂಬಲ್ಲಿ ಶನಿವಾರ ಟಿವಿ ಕಾರ್ಯಕ್ರಮದ ಸೆಟ್‌ನಲ್ಲಿ ತುನಿಶಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಅಲಿ ಬಾಬಾ: ದಸ್ತಾನ್-ಎ-ಕಾಬುಲ್’ ಟಿವಿ ಶೋನಲ್ಲಿ ಆಕೆಯ ಸಹನಟ ಶೀಜಾನ್ ಮೊಹಮ್ಮದ್ ಖಾನ್ ಎಂಬಾತನ್ನು ಬಂಧಿಸಲಾಗಿದೆ. ತುನಿಶಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾನೆ ಎಂದು ತುನಿಶಾ ಅವರ ತಾಯಿಯ ದೂರಿನ ಆಧಾರದ ಮೇಲೆ ಖಾನ್​​ನ್ನು ಬಂಧಿಸಲಾಯಿತು. ತುನಿಶಾ ಮತ್ತು ಖಾನ್ ಪ್ರೇಮಿಗಳಾಗಿದ್ದು, 15 ದಿನಗಳ ಹಿಂದೆ ಈ ಸಂಬಂಧ ಮುರಿದುಬಿದ್ದಿತ್ತು. ಲವ್ ಬ್ರೇಕಪ್ ತುನಿಶಾ ಶರ್ಮಾ ಆತ್ಮಹತ್ಯೆಗೆ ಕಾರಣ ಎಂದು ಎಐಆರ್ ಬಹಿರಂಗಪಡಿಸಿದೆ. ಪ್ರಕರಣವನ್ನು ಕೂಲಂಕಷವಾಗಿ ತನಿಖೆ ಮಾಡಲಾಗುವುದು. ಎಲ್ಲಾ ಕೋನಗಳನ್ನು ಪರಿಶೀಲಿಸಲಾಗುವುದು ಎಂದು ರಾಮ್ ಕದಮ್ ಹೇಳಿದ್ದಾರೆ. ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ, ತುನಿಶಾ ಶರ್ಮಾ ಅವರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ಶಾಸಕರು ಹೇಳಿದ್ದಾರೆ. “ಆತ್ಮಹತ್ಯೆಗೆ ಕಾರಣವೇನು? ಇದರಲ್ಲಿ ಲವ್ ಜಿಹಾದ್ ಇದೆಯೇ? ಅಥವಾ ಇನ್ನಾವುದೇ ವಿಚಾರವಿದೆಯೇ ಎಂಬುದು ತನಿಖೆಯಿಂದ ಹೊರಬರುತ್ತದೆ. ತುನೀಶಾ ಶರ್ಮಾ ಕುಟುಂಬಕ್ಕೆ 100 ರಷ್ಟು ನ್ಯಾಯ ಸಿಗುತ್ತದೆ. ಇದು ಲವ್ ಜಿಹಾದ್ ಪ್ರಕರಣವಾಗಿದ್ದರೆ ಪೊಲೀಸರು ಇದರ ಹಿಂದೆ ಯಾವ ಸಂಘಟನೆಗಳು ಮತ್ತು ಸಂಚುಕೋರರು ಯಾರು ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ಮುಂಬೈನ ವಸೈ ನ್ಯಾಯಾಲಯವು ಇಂದು (ಭಾನುವಾರ) ಮಧ್ಯಾಹ್ನ ಶೀಜಾನ್ ಮೊಹಮ್ಮದ್ ಖಾನ್ ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ನ್ಯಾಯಾಲಯದಲ್ಲಿ, ಖಾನ್ ಅವರ ವಕೀಲ ಶರದ್ ರೈ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, “ಏನೇ ನಡೆದರೂ ಪೊಲೀಸರು ಮತ್ತು ನ್ಯಾಯಾಲಯವು ಕೆಲಸ ಮಾಡುತ್ತಿದೆ. ಅವರನ್ನು (ಶೀಜಾನ್ ಖಾನ್) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅವರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ” ಎಂದು ಹೇಳಿದರು.

ಘಟನೆಯ ಕುರಿತು ವಿಚಾರಣೆಗಾಗಿ ಭಾನುವಾರ ಮತ್ತೊಬ್ಬ ಸಹ ನಟ ಪಾರ್ಥ್ ಜುಟ್ಶಿ ಅವರನ್ನು ಪೊಲೀಸರು ಕರೆದಿದ್ದಾರೆ.
ಪೊಲೀಸ್ ಠಾಣೆಯ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ  ಜುಟ್ಶಿ, ಘಟನೆಯ ಸಮಯದಲ್ಲಿ ನಾನು ಸೆಟ್‌ನಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.”ನನ್ನನ್ನು ಪೊಲೀಸರು ವಿಚಾರಣೆಗೆ ಕರೆದರು.ಅಲ್ಲಿ ಅವರು ಸಾಮಾನ್ಯ ಪ್ರಶ್ನೆಗಳನ್ನು ಕೇಳಿದರು. ನಾನು ಅವಳ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.ಆಕೆಯ ಸಂಬಂಧದ ಬಗ್ಗೆ ನಾನು ಮಾತನಾಡಲಾರೆ, ಅದು ಅವರ ವೈಯಕ್ತಿಕ ಸಂಗತಿ ಎಂದಿದ್ದಾರೆ.

ಇದನ್ನೂ ಓದಿ: Main Atal Hoon: ಅಟಲ್​ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಪಂಕಜ್​​ ತ್ರಿಪಾಠಿ; ‘ಮೈ ಅಟಲ್​ ಹು’ ಫಸ್ಟ್​ ಲುಕ್​ ರಿಲೀಸ್​

20 ವರ್ಷ ವಯಸ್ಸಿನ ನಟಿ ತುನಿಶಾ ಶೂಟಿಂಗ್ ಮಾಡುವಾಗ ಚಹಾ ವಿರಾಮದ ನಂತರ ವಾಶ್‌ರೂಮ್‌ನಲ್ಲಿ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಎಷ್ಟೋ ಹೊತ್ತಾದರೂ ಆಕೆ ಹೊರಗೆ ಬರದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳಹೋಗಬೇಕಾಯಿತು ಎಂದು ವಾಲೀವ್ ಪೊಲೀಸರು ತಿಳಿಸಿದ್ದಾರೆ. ಶೂಟಿಂಗ್ ಸಿಬ್ಬಂದಿ ಆಕೆಯನ್ನು ಮಧ್ಯರಾತ್ರಿ 1:30 ರ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವಳು ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.

ತುನಿಶಾ ಶರ್ಮಾ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಆಕೆಯ ಅವರ ಸಹೋದ್ಯೋಗಿಗಳು ಹೇಳಿದ್ದಾರೆ. ಆದರೆ ಪೊಲೀಸರು ಸ್ಥಳದಲ್ಲೇ ತನಿಖೆ ನಡೆಸಿದ್ದು, ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ. ಆಕೆಯ ಸಾವನ್ನು ಕೊಲೆ ಮತ್ತು ಆತ್ಮಹತ್ಯಾ ಕೋನಗಳೆರಡರಿಂದಲೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ