ಮುಸ್ಲಿಮರನ್ನು ಹುಡುಕಿ ಕೊಲ್ತೇವೆ ಎಂದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು

ಬಿಜೆಪಿ ಶಾಸಕ ನಿತೇಶ್ ರಾಣೆಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಾಗಿವೆ. ಅಹ್ಮದ್‌ನಗರ ಪೊಲೀಸರ ಪ್ರಕಾರ, ನಿನ್ನೆ ಅಹ್ಮದ್‌ನಗರ ಜಿಲ್ಲೆಯ ಶ್ರೀರಾಮಪುರ ಮತ್ತು ಟೋಪ್‌ಖಾನಾ ಪೊಲೀಸ್ ಪ್ರದೇಶಗಳಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ ಬಿಜೆಪಿ ಶಾಸಕ ನಿತೀಶ್ ರಾಣೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿತೀಶ್ ರಾಣೆ ಅವರು ಅಹ್ಮದ್ ನಗರದಲ್ಲಿ ಸಕಲ್ ಹಿಂದೂ ಸಮಾಜ ಚಳವಳಿಯಲ್ಲಿ ಭಾಗವಹಿಸಿ ಭಾಷಣ ಮಾಡಿದ್ದರು.

ಮುಸ್ಲಿಮರನ್ನು ಹುಡುಕಿ ಕೊಲ್ತೇವೆ ಎಂದ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲು
ನಿತೀಶ್​ ರಾಣೆ

Updated on: Sep 02, 2024 | 10:52 AM

ಮುಸ್ಲಿಮರನ್ನು ಹುಡುಕಿ ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿರುವ ಬಿಜೆಪಿ ಶಾಸಕ ನಿತೀಶ್​ ರಾಣೆ ವಿರುದ್ಧ ಪ್ರಕರಣ ದಾಖಲಾಗಿದೆ. ರಾಣೆ ಅವರು ಉದ್ರೇಕಕಾರಿ ಭಾಷಣಗಳನ್ನು ನೀಡಿದ್ದಾರೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಾರಾಷ್ಟ್ರದ ಅಹ್ಮದ್​ನಗರದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಶಾಸಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 302, 153 ಮತ್ತು ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಿತೀಶ್ ರಾಣೆ ಅವರು ಕಾರ್ಯಕ್ರಮವೊಂದರಲ್ಲಿ ಮುಸ್ಲಿಮರಿಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ ಎಂದು ಟಿವಿ9 ಭಾರತ್​ವರ್ಷ್​ ವರದಿ ಮಾಡಿದೆ.

ಅವರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಒಂದು ಪ್ರಕರಣ ಶ್ರೀರಾಮಪುರದಲ್ಲಿ ಮತ್ತು ಇನ್ನೊಂದು ತೋಪಖಾನಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮತ್ತಷ್ಟು ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌‌ಗೆ ಜಾಮೀನು

ಎಐಎಂಐಎಂ ನಾಯಕ ವಾರೀಶ್ ಪಠಾಣ್ ನಿತೀಶ್ ರಾಣೆ ಅವರ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು ಬಿಜೆಪಿಯು ಚುನಾವಣೆಗೆ ಮುನ್ನ ಕೋಮುಗಲಭೆ ಸೃಷ್ಟಿಸಲು ಬಯಸುತ್ತದೆ ಎಂದು ಆರೋಪಿಸಿದ್ದಾರೆ. ನಿತೀಶ್ ರಾಣೆ ಭಾಷಣದಲ್ಲಿ ಉದ್ರೇಕಕಾರಿಯಾಗಿದ್ದು, ನಿತೀಶ್ ವಿರುದ್ಧ ಎಫ್ ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us