ಜೈ ಬಂಗಾಳ್​ ಎಂದ ಮಮತಾ ಬ್ಯಾನರ್ಜಿಗೆ ಜೈ ಶ್ರೀರಾಮ್​ ಎಂದು ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕರು; ಗೂಂಡಾಗಳು ಎಂದು ಬೈದ ದೀದಿ

ತಮ್ಮ ಭಾಷಣದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಕೇಂದ್ರ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ. ಅಂಫಾನ್​ ಚಂಡಮಾರುತದಿಂದ ಹಾನಿ ಪರಿಹಾರಕ್ಕೂ ಯಾವುದೇ ನೆರವು ನೀಡಲಿಲ್ಲ ಎಂದು ಹೇಳಿದ್ದಾರೆ.

ಜೈ ಬಂಗಾಳ್​ ಎಂದ ಮಮತಾ ಬ್ಯಾನರ್ಜಿಗೆ ಜೈ ಶ್ರೀರಾಮ್​ ಎಂದು ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕರು; ಗೂಂಡಾಗಳು ಎಂದು ಬೈದ ದೀದಿ
ಮಮತಾ ಬ್ಯಾನರ್ಜಿ
Follow us
TV9 Web
| Updated By: Lakshmi Hegde

Updated on: Mar 10, 2022 | 9:39 AM

ಪಶ್ಚಿಮ ಬಂಗಾಳ ವಿಧಾನಸಭೆ (West Bengal Assembly) ಬುಧವಾರ ಸಿಕ್ಕಾಪಟೆ ಗದ್ದಲದಿಂದ ಕೂಡಿತ್ತು. ಅಲ್ಲಿನ ವ್ಯವಸ್ಥೆ ಪೂರ್ತಿ ಹಾಳಾಗಿತ್ತು. ಇದಕ್ಕೆ ಕಾರಣ, ಬಜೆಟ್​ ಅಧಿವೇಶನದ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಮಾಡಿದ ಭಾಷಣ. ಬಿಜೆಪಿ ಇಡೀ ದೇಶವನ್ನು ನಾಶ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳುತ್ತಿದ್ದಂತೆ  ಬಿಜೆಪಿ ನಾಯಕರು ದೀದಿ ವಿರುದ್ಧ ಘೋಷಣೆ ಕೂಗಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, ಮೋದಿ, ಮೋದಿ ಎಂದೂ ಕೂಗಿದ್ದಾರೆ. ಅದಕ್ಕೆ ಪ್ರತಿಯಾಗಿ  ಮಮತಾ ಬ್ಯಾನರ್ಜಿ ಜೈ ಬಂಗಾಳ್​ ಎಂದು ಹೇಳಿದರೆ, ಬಿಜೆಪಿಗರು ಮತ್ತೆ ಜೈ ಶ್ರೀರಾಮ್​ ಘೋಷಣೆ ಮೂಲಕ ಪ್ರತಿಕ್ರಿಯೆ ನಡೆಸಿದ್ದಾರೆ.

ನಿನ್ನೆ ತಮ್ಮ ಭಾಷಣದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಕೇಂದ್ರ ಬಿಜೆಪಿ ಸರ್ಕಾರ ನಮ್ಮ ರಾಜ್ಯಕ್ಕೆ ಹಣ ಬಿಡುಗಡೆ ಮಾಡುತ್ತಿಲ್ಲ. ಅಂಫಾನ್​ ಚಂಡಮಾರುತದಿಂದ ಹಾನಿ ಪರಿಹಾರಕ್ಕೂ ಯಾವುದೇ ನೆರವು ನೀಡಲಿಲ್ಲ ಎಂದು ಹೇಳಿದ್ದಾರೆ. ಹೀಗೆ ಮಮತಾ ಬ್ಯಾನರ್ಜಿ  ಬಿಜೆಪಿ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಿದ್ದಂತೆ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಗಲಾಟೆ ಶುರು ಮಾಡಿದ್ದಾರೆ.  ಇದಕ್ಕೂ ಮೊದಲು ಸೋಮವಾರ ಬಿಜೆಪಿ ಶಾಸಕರಾದ ಮಿಹಿರ್​ ಗೋಸ್ವಾಮಿ ಮತ್ತು ಸುದೀಪ್​ ಮುಖೋಪಾಧ್ಯಾಯ ಎಂಬುವರನ್ನು ಸ್ಪೀಕರ್​ ವಿಮನ್​ ಬ್ಯಾನರ್ಜಿ ವಜಾಗೊಳಿಸಿದ್ದರು. ಇವರಿಬ್ಬರೂ ರಾಜ್ಯಪಾಲರ ಭಾಷಣದ ವೇಳೆ ಗದ್ದಲ ಸೃಷ್ಟಿಸಿದ್ದಾರೆ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿತ್ತು. ಈ ಇಬ್ಬರು ಶಾಸಕರ ಅಮಾನತು ವಿರೋಧಿಸಿ ಉಳಿದ ಶಾಸಕರು, ನಂದಿಗ್ರಾಮ ಶಾಸಕ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ವಿಧಾನಸಭೆಯಿಂದ ಹೊರ ನಡೆದರು.

ಸೋಮವಾರ ಬಜೆಟ್​ ಅಧಿವೇಶನದ ಪ್ರಾರಂಭದಲ್ಲಿ ರಾಜ್ಯಪಾಲ ಜಗದೀಪ್ ಧನ್​ಕರ್​ ಅವರು ಭಾಷಣ ಮಾಡುವಾಗ ಬಿಜೆಪಿಯ ಶಾಸಕರು ಗಲಾಟೆ ಸೃಷ್ಟಿಸಿದ್ದರು. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂಸಾಚಾರ ನಡೆದಿದೆ. ಇದಕ್ಕೆ ಕಾರಣ ಟಿಎಂಸಿ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಗಲಾಟೆಯಿಂದ ಬೇಸತ್ತ ರಾಜ್ಯಪಾಲರು ಅರ್ಧಕ್ಕೆ ಭಾಷಣ ನಿಲ್ಲಿಸಿದರು. ಈ ವೇಳೆ ತೃಣಮೂಲ ಕಾಂಗ್ರೆಸ್​ನ ಮಹಿಳಾ ಶಾಸಕಿಯರು ರಾಜ್ಯಪಾಲರ ಬಳಿ ಮಾತು ಮುಂದುವರಿಸುವಂತೆ ಬೇಡಿಕೊಂಡರೂ, ಅವರು ಭಾಷಣ ಮಾಡಿರಲಿಲ್ಲ. ಈ ಬಗ್ಗೆ ವಾಗ್ದಾಳಿ ನಡೆಸಿದ ಮಮತಾ ಬ್ಯಾನರ್ಜಿ, ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಸೋತರೂ, ಗೂಂಡಾಗಿರಿ ಮಾಡುವುದನ್ನು ಬಿಟ್ಟಿಲ್ಲ. ನಾಚಿಕೆ ಇಲ್ಲದವರು ಎಂದು ಹೇಳಿದ್ದರು.

ಇದನ್ನೂ ಓದಿ: Akshay Kumar: ‘ನಾನು ಕೆಲಸ ಮಾಡುತ್ತಿರೋದು ಹಣಕ್ಕಾಗಿ ಅಲ್ಲ’; ಅಚ್ಚರಿಯ ವಿಚಾರ ಹೇಳಿಕೊಂಡ ಅಕ್ಷಯ್ ಕುಮಾರ್!

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್