AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತುಂಬಾ ಸುಸ್ತಾಗಿದೆಯಾ?’; ಎಸ್‌ಐಆರ್ ಪ್ರತಿಭಟನೆ ನಡುವೆ ವಿಯೆಟ್ನಾಮ್​ಗೆ ಹೊರಟ ರಾಹುಲ್ ಗಾಂಧಿಗೆ ಬಿಜೆಪಿ ಲೇವಡಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೆಹಲಿಯಿಂದ ವಿಯೆಟ್ನಾಮ್‌ಗೆ ವಿಮಾನದಲ್ಲಿ ಪ್ರಯಾಣಿಸುತ್ತಿರುವ ವಿಡಿಯೋವನ್ನು ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು "ತುಂಬಾ ಆಯಾಸಗೊಂಡಿದ್ದೀರಾ?" ಎಂದು ವ್ಯಂಗ್ಯವಾಗಿ ಪ್ರಶ್ನಿಸಿರುವ ಬಿಜೆಪಿ, ದೇಶದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲೇ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದ್ದಾರೆ ಎಂದು ಟೀಕಿಸಿದೆ. ಇದಕ್ಕೆ ಕಾಂಗ್ರೆಸ್ ಪಕ್ಷವು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದೆ.

'ತುಂಬಾ ಸುಸ್ತಾಗಿದೆಯಾ?'; ಎಸ್‌ಐಆರ್ ಪ್ರತಿಭಟನೆ ನಡುವೆ ವಿಯೆಟ್ನಾಮ್​ಗೆ ಹೊರಟ ರಾಹುಲ್ ಗಾಂಧಿಗೆ ಬಿಜೆಪಿ ಲೇವಡಿ
ರಾಹುಲ್ ಗಾಂಧಿImage Credit source: TV9
ಸುಷ್ಮಾ ಚಕ್ರೆ
|

Updated on:Oct 20, 2026 | 3:20 PM

Share

ಮುಖ್ಯಾಂಶಗಳು

  • ಎಸ್​ಐಆರ್​ ವಿರೋಧಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ರಾಹುಲ್ ಗಾಂಧಿ ವಿದೇಶ ಪ್ರವಾಸ
  • ವಿಯೆಟ್ನಾಂಗೆ ಹೊರಟ ರಾಹುಲ್ ಗಾಂಧಿಯ ವಿಡಿಯೋ ಹಂಚಿಕೊಂಡ ಬಿಜೆಪಿ
  • ವಿಮಾನದಲ್ಲಿ ರಾಹುಲ್ ಗಾಂಧಿ ಕುಳಿತ ವಿಡಿಯೋ ವೈರಲ್

ನವದೆಹಲಿ, ಅಕ್ಟೋಬರ್ 20: ಎಸ್​ಐಆರ್​​ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆಗಳು ಮುಂದುವರಿದಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿಯೆಟ್ನಾಮ್‌ಗೆ ಪ್ರವಾಸ ಕೈಗೊಂಡಿರುವುದನ್ನು ಗೇಲಿ ಮಾಡಿ ಬಿಜೆಪಿ ವ್ಯಂಗ್ಯವಾಡಿದೆ. “ದೇಶಾದ್ಯಂತ ಸುಳ್ಳುಗಳನ್ನು ಹರಡಿ ವಿರಾಮ ತೆಗೆದುಕೊಂಡಿದ್ದಾರೆ” ಎಂದು ರಾಹುಲ್ ಗಾಂಧಿ ಅವರನ್ನು ಟೀಕಿಸಿರುವ ಬಿಜೆಪಿ, ರಾಹುಲ್ ಗಾಂಧಿ ಬಿಸಿನೆಸ್ ಕ್ಲಾಸ್ ಕ್ಯಾಬಿನ್‌ನಲ್ಲಿ ಕುಳಿತಿರುವುದನ್ನು ತೋರಿಸುವ ವಿಡಿಯೋವನ್ನು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

ವಿಮಾನದ ಒಳಗೆ ರಾಹುಲ್ ಗಾಂಧಿ ಕುಳಿತಿರುವುದನ್ನು ತೋರಿಸುವ ವಿಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. “ತುಂಬಾ ಆಯಾಸಗೊಂಡಿದ್ದೀರಾ?” ಎಂಬ ಕ್ಯಾಪ್ಷನ್ ಹಾಕಿರುವ ಬಿಜೆಪಿ, ಭಾರತದಲ್ಲಿ ರಾಜಕೀಯ ಬಿಕ್ಕಟ್ಟುಗಳು ಹಾಗೂ ಪ್ರಮುಖ ಪ್ರತಿಭಟನೆಗಳ ಸಮಯದಲ್ಲೂ ರಾಹುಲ್ ಗಾಂಧಿ ಪದೇ ಪದೇ ವಿದೇಶ ಪ್ರವಾಸ ಕೈಗೊಳ್ಳುತ್ತಾರೆ ಎಂದು ಟೀಕಿಸಿದೆ.

ಇದನ್ನೂ ಓದಿ: ‘ಅರಾಜಕತೆ ಮೂಲಕ ಸರ್ಕಾರ ಉರುಳಿಸುವ ಯತ್ನ’; ನೇಹಾ ಬೋರಾ ಹೇಳಿಕೆ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಆಕ್ರೋಶ

“ನಾನು ಸುಳ್ಳುಗಳನ್ನು ಹರಡಿ ಆಯಾಸಗೊಂಡಿದ್ದೇನೆ. ಹಾಗಾಗಿ ಕೆಲವು ದಿನಗಳ ಕಾಲ ವಿಯೆಟ್ನಾಮ್‌ನಲ್ಲಿ ಸುತ್ತಾಡಿಕೊಂಡು ಬರುತ್ತೇನೆ. ಇದು ಯಾರಿಗೂ ಕಂಡುಹಿಡಿಯೋಕೆ ಸಾಧ್ಯವೇ ಇಲ್ಲ” ಎಂದು ಬಿಜೆಪಿ ತನ್ನ ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ಚುನಾವಣೆಗೆ ಸಿದ್ಧತೆ ನಡೆಸಿರುವ ಗೋವಾದಲ್ಲಿ ನಡೆದ ‘ಗೋವಾ ರಕ್ಷಕೋ ಯಾತ್ರೆ’ಯಲ್ಲಿ ಭಾಗವಹಿಸಿ ಪಕ್ಷದ ನಾಯಕರೊಂದಿಗೆ 2 ಕಿಲೋಮೀಟರ್ ನಡೆದ ನಂತರ ರಾಹುಲ್ ಗಾಂಧಿ ಈ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಮುಂದಿನ ವರ್ಷ ಗೋವಾದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಚುನಾವಣಾ ದುರ್ನಡತೆ ಆರೋಪ ಮಾಡಿ ಕಾಂಗ್ರೆಸ್ ಮತ್ತು ಇತರ ‘ಇಂಡಿಯಾ’ ಒಕ್ಕೂಟದ ಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಸಮಯದಲ್ಲೇ ಬಿಜೆಪಿಯ ಈ ವ್ಯಂಗ್ಯ ಹೊರಬಿದ್ದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:16 pm, Tue, 20 October 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಪತ್ನಿ ಉಷಾ, ಕುಟುಂಬಸ್ಥರ ಜೊತೆಗೆ ಆಯುಧ ಪೂಜೆ ಮಾಡಿದ ಸಿಎಂ ಡಿಕೆ ಶಿವಕುಮಾರ್
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
ಮೈಸೂರು ದಸರಾ: ಪೂಜೆ ನಡುವೆ ಮೊಮ್ಮಗನ ಜೊತೆ ಆಟವಾಡಿದ ರಾಜಮಾತೆ ಪ್ರಮೋದಾ ದೇವಿ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು