AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಂಸದ ಗೌತಮ್​ ಗಂಭೀರ್​ಗೆ ಕೊರೊನಾ ಸೋಂಕು; ಸೌಮ್ಯ ಲಕ್ಷಣಗಳಿವೆ ಎಂದ ಮಾಜಿ ಕ್ರಿಕೆಟರ್​

ಜ.31ರಂದು ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಅಲ್ಲಿನ ಸುಮಾರು 875 ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.  ಭಾನುವಾರ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ತಮಗೆ ಕೊರೊನಾ ಸೋಂಕು ತಗುಲಿದ್ದಾಗಿ ಹೇಳಿಕೊಂಡಿದ್ದರು.

ಬಿಜೆಪಿ ಸಂಸದ ಗೌತಮ್​ ಗಂಭೀರ್​ಗೆ ಕೊರೊನಾ ಸೋಂಕು; ಸೌಮ್ಯ ಲಕ್ಷಣಗಳಿವೆ ಎಂದ ಮಾಜಿ ಕ್ರಿಕೆಟರ್​
ಗೌತಮ್ ಗಂಭೀರ್
TV9 Web
| Edited By: |

Updated on: Jan 25, 2022 | 12:06 PM

Share

ಪೂರ್ವ ದೆಹಲಿ ಕ್ಷೇತ್ರದ ಬಿಜೆಪಿ ಸಂಸದ ಗೌತಮ್​ ಗಂಭೀರ್ (Gautam Gambhir)​ ಅವರಿಗೆ ಕೊವಿಡ್ 19 ಸೋಂಕು (Covid 19 ) ತಗುಲಿದೆ. ಹಾಗೇ, ಸೌಮ್ಯ ಲಕ್ಷಣಗಳು ಇರುವುದಾಗಿ ಅವರು ತಿಳಿಸಿದ್ದಾರೆ. ನನಗೆ ಸೌಮ್ಯ ಲಕ್ಷಣಗಳಿದ್ದವು. ತಪಾಸಣೆ ಮಾಡಿಸಿದ ನಂತರ ಕೊವಿಡ್​ 19 ಇರುವುದು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಗೌತಮ್​ ಗಂಭೀರ್ ಟ್ವೀಟ್ ಮಾಡಿದ್ದಾರೆ. 2021ರ ನವೆಂಬರ್​ನಲ್ಲಿ ಗಂಭೀರ್​ ಕುಟುಂಬದ ಸದಸ್ಯರಲ್ಲಿ ಕೊವಿಡ್ 19 ದೃಢಪಟ್ಟಿದ್ದರಿಂದ ಅವರು ಐಸೋಲೇಟ್ ಆಗಿದ್ದರು. 

ಗೌತಮ್​ ಗಂಭೀರ್​ ಕೆಲವು ದಿನಗಳಿಂದಲೂ ಭರ್ಜರಿ ಸುದ್ದಿಯಲ್ಲಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರು ಮತ್ತೊಮ್ಮೆ ಕ್ರಿಕೆಟ್​ ಫೀಲ್ಡ್​ಗೆ ಕಾಲಿಟ್ಟಿದ್ದು. ಹಾಗಂತ ಅವರು ಕ್ರಿಕೆಟ್​ ಆಡುತ್ತಿಲ್ಲ. 15ನೇ ಆವೃತ್ತಿಯ ಐಪಿಎಲ್​​ನಲ್ಲಿ ಹೊಸದಾಗಿ ಆಡಲಿರುವ ಲಖನೌ ತಂಡದ ಮೆಂಟರ್ ಆಗಲಿದ್ದಾರೆ. ಈ ಸಂಬಂಧ ಕಳೆದ ಕೆಲವು ದಿನಗಳಿಂದಲೂ ಅವರು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಹೀಗೆ ಹೊಸದಾಗಿ ಸೇರ್ಪಡೆಯಾಗಲಿರುವ ಲಖನೌ ತಂಡ, ಲಖನೌ ಸೂಪರ್​ ಜೇಂಟ್ಸ್​ ಎಂದು ಹೆಸರಿಟ್ಟುಕೊಂಡಿದೆ.

ಹಲವು ರಾಜಕಾರಣಿಗಳಿಗೆ ಕೊರೊನಾ ಸೋಂಕು ಇನ್ನು ರಾಜಕಾರಣಿಗಳಿಗೆ ಹಲವರಿಗೆ ಕೊರೊನಾ ಸೋಂಕು ತಗುಲಿದೆ. ನಿನ್ನೆ ಎನ್​ಸಿಪಿ ಮುಖ್ಯಸ್ಥ ಶರದ್​ ಪವಾತ್​ ತಮಗೆ ಕೊರೊನಾ ವೈರಸ್ ತಗುಲಿದೆ ಎಂದು ಟ್ವೀಟ್ ಮಾಡಿ ಹೇಳಿದ್ದರು. ಜ.31ರಂದು ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಅಲ್ಲಿನ ಸುಮಾರು 875 ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ.  ಭಾನುವಾರ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ತಮಗೆ ಕೊರೊನಾ ಸೋಂಕು ತಗುಲಿದ್ದಾಗಿ ಹೇಳಿಕೊಂಡಿದ್ದರು. ವೆಂಕಯ್ಯ ನಾಯ್ಡು ಅವರು ಹೈದರಾಬಾದ್​ನಲ್ಲಿದ್ದು, ಅವರಲ್ಲಿ ಕೊರೊನಾ ದೃಢಪಟ್ಟಿದೆ. ಸದ್ಯ ಐಸೋಲೇಶನ್​​ಗೆ ಒಳಗಾಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರೆಲ್ಲ ತಪಾಸಣೆಗೆ ಒಳಗಾಗುವಂತೆ ಹೇಳಿದ್ದಾರೆ. ಇವರು 2021ರಲ್ಲೂ ಒಮ್ಮೆ ಕೊರೊನಾಕ್ಕೆ ಒಳಗಾಗಿದ್ದರು. ಇದು ಎರಡನೇ ಬಾರಿಗೆ ಅವರಿಗೆ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾಗಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ರೋಗ ಅಂತ್ಯ ಕಾಣುತ್ತಿದೆ ಎಂದು ಭಾವಿಸುವುದು ಅಪಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್