AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಪ್ರೇಮ ಕಲಹ: ಮಾವ ಬಿಜೆಪಿ ಸಂಸದ -ಅತ್ತೆ ಶಾಸಕಿ! ಸೊಸೆಯಿಂದ ಆತ್ಮಹತ್ಯೆಗೆ ಯತ್ನ

‘ತಮ್ಮಿಂದ ಬೇರ್ಪಟ್ಟ ಗಂಡ ಆಯುಷ್ ಮರಳಿ ಬರುತ್ತಾರೆ ಎಂದು ಅಂದುಕೊಂಡಿದ್ದೆ, ಆದರೆ, ಆಯುಷ್ ತಮ್ಮ ಬಳಿ ಮರಳಿ ಬರಲಿಲ್ಲ’ ಎಂದು ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಮಗ ಆಯುಷ್ ಅವರಿಂದ ಸಾಂಸಾರಿಕವಾಗಿ ಬೇರ್ಪಟ್ಟಿರುವ ಹೆಂಡತಿ ಅಂಕಿತಾ ದೂರಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರೇಮ ಕಲಹ: ಮಾವ ಬಿಜೆಪಿ ಸಂಸದ -ಅತ್ತೆ ಶಾಸಕಿ! ಸೊಸೆಯಿಂದ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಸಂಸದರ ಸೊಸೆ
guruganesh bhat
| Edited By: |

Updated on:Mar 15, 2021 | 2:33 PM

Share

ಲಕ್ನೋ: ಏನೂ ಇಲ್ಲದಿದ್ದರೂ ಜೀವನದಲ್ಲಿ ಮುಂದೆ ಬರಬೇಕು ಎನ್ನುವವರು ಒಂದೆಡೆಯಾದರೆ, ಎಲ್ಲಾ ಇದ್ದೂ ಜೀವನ ಸಾಕು ಎನ್ನುವವರು ಇನ್ನೊಂದೆಡೆ. ಉತ್ತರ ಪ್ರದೇಶದ ಮೋಹನ್​ಲಾಲ್​ಗಂಜ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಮಗ ಆಯುಷ್ ಅವರಿಂದ ಸಾಂಸಾರಿಕವಾಗಿ ಬೇರ್ಪಟ್ಟಿರುವ ಹೆಂಡತಿ ಅಂಕಿತಾ ಆತ್ಮಹತ್ಯೆ ಪ್ರಯತ್ನ ನಡೆಸಿದ್ದಾರೆ. ಅವರ ಆತ್ಮಹತ್ಯೆಯ ಪ್ರಯತ್ನದ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ ತಮ್ಮ ಆತ್ಮಹತ್ಯೆಯ ಪ್ರಯತ್ನಕ್ಕೆ ಬೇರ್ಪಟ್ಟ ಗಂಡ ಆಯುಷ್, ಮಾವ, ಬಿಜೆಪಿ ಸಂಸದ ಕೌಶಲ್ ಕಿಶೋರ್,  ಶಾಸಕಿಯೂ ಆಗಿರುವ ಅತ್ತೆ ಜೈ ದೇವಿ ಮತ್ತು ಬೇರ್ಪಟ್ಟ ಗಂಡನ ಸಹೋದರ  ಕಾರಣ ಎಂದು ಅಂಕಿತಾ ತಿಳಿಸಿದ್ದಾರೆ. ತಮ್ಮಿಂದ ಬೇರ್ಪಟ್ಟ ಗಂಡ ಆಯುಷ್ ತಮಗೆ ಮೋಸ ಮಾಡಿದ್ದಾರೆ ಎಂದು ಸಹ ದೂರಿದ್ದಾರೆ ಅಂಕಿತಾ.

ಅಲ್ಲದೇ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ವಿಡಿಯೋದಲ್ಲಿ ಅಳುತ್ತಿರುವುದು ಕಂಡುಬರುತ್ತದೆ. ‘ತಮ್ಮಿಂದ ಬೇರ್ಪಟ್ಟ ಗಂಡ ಆಯುಷ್ ಮರಳಿ ಬರುತ್ತಾರೆ ಎಂದು ಅಂದುಕೊಂಡಿದ್ದೆ, ಆದರೆ, ಆಯುಷ್ ತಮ್ಮ ಬಳಿ ಮರಳಿ ಬರಲಿಲ್ಲ’ ಎಂದು ಅವರು ವಿಡಿಯೊದಲ್ಲಿ ಆರೋಪಿಸಿದ್ದಾರೆ. ಮೂಲಗಳ ಪ್ರಕಾರ ತಮ್ಮ ಬೇರ್ಪಟ್ಟ ಗಂಡನ ಮನೆಗೆ ತೆರಳಿದ ಅವರು ಅಲ್ಲಿಯೇ ಕೈ ಕೊಯ್ದುಕೊಂಡು ಆತ್ಮಹತ್ಯೆಯ ಪ್ರಯತ್ನ ನಡೆಸಿದ್ದಾರೆ. ಆದರೆ ತಕ್ಷಣವೇ ಅವರನ್ನು ಮಹಿಳಾ ಪೊಲೀಸರ ನೇತೃತ್ವದಲ್ಲಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಹೀಗಾಗಿ ಅಂಕಿತಾ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಮಗ ಆಯುಷ್, ಅಂಕಿತಾ  ಜತೆ ಕಳೆದ ವರ್ಷವಷ್ಟೇ ಪ್ರೇಮ ವಿವಾಹವಾಗಿದ್ದರು. ಈ ವಿವಾಹಕ್ಕೆ ಆಯುಷ್ ಅವರ ತಂದೆ ಕೌಶಲ್ ಕಿಶೋರ್ ಅವರ ಒಪ್ಪಿಗೆ ಇರಲಿಲ್ಲ ಎಂದು ವರದಿಯಾಗಿತ್ತು.

ಇದನ್ನೂ ಓದಿ: Bengaluru Crime: ಫೇಸ್​ಬುಕ್ ಲೈವ್ ವಿಡಿಯೋ ಅಪ್​ಲೋಡ್ ಮಾಡಿದ ನಂತರ ವ್ಯಕ್ತಿ ಆತ್ಮಹತ್ಯೆ

Published On - 2:28 pm, Mon, 15 March 21

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?