AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ ಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ನಮಾಜ್ ಮಾಡಿದ್ದ ಜಾಗವನ್ನು ಗೋಮೂತ್ರದಿಂದ ಶುದ್ಧೀಕರಿಸಿದ ಬಿಜೆಪಿ ಸಂಸದೆ ಮೇಧಾ

ಪುಣೆಯ ಕೋಟೆಯಲ್ಲಿ ಮಹಿಳೆಯರು ನಮಾಜ್(Namaz) ಮಾಡಿದ್ದ ಜಾಗವನ್ನು ಬಿಜೆಪಿ ಸಂಸದೆ ಮೇಧಾ ಕುಲಕರ್ಣಿ ಗೋಮೂತ್ರದಿಂದ ಶುದ್ಧೀಕರಿಸಿರುವ ಘಟನೆ ನಡೆದಿದೆ. ಮೇಧಾ ಅವರ ನಡೆ ದ್ವೇಷಪೂರಿತ ಎಂದು ಆರೋಪಿಸಿ ಮಹಾರಾಷ್ಟ್ರದ ವಿರೋಧ ಪಕ್ಷಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಭಾನುವಾರ ಕುಲಕರ್ಣಿ ಅವರು ಪುಣೆಯ ಐತಿಹಾಸಿಕ ಕೋಟೆ ಶನಿವಾರವಾಡಕ್ಕೆ ಭೇಟಿ ನೀಡಿದ್ದರು, ಹಿಂದುತ್ವ ಕಾರ್ಯಕರ್ತರ ಮೆರವಣಿಗೆಯ ನೃತೃತ್ವವಹಿಸಿದ್ದರು.

ಪುಣೆ ಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ನಮಾಜ್ ಮಾಡಿದ್ದ ಜಾಗವನ್ನು ಗೋಮೂತ್ರದಿಂದ ಶುದ್ಧೀಕರಿಸಿದ ಬಿಜೆಪಿ ಸಂಸದೆ ಮೇಧಾ
ಮೇಧಾ ಕುಲಕರ್ಣಿ
ನಯನಾ ರಾಜೀವ್
|

Updated on:Oct 21, 2025 | 12:28 PM

Share

ಪುಣೆ, ಅಕ್ಟೋಬರ್ 21: ಪುಣೆಯ ಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ನಮಾಜ್(Namaz) ಮಾಡಿದ್ದ ಜಾಗವನ್ನು ಬಿಜೆಪಿ ರಾಜ್ಯಸಭಾ ಸಂಸದೆ ಮೇಧಾ ಕುಲಕರ್ಣಿ ಗೋಮೂತ್ರದಿಂದ ಶುದ್ಧೀಕರಿಸಿರುವ ಘಟನೆ ನಡೆದಿದೆ. ಮೇಧಾ ಅವರ ನಡೆ ದ್ವೇಷಪೂರಿತ ಎಂದು ಆರೋಪಿಸಿ ಮಹಾರಾಷ್ಟ್ರದ ವಿರೋಧ ಪಕ್ಷಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಭಾನುವಾರ ಕುಲಕರ್ಣಿ ಅವರು ಪುಣೆಯ ಐತಿಹಾಸಿಕ ಕೋಟೆ ಶನಿವಾರವಾಡಕ್ಕೆ ಭೇಟಿ ನೀಡಿದ್ದರು, ಹಿಂದುತ್ವ ಕಾರ್ಯಕರ್ತರ ಮೆರವಣಿಗೆಯ ನೃತೃತ್ವವಹಿಸಿದ್ದರು.

ಕೆಲವು ಮುಸ್ಲಿಂ ಮಹಿಳೆಯರು ಈ ಹಿಂದೆ ನಮಾಜ್ ಮಾಡಿದ್ದ ಸ್ಥಳವನ್ನು ಗೋಮೂತ್ರದಿಂದ ಸ್ವಚ್ಛಗೊಳಿಸಿದಾಗ ವಿವಾದ ಭುಗಿಲೆದ್ದಿತ್ತು.

ಮುಸ್ಲಿಮರು ಶನಿವಾರವಾಡದಂತಹ ಐತಿಹಾಸಿಕ ಸ್ಥಳಗಳಲ್ಲಿ ನಮಾಜ್ ಮಾಡಿದರೆ, ಹಿಂದೂಗಳಿಗೂ ಮಸೀದಿಗಳಲ್ಲಿ ಆರತಿ ಮಾಡಲು ಅವಕಾಶ ನೀಡಬೇಕು ಎಂದು ಹೇಳುವ ಮೂಲಕ ಸಂಸದೆ ಮೇಧಾ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಮಹಿಳೆಯರು ನಮಾಜ್ ಮಾಡಿದ್ದ ವಿಡಿಯೋ

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯ ವಕ್ತಾರ ಅತುಲ್ ಲೊಂಡೆ ಈ ಕಾರ್ಯವನ್ನು ಟೀಕಿಸುತ್ತಾ, ಮರಾಠವಾಡದ ರೈತರು ಪ್ರವಾಹದಿಂದ ತೀವ್ರವಾಗಿ ತತ್ತರಿಸಲ್ಪಟ್ಟಿರುವ ಮತ್ತು ಈ ಬಿಕ್ಕಟ್ಟಿನಿಂದ ಹೊರಬರಲು ಅವರಿಗೆ ಸಹಾಯ ಮಾಡುವ ಅಗತ್ಯವಿರುವ ಸಮಯದಲ್ಲಿ, ಕುಲಕರ್ಣಿ ದ್ವೇಷಪೂರಿತ ಭಾಷಣದಲ್ಲಿ ತೊಡಗುವ ಮೂಲಕ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ. ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಒಬ್ಬ ಜನಪ್ರತಿನಿಧಿಯು ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಡಬೇಕು, ಅದರ ವಿರುದ್ಧವಲ್ಲ ಎಂದು ವಾದಿಸಿದರು.

ಮತ್ತಷ್ಟು ಓದಿ: ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆಯುವರೆ? ತಮ್ಮದೇ ಸರ್ಕಾರವನ್ನು ಪ್ರಶ್ನಿಸಿದ ರಾಜಣ್ಣ

ಇದು ದುರದೃಷ್ಟಕರ. ಶನಿವಾರವಾಡಾ ನಮಾಜ್ ಮಾಡಲು ಸೂಕ್ತ ಸ್ಥಳವಲ್ಲ. ಆಡಳಿತವು ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದರು. ಭಾರತೀಯ ಪುರಾತತ್ವ ಸರ್ವೇಕ್ಷಣಾ (ASI) ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕೋಟೆಯಲ್ಲಿ ನಾಮಾಜ್ ಮಾಡಿದ ಅಪರಿಚಿತ ಮಹಿಳೆಯರ ಗುಂಪಿನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:24 pm, Tue, 21 October 25

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್