ಬಿಜೆಪಿ ಸಂಸದ ಸತೀಶ್​ಚಂದ್ರ ದುಬೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಬಿಜೆಪಿ ಸಂಸದ ಸತೀಶ್​ ಚಂದ್ರ ದುಬೆ ಅವರಿದ್ದ ಕಾರು ಪಾಟ್ನಾದಲ್ಲಿ ಅಪಘಾತಕ್ಕೀಡಾಗಿದ್ದು, ಸಂಸದರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರದ ಪಾಟ್ನಾದ ಗಾಂಧಿ ಸೇತು ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಅವರ ಭದ್ರತಾ ಸಿಬ್ಬಂದಿ ಮತ್ತು ಕಾರು ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾರೆ.

ಬಿಜೆಪಿ ಸಂಸದ ಸತೀಶ್​ಚಂದ್ರ ದುಬೆ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಸತೀಶ್​ ಚಂದ್ರ ದುಬೆ

Updated on: Sep 18, 2023 | 1:19 PM

ಬಿಜೆಪಿ ಸಂಸದ ಸತೀಶ್​ ಚಂದ್ರ ದುಬೆ(Satish Chandra Dubey) ಅವರಿದ್ದ ಕಾರು ಪಾಟ್ನಾದಲ್ಲಿ ಅಪಘಾತಕ್ಕೀಡಾಗಿದ್ದು, ಸಂಸದರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಹಾರದ ಪಾಟ್ನಾದ ಗಾಂಧಿ ಸೇತು ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಅವರ ಭದ್ರತಾ ಸಿಬ್ಬಂದಿ ಮತ್ತು ಕಾರು ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತದ ಬಳಿಕ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 48 ವರ್ಷದ ಬಿಜೆಪಿ ಸಂಸದ, ಸತೀಶ್ ಚಂದ್ರ ದುಬೆ ಅವರು 2022 ರಲ್ಲಿ ಸಂಸತ್ತಿನ ಮೇಲ್ಮನೆಗೆ ಚುನಾಯಿತರಾಗಿದ್ದರು. ಇದಕ್ಕೂ ಮೊದಲು ಅವರು ಬಿಹಾರದ ವಾಲ್ಮೀಕಿ ನಗರ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಅವರು 2005 ರಲ್ಲಿ ನಾಟ್ಕಟಿಯಾಗಂಜ್‌ನಿಂದ ಬಿಹಾರ ವಿಧಾನಸಭೆಯ ಸದಸ್ಯರಾಗಿದ್ದರು. ಹಾಜಿಪುರದಿಂದ ಪಾಟ್ನಾಗೆ ಬರುತ್ತಿದ್ದಾಗ, ಸಂಸದರ ಚಾಲಕ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ, ಐಷಾರಾಮಿ ಕಾರಿನ ವೇಗ ಹೆಚ್ಚಾಗಿದ್ದು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಸಂಸದ ಸತೀಶ್ ಚಂದ್ರ ದುಬೆ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣದ ಸರಳುಗಳ ಮೇಲೆ ಬಿದ್ದು ಯುವಕ ಗಂಭೀರ ಗಾಯ

ಜೊತೆಗಿದ್ದ ಬೆಂಗಾವಲು ತಂಡವು ಕಾರಿನಿಂದ ಎಲ್ಲರನ್ನು ಹೊರತೆಗೆದರು, ಇದರಲ್ಲಿ ಚಾಲಕ ಮತ್ತು ಇಬ್ಬರು ಬಾಡಿ ಗಾರ್ಡ್‌ಗಳ ತಲೆ ಮತ್ತು ಇತರ ಹಲವು ಭಾಗಗಳಲ್ಲಿ ಗಂಭೀರವಾದ ಗಾಯಗಳಾಗಿವೆ. ಮೂವರನ್ನು ಪಿಎಂಸಿಎಚ್ ಗೆ ದಾಖಲಿಸಲಾಗಿದ್ದು, ಸಂಸದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಹಿತಿ ಪ್ರಕಾರ ಸಂಸದರ ಸ್ಥಿತಿ ಸುಧಾರಿಸುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us