AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳೊಂದಿಗೆ ಸಂಸದ ತೇಜಸ್ವಿ ಸೂರ್ಯ ಮಾತುಕತೆ; ಪ್ರಧಾನಿ ನರೇಂದ್ರ ಮೋದಿಗೆ ಕೃತಜ್ಞತೆ

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳನ್ನು ಭೇಟಿಯಾದ ಫೋಟೋ-ವಿಡಿಯೋಗಳನ್ನು ಶೇರ್​ ಮಾಡಿಕೊಂಡಿರುವ ತೇಜಸ್ವಿ ಸೂರ್ಯ, ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Video: ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳೊಂದಿಗೆ ಸಂಸದ ತೇಜಸ್ವಿ ಸೂರ್ಯ ಮಾತುಕತೆ; ಪ್ರಧಾನಿ ನರೇಂದ್ರ ಮೋದಿಗೆ ಕೃತಜ್ಞತೆ
ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳನ್ನು ಭೇಟಿಯಾದ ತೇಜಸ್ವಿ ಸೂರ್ಯ
TV9 Web
| Edited By: |

Updated on:Feb 27, 2022 | 11:57 AM

Share

ಯುದ್ಧದ ನಾಡಾಗಿರುವ ಉಕ್ರೇನ್​ನಿಂದ (Ukraine Crisis) ಭಾರತೀಯರನ್ನು ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳನ್ನು ವಾಪಸ್​ ದೇಶಕ್ಕೆ ಕರೆತರುವ ಕಾರ್ಯಾಚರಣೆ ಅವಿರತವಾಗಿ ನಡೆಯುತ್ತಿದೆ. ಈ ಕಾರ್ಯಾಚಾರಣೆಗೆ ಭಾರತ ಕೇಂದ್ರ ಸರ್ಕಾರ ಆಪರೇಶನ್ ಗಂಗಾ ಎಂದು ಹೆಸರು ಇಟ್ಟಿದ್ದು, ಅದರಡಿಯಲ್ಲಿ ಈಗಾಗಲೇ ಮೂರು ಬ್ಯಾಚ್​​ನಲ್ಲಿ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ. ಇಂದು ಮುಂಜಾನೆ ಹಂಗೇರಿಯ ಬುಡಾಪೆಸ್ಟ್​​ನಿಂದ ಹೊರಟಿದ್ದ ವಿಮಾನವೂ ದೆಹಲಿಯಲ್ಲಿ ಲ್ಯಾಂಡ್​ ಆಗಿದೆ. ಇನ್ನು ದೆಹಲಿ ಹಾಗೂ ಮುಂಬೈ ಏರ್​ಪೋರ್ಟ್​ಗೆ ಬಂದಿಳಿದು, ಅಲ್ಲಿಂದ ಬೆಂಗಳೂರಿಗೆ ಆಗಮಿಸಲಿರುವ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಬೆಂಗಳೂರು ಏರ್​ಪೋರ್ಟ್​ನಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಂಸದ ತೇಜಸ್ವಿ ಸೂರ್ಯ, ಸಚಿವ ಆರ್​. ಅಶೋಕ್​ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಈ ಮಧ್ಯೆ ನಿನ್ನೆ ಮಧ್ಯರಾತ್ರಿ ಉಕ್ರೇನ್​​ನಿಂದ ಭಾರತಕ್ಕೆ ಬಂದಿಳಿದ ವಿದ್ಯಾರ್ಥಿಗಳಲ್ಲಿ, ಕರ್ನಾಟಕದವರನ್ನು ತೇಜಸ್ವಿ ಸೂರ್ಯ ಇಂದು ಬೆಳಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿಯಾಗಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ವಿದ್ಯಾರ್ಥಿಗಳು ತಾವು ಉಕ್ರೇನ್​​ನಲ್ಲಿ ಪಟ್ಟ ಕಷ್ಟ, ಸರ್ಕಾರ ನಮ್ಮನ್ನು ಕರೆತರಲು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಮಾತನಾಡಿದ್ದಾರೆ. ಉಕ್ರೇನ್​​ನಿಂದ ರೊಮೇನಿಯಾ/ಹಂಗೇರಿ ಗಡಿಗಳಿಗೆ ಬಂದು, ಗಡಿ ದಾಟಬೇಕಾದಾಗ ಅನುಸರಿಸಬೇಕಾದ ಕ್ರಮಗಳ ಕುರಿತೂ ವಿದ್ಯಾರ್ಥಿಗಳು ಅನುಭವ ಹಂಚಿಕೊಂಡಿದ್ದಾರೆ.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳನ್ನು ಭೇಟಿಯಾದ ಫೋಟೋ-ವಿಡಿಯೋಗಳನ್ನು ಶೇರ್​ ಮಾಡಿಕೊಂಡಿರುವ ತೇಜಸ್ವಿ ಸೂರ್ಯ, ಉಕ್ರೇನ್​​ನಿಂದ ಬಂದ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಅಲ್ಲಿ ಭಾರತೀಯರು ಮಾತ್ರವಲ್ಲ, ಬೇರೆ ಕೆಲವು ದೇಶಗಳ ವಿದ್ಯಾರ್ಥಿಗಳೂ ಇದ್ದಾರೆ. ಆದರೆ ಅವರೆಲ್ಲ ಇನ್ನೂ ತಮ್ಮ ದೇಶಗಳ ಸರ್ಕಾರಗಳೊಂದಿಗೆ ಸಂವಹನಕ್ಕೆ ಕಷ್ಟಪಡುತ್ತಿದ್ದಾರೆ. ಆದರೆ ನಮ್ಮ ದೇಶದ ಅನೇಕ ವಿದ್ಯಾರ್ಥಿಗಳು ಈಗಾಗಲೇ ಸ್ವದೇಶಕ್ಕೆ ಮರಳಿದ್ದಾರೆ ಎಂದು ಕ್ಯಾಪ್ಷನ್​ ಬರೆದಿದ್ದಾರೆ. ಹಾಗೇ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 12 ವಿದ್ಯಾರ್ಥಿಗಳನ್ನು ಸಚಿವ ಆರ್​. ಅಶೋಕ್​ ಸ್ವಾಗತಿಸಿದರು.

Published On - 11:54 am, Sun, 27 February 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ