Odisha Train Accident: ಪ್ರಧಾನಿ ಮೋದಿಗೆ ಖರ್ಗೆ ಬರೆದ ಪತ್ರಕ್ಕೆ ತೇಜಸ್ವಿ ಸೂರ್ಯ ಸೇರಿ ಬಿಜೆಪಿಯ ನಾಲ್ವರು ಸಂಸದರಿಂದ ತಿರುಗೇಟು

ಬೆಂಗಳೂರಿನ ಸಂಸದರಾದ ತೇಜಸ್ವಿ ಸೂರ್ಯ, ಪಿಸಿ ಮೋಹನ್, ಸದಾನಂದ ಗೌಡ ಹಾಗೂ ಎಸ್​ ಮುನಿಸ್ವಾಮಿ ಪತ್ರ ಬರೆದಿದ್ದಾರೆ. ಖರ್ಗೆ ಅವರು ಮಾಡಿರುವ ಆರೋಪಗಳು ಮತ್ತು ಪತ್ರದಲ್ಲಿ ಉಲ್ಲೇಖಿಸಿದ್ದ ಪ್ರತಿಯೊಂದು ವಿಚಾರಗಳಿಗೂ ಬಿಜೆಪಿ ಸಂಸದರು ಆಧಾರ ಸಹಿತ ಉತ್ತರ ನೀಡಿದ್ದಾರೆ.

Odisha Train Accident: ಪ್ರಧಾನಿ ಮೋದಿಗೆ ಖರ್ಗೆ ಬರೆದ ಪತ್ರಕ್ಕೆ ತೇಜಸ್ವಿ ಸೂರ್ಯ ಸೇರಿ ಬಿಜೆಪಿಯ ನಾಲ್ವರು ಸಂಸದರಿಂದ ತಿರುಗೇಟು
ಮಲ್ಲಿಕಾರ್ಜುನ ಖರ್ಗೆ ಮತ್ತು ತೇಜಸ್ವಿ ಸೂರ್ಯ
Follow us
Ganapathi Sharma
|

Updated on: Jun 09, 2023 | 11:23 PM

ಬೆಂಗಳೂರು: ಒಡಿಶಾದ ಬಾಲಸೋರ್​​​ನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭೀಕರ ರೈಲು (Odisha Train Accident) ದುರಂತಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ (Mallikarjun Kharge) ಇದೀಗ ಬಿಜೆಪಿ ನಾಲ್ವರು ಸಂಸದರು ಪತ್ರ ಬರೆದಿದ್ದು, ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಸಂಸದರಾದ ತೇಜಸ್ವಿ ಸೂರ್ಯ (Tejasvi Surya), ಪಿಸಿ ಮೋಹನ್, ಸದಾನಂದ ಗೌಡ ಹಾಗೂ ಎಸ್​ ಮುನಿಸ್ವಾಮಿ ಪತ್ರ ಬರೆದಿದ್ದಾರೆ. ಖರ್ಗೆ ಅವರು ಮಾಡಿರುವ ಆರೋಪಗಳು ಮತ್ತು ಪತ್ರದಲ್ಲಿ ಉಲ್ಲೇಖಿಸಿದ್ದ ಪ್ರತಿಯೊಂದು ವಿಚಾರಗಳಿಗೂ ಬಿಜೆಪಿ ಸಂಸದರು ಆಧಾರ ಸಹಿತ ಉತ್ತರ ನೀಡಿದ್ದಾರೆ.

ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ನೀವು ಇತ್ತೀಚೆಗೆ ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಕೆಲವೊಂದು ವಿಚಾರಗಳನ್ನು ನಾವು ಹೇಳಲೇಬೇಕಿದೆ. ನಾವು ನಿಮ್ಮ ಪತ್ರದಲ್ಲಿ ವಾಕ್ಚಾತುರ್ಯ ಹೆಚ್ಚು ಮತ್ತು ಕಡಿಮೆ ವಾಸ್ತವ ಇರುವುದನ್ನು ಕಂಡುಕೊಂಡಿದ್ದೇವೆ. ಮಾಜಿ ರೈಲ್ವೇ ಸಚಿವರಾಗಿ, ಪರಿಸ್ಥಿತಿಯ ಬಗ್ಗೆ ನಿಮ್ಮ ಪ್ರತಿಕ್ರಿಯೆಯು ವಿವೇಚನೆ ಮತ್ತು ಆಳವಾದ ತಿಳುವಳಿಕೆಯಿಂದ ತುಂಬಿರುತ್ತದೆ ಎಂದು ನಿರೀಕ್ಷಿಸಬಹುದಿತ್ತು. ಆದರೆ ನಿಮ್ಮ ಪತ್ರವು ವಾಸ್ತವಕ್ಕೆ ದೂರವಾಗಿತ್ತು. ಅದಕ್ಕಾಗಿ ನಾವು ನಿಮಗೆ ವಾಸ್ತವವನ್ನು ತಿಳಿಸಬೇಕಿದೆ ಎಂದು ಬಿಜೆಪಿಯ ಸಂಸದರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮೊದಲನೆಯದಾಗಿ, ನೇಮಕಾತಿಗೆ ಸಂಬಂಧಿಸಿದಂತೆ ಹೇಳುವುದಾದರೆ, ಕಳೆದ 9 ವರ್ಷಗಳಲ್ಲಿ, ರೈಲ್ವೇಯು 4.58 ಲಕ್ಷ ಹೊಸ ನೇಮಕಾತಿಗಳನ್ನು ಮಾಡಿದೆ. ಪ್ರಸ್ತುತ ಸುಮಾರು ಲಕ್ಷ ಅಭ್ಯರ್ಥಿಗಳನ್ನು ನೇಮಿಸಲು ಪ್ರಕ್ರಿಯೆಯು ನಡೆಯುತ್ತಿದೆ. ಹೀಗಾಗಿ ನಮ್ಮ ಅಧಿಕಾರಾವಧಿಯಲ್ಲಿ 8 ಲಕ್ಷಕ್ಕೂ ಹೆಚ್ಚು ನೇಮಕಾತಿ ಮಾಡಿಕೊಂಡಂತಾಗಲಿದೆ. ಇದು ಯುಪಿಎ ಅವಧಿಯಲ್ಲಿ ನೇಮಕಗೊಂಡ 4.50 ಲಕ್ಷ ಅಭ್ಯರ್ಥಿಗಳಿಗಿಂತ ಸುಮಾರು ಶೇ 50ರಷ್ಟು ಹೆಚ್ಚು.

ಎರಡನೆಯದಾಗಿ, 5,518 ಸಹಾಯಕ ಲೋಕೋ ಪೈಲಟ್‌ಗಳು ಹೊಸದಾಗಿ ನೇಮಕಗೊಂಡಿದ್ದಾರೆ. ಈ ವಲಯವನ್ನು ನಿರ್ಲಕ್ಷಿಸುವ ನಿಮ್ಮ ಆರೋಪಗಳನ್ನು ಇದು ಅಲ್ಲಗಳೆಯುತ್ತದೆ.

ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ 3 ರೈಲುಗಳಿಗೆ ಸಂಪೂರ್ಣ ಹಾನಿ: ಒಂದು ಹೊಸ ರೈಲು ನಿರ್ಮಾಣಕ್ಕೆ ಎಷ್ಟು ವೆಚ್ಚವಾಗುತ್ತೆ ಗೊತ್ತೇ?

ನೀವು ಹೇಳಿದ ಫೆಬ್ರವರಿ 2023ರ ಘಟನೆಯನ್ನು ರೈಲ್ವೆಯು ಕೂಲಂಕಷವಾಗಿ ತನಿಖೆ ಮಾಡಿದೆ. ಹೊಣೆಗಾರರಾದ ವಿರುದ್ಧ ಕ್ರಮ ಜರುಗಿಸಲಾಗಿದೆ. ನಿರ್ವಹಣಾ ಪದ್ಧತಿಗಳ ಕಟ್ಟುನಿಟ್ಟಿನ ಅನುಷ್ಠಾನದ ಕುರಿತು ಎಲ್ಲಾ ರೈಲ್ವೆ ಸಿಬ್ಬಂದಿಗೆ ಸಲಹೆ ನೀಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಿಮ್ಮ ಪತ್ರದಲ್ಲಿ ಹೇಳಿರುವಂತೆ ಮೈಸೂರಿನಲ್ಲಿ ಯಾವುದೇ ರೈಲು ಡಿಕ್ಕಿಯಾಗಿಲ್ಲ ಎಂಬುದೂ ವಾಸ್ತವ. ವಾಟ್ಸಾಪ್ ಯೂನಿವರ್ಸಿಟಿಯಿಂದ ಪಡೆದ ಸತ್ಯಗಳ ಆಧಾರದ ಮೇಲೆ ಪ್ರಧಾನಿಗೆ ಪತ್ರ ಬರೆಯುವುದು ನಿಮ್ಮಂಥ ಜವಾಬ್ದಾರಿಯುತ ಸ್ಥಾನದಲ್ಲಿರುವ ನಾಯಕನಿಗೆ ಸರಿಹೊಂದುವುದಿಲ್ಲ. ಬಹುಶಃ ವಾಟ್ಸಾಪ್ ಯೂನಿವರ್ಸಿಟಿಯ ಉಪಕುಲಪತಿಯಾಗಿ, ನೀವು ನಕಲಿ ಸುದ್ದಿಗಳನ್ನು ಸತ್ಯವೆಂದು ಪ್ರತಿಪಾದಿಸಲು ಒತ್ತಾಯಿಸಲ್ಪಟ್ಟಿದ್ದೀರಿ ಎಂದು ಕಾಣುತ್ತದೆ ಎಂದು ಸಂಸದರ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇಷ್ಟೇ ಅಲ್ಲದೆ, ಖರ್ಗೆ ಅವರು ಮಾಡಿರುವ ಪ್ರತಿಯೊಂದು ಆರೋಪಕ್ಕೂ ಸಂಸದರು ಪತ್ರದಲ್ಲಿ ಉತ್ತರ ನೀಡಿದ್ದಾರೆ.

ಏನು ಹೇಳಿದ್ದರು ಮಲ್ಲಿಕಾರ್ಜುನ ಖರ್ಗೆ?

ರೈಲು ದುರಂತದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದ ಮಲ್ಲಿಕಾರ್ಜುನ ಖರ್ಗೆ, ಮೊದಲಾಗಿ ಸಿಬಿಐ ಇರುವುದು ಅಪರಾಧ ಪ್ರಕರಣಗಳ ತನಿಖೆ ನಡೆಸುವುದಕ್ಕೇ ಹೊರತು ರೈಲ್ವೆ ಅಪಘಾತಗಳ ತನಿಖೆ ನಡೆಸುವುದಕ್ಕಲ್ಲ. ನಿಮ್ಮ ಈ ನಡೆಯಿಂದ ರಾಜಕೀಯ ವೈಫಲ್ಯಗಳನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿದ್ದರು. ಜತೆಗೆ, ರೈಲ್ವೆ ಇಲಾಖೆಗೆ ಸಂಬಂಧಿಸಿದ್ದ ಹಲವಾರು ವಿಚಾರಗಳನ್ನು ಪ್ರಸ್ತಾಪಿಸಿದ್ದರು.

ರೈಲ್ವೆ ಇಲಾಖೆಯಲ್ಲಿ ಮೂರು ಲಕ್ಷ ಹುದ್ದೆಗಳು ಖಾಲಿ ಬಿದ್ದಿವೆ. ರೈಲ್ವೆ ಮಂಡಳಿಯೇ ಇತ್ತೀಚೆಗೆ ಹೇಳಿಕೊಂಡಂತೆ, ಸಿಬ್ಬಂದಿ ಕೊರತೆಯಿಂದಾಗಿ ಲೊಕೊ ಪೈಲೆಟ್‌ಗಳು ಹೆಚ್ಚಿನ ಅವಧಿಗೆ ದುಡಿಯಬೇಕಾಗಿದೆ. ನಿಗದಿತ ಅವಧಿಗಿಂತ ಹೆಚ್ಚು ದುಡಿಸಿಕೊಳ್ಳುತ್ತಿರುವುದರಿಂದಲೂ ಅಪಘಾತ ಸಂಭವಿಸಿರುವ ಸಾದ್ಯತೆಗಳಿವೆ. ಹಾಗಿದ್ದರೆ ಖಾಲಿ ಇರುವ ಹುದ್ದೆಗಳ ಭರ್ತಿ ಏಕೆ ಆಗಿಲ್ಲ ಎಂದೂ ಖರ್ಗೆ ಪ್ರಶ್ನಿಸಿದ್ದರು.

ಇದನ್ನೂ ಓದಿ: Odisha Train Accident: ಒಡಿಶಾ ರೈಲು ಅಪಘಾತ: ಎಫ್ಐಆರ್ ದಾಖಲಿಸಿದ ಸಿಬಿಐ

ರೈಲುಗಳ ನಡುವೆ ಡಿಕ್ಕಿ ತಡೆಗಟ್ಟಲು ಜಾರಿಗೆ ತಂದ ರಕ್ಷಾ ಕವಚ ವ್ಯವಸ್ಥೆಯನ್ನು ಶೇ 4ರಷ್ಟು ಮಾರ್ಗದಲ್ಲಿ ಮಾತ್ರ ಅಳವಡಿಸಲಾಗಿದೆ. ಇತರೆಡೆ ಈವರೆಗೂ ಏಕೆ ಜಾರಿಗೊಳಿಸಿಲ್ಲ ಎಂದು ಪ್ರಧಾನಿಯನ್ನು ಪ್ರಶ್ನಿಸಿದ್ದರು.

ಒಡಿಶಾದ ಬಾಲಸೋರ್​​ನಲ್ಲಿ ಕೋರಮಂಡಲ್ ಎಕ್ಸ್​ಪ್ರೆಸ್​ ಗೂಡ್ಸ್​ ರೈಲಿಗೆ ಡಿಕ್ಕಿಯಾಗಿದ್ದು ಮತ್ತು ಯಶವಂತಪುರ-ಹೌರಾ ಎಕ್ಸ್​​ಪ್ರೆಸ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಒಟ್ಟು 288 ಮಂದಿ ಮೃತಪಟ್ಟು ಸುಮಾರು ಸಾವಿರ ಮಂದಿ ಗಾಯಗೊಂಡಿದ್ದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?