ಐದು ರಾಜ್ಯಗಳ ಚುನಾವಣೆ ಬಗ್ಗೆ ಚರ್ಚೆ; ಸೇವೆ, ಸಂಕಲ್ಪವೇ ಬಿಜೆಪಿ ಗುರಿ: ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಭೂಪೇಂದ್ರ ಯಾದವ್

ಕೇಂದ್ರದ ಯೋಜನೆ ಜನರಿಗೆ ತಲುಪಿಸಬೇಕೆಂದು ಸೂಚನೆ ನೀಡಲಾಯಿತು. ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು ಎಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಚಿವ ಅಶೋಕ್​ ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆ ಬಗ್ಗೆ ಚರ್ಚೆ; ಸೇವೆ, ಸಂಕಲ್ಪವೇ ಬಿಜೆಪಿ ಗುರಿ: ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ಭೂಪೇಂದ್ರ ಯಾದವ್
ಭೂಪೇಂದ್ರ ಯಾದವ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Nov 07, 2021 | 6:48 PM

ದೆಹಲಿ: ಪಂಜಾಬ್‌ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಸ್ಪರ್ಧೆ ಮಾಡಲಿದೆ. ವಿಧಾನಸಭಾ ಎಲೆಕ್ಷನ್‌ನಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸ್ತೇವೆ. 5 ರಾಜ್ಯಗಳ ಚುನಾವಣೆ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗಿದೆ. ಸೇವೆ ಮತ್ತು ಸಂಕಲ್ಪವೇ ಬಿಜೆಪಿ ಗುರಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ 348 ಜನರು ಭಾಗಿ ಆಗಿದ್ದಾರೆ. ಕರ್ನಾಟಕ ರಾಜ್ಯದಿಂದ 17 ಪ್ರಮುಖರು ಭಾಗವಹಿಸಿದ್ದೆವು. ಕೊರೊನಾ ವೇಳೆ ಮೋದಿ ದಿಟ್ಟ ನಿರ್ಧಾರ ಕೈಗೊಂಡಿದ್ದರು. ದಿಟ್ಟ ನಿರ್ಧಾರದಿಂದ ಜನರ ಪ್ರಾಣ ಉಳಿಸಲು ಸಾಧ್ಯವಾಯಿತು. ದೇಶದಲ್ಲಿ 100 ಕೋಟಿ ಜನರಿಗೆ ಕೊರೊನಾ ಲಸಿಕೆ ಹಾಕಿದ್ದು, ವಿದೇಶಗಳಿಗೆ ಕೊರೊನಾ ಲಸಿಕೆ ಪೂರೈಕೆ ಮಾಡಿದ್ದು, 9 ತಿಂಗಳಲ್ಲಿ ಕೊರೊನಾ 2 ಲಸಿಕೆ ಸಂಶೋಧನೆ ಮಾಡಿದ್ದು, ಅರ್ಥವ್ಯವಸ್ಥೆ ಸರಿಯಾಗಿ ನಿಭಾಯಿಸಿದ ವಿಚಾರದ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಕೋರ್​ಕಮಿಟಿ ಸಭೆ ನಂತರ ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಚಿವ ಆರ್. ಅಶೋಕ್​ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಸಾಧನೆಯ ಬಗ್ಗೆ 3 ಪುಸ್ತಕ ಬಿಡುಗಡೆ ಮಾಡಲಾಗಿದೆ. ಕೇಂದ್ರದ ಯೋಜನೆ ಜನರಿಗೆ ತಲುಪಿಸಬೇಕೆಂದು ಸೂಚನೆ ನೀಡಲಾಯಿತು. ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಕೆ ಮಾಡಲಾಯಿತು ಎಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸಚಿವ ಅಶೋಕ್​ ಹೇಳಿದ್ದಾರೆ.

ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ​ ಅವನತಿಯ ಸ್ಥಿತಿಯಲ್ಲಿದೆ. ಹಾನಗಲ್​ ಗೆಲುವನ್ನು ಕಾಂಗ್ರೆಸ್​ ಸಂಭ್ರಮಿಸುವುದು ಬೇಡ. ಕಲಬುರಗಿ, ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಏಕೆ ಸೋತ್ರಿ? ದೊಡ್ಡಬಳ್ಳಾಪುರದಲ್ಲಿ ಯಾಕೆ ಠೇವಣಿ ಕಳೆದುಕೊಂಡಿದ್ದೀರಿ? ಈ ಬಗ್ಗೆ ಕಾಂಗ್ರೆಸ್​ನವರು ಆತ್ಮಾವಲೋಕನ ಮಾಡಿಕೊಳ್ಳಲಿ. ಮುಂದಿನ ಚುನಾವಣೆಯಲ್ಲಿ ಹಾನಗಲ್​ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಕೋರ್​ಕಮಿಟಿ ಸಭೆ ನಂತರ ಸಚಿವ ಆರ್. ಅಶೋಕ್​ ಹೇಳಿದ್ದಾರೆ.

5 ರಾಜ್ಯಗಳ ಚುನಾವಣೆ ಬಗ್ಗೆ 2 ಗಂಟೆ ಕಾಲ ಚರ್ಚೆ ನಡೆದಿದೆ. ಅಭಿವೃದ್ಧಿ ಕಾರ್ಯಗಳ ಮೇಲೆ ಗೆಲ್ಲುತ್ತೇವೆನ್ನುವ ವಿಶ್ವಾಸವಿದೆ. 2ನೇ ಡೋಸ್​ ಲಸಿಕೆಗೆ ದೊಡ್ಡ ಅಭಿಯಾನಕ್ಕೆ ನಿರ್ಧರಿಸಿದ್ದೇವೆ. ಸೇವಾ ಕಾರ್ಯದಿಂದಾಗಿ ಬಿಜೆಪಿ ಕಾರ್ಯಕರ್ತರು ಮಾದರಿ ಆಗಬೇಕು. ಸೇವಾ ಕಾರ್ಯದಿಂದ ಜನರ ಮನಸು ಗೆಲ್ಲಲು ಮುಂದಾಗಬೇಕು ಎಂದು ಅಶೋಕ್ ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಭಾಷಣ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೊವಿಡ್‌ ಸಂಕಷ್ಟದಲ್ಲಿ ಸಾಕಷ್ಟು ಶ್ರಮ ವಹಿಸಿದ್ದೀರಿ ಎಂದು ಮೋದಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಎನ್‌ಡಿಎಂಸಿ ಸಭಾಂಗಣದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಮುಕ್ತಾಯಗೊಂಡಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪುನೀತ್​ಗೆ​ ಸಂತಾಪ ಸೂಚಿಸಲಾಗಿದೆ. ಸಿ.ಎಂ. ಉದಾಸಿಗೂ ಕಾರ್ಯಕಾರಿಣಿಯಲ್ಲಿ ಸಂತಾಪ ಸಲ್ಲಿಕೆ ಮಾಡಲಾಗಿದೆ.

ಇದನ್ನೂ ಓದಿ: ನವೆಂಬರ್ 19ರಿಂದ 21ರವರೆಗೆ ಬಿಜೆಪಿಯ ಜನಸ್ವರಾಜ್ ಸಮಾವೇಶ; ಎಂಎಲ್​ಸಿ ಎನ್​ ರವಿಕುಮಾರ್ ಮಾಹಿತಿ

ಇದನ್ನೂ ಓದಿ: ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ; ಪ್ರಧಾನಿ ನರೇಂದ್ರ ಮೋದಿ ನೇತೃತ್ವ

Published On - 6:48 pm, Sun, 7 November 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ