ಅಂಬಾನಿಯ ರಿಲಯನ್ಸ್​ ಪರ ನಿರ್ಧಾರ ಕೈಗೊಂಡಿದ್ದು ಯುಪಿಎ; ಬಿಜೆಪಿ ನಾಯಕ ಅಮಿತ್ ಮಾಳವೀಯ ಕೊಟ್ಟ ದಾಖಲೆ ಯಾವುದು ನೋಡಿ

ಆಡಳಿತಾತ್ಮಕ ಸುಧಾರಣೆಗಳ ಬಗ್ಗೆ ಡಾ. ಮನಮೋಹನ್ ಸಿಂಗ್ ಸರ್ಕಾರ ಉತ್ಸುಕವಾಗಿರಲಿಲ್ಲ ಮತ್ತು ನರೇಂದ್ರ ಮೋದಿ ಸರ್ಕಾರ ಹೇಗೆ ಯಶಸ್ಸು ಸಾಧಿಸಿತು ಎಂಬುದನ್ನೂ ಚಂದ್ರಶೇಖರ್ ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ಬಗ್ಗೆ ಸಹಾನುಭೂತಿಯುಳ್ಳವರಾಗಿಯೂ ಅವರು ಮೋದಿ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ನಾಯಕ ಅಮಿತ್ ಮಾಳವೀಯ ಹೇಳಿದ್ದಾರೆ.

ಅಂಬಾನಿಯ ರಿಲಯನ್ಸ್​ ಪರ ನಿರ್ಧಾರ ಕೈಗೊಂಡಿದ್ದು ಯುಪಿಎ; ಬಿಜೆಪಿ ನಾಯಕ ಅಮಿತ್ ಮಾಳವೀಯ ಕೊಟ್ಟ ದಾಖಲೆ ಯಾವುದು ನೋಡಿ
ಅಮಿತ್ ಮಾಳವೀಯImage Credit source: PTI
Follow us
TV9 Web
| Updated By: Ganapathi Sharma

Updated on: Jan 14, 2023 | 3:55 PM

ನವದೆಹಲಿ: ‘ನರೇಂದ್ರ ಮೋದಿ (Narendra Modi) ನೇತೃತ್ವದ ಎನ್​ಡಿಎ ಸರ್ಕಾರ (NDA) ಉದ್ಯಮಿಗಳ ಪರವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ಅದಾನಿ, ಅಂಬಾನಿ ಪರ ಕಾರ್ಯನಿರ್ವಹಿಸುತ್ತಿದೆ. ಬಡವರ ಹಿತ ಕಡೆಗಣಿಸುತ್ತಿದೆ’ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ನಾಯಕ ಅಮಿತ್ ಮಾಳವೀಯ (Amit Malviya) ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ. ಅನಿಲ ಬೆಲೆ ನಿಗದಿ ವಿಚಾರಕ್ಕೆ ಸಂಬಂಧಿಸಿ ಯುಪಿಎ ಸರ್ಕಾರ (UPA) ರಿಲಯನ್ಸ್ (Reliance) ಪರವಾಗಿ ನಿರ್ಧಾರ ಕೈಗೊಂಡಿತ್ತು. ಅದನ್ನು ಎನ್​ಡಿಎ ಸರ್ಕಾರ ಆಮೇಲೆ ಸರಿಪಡಿಸಿತ್ತು ಎಂದು ಮಾಳವೀಯ ಹೇಳಿದ್ದಾರೆ. ಇದಕ್ಕೆ, 2007ರಿಂದ 2011ರ ಅವಧಿಯಲ್ಲಿ ಸಚಿವ ಸಂಪುಟ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಕೆ.ಎಂ. ಚಂದ್ರಶೇಖರ್ ಅವರ ಆತ್ಮಚರಿತ್ರೆ ‘ಆ್ಯಸ್ ಗುಡ್ ಆ್ಯಸ್ ಮೈ ವರ್ಡ್; ಎ ಮೊಮೊಯಿರ್’ನಲ್ಲಿ ಪ್ರಕಟವಾದ ಅಂಶಗಳನ್ನು ಮಾಳವೀಯ ದಾಖಲೆಯಾಗಿ ಒದಗಿಸಿದ್ದಾರೆ.

‘ಅನಿಲ ಬೆಲೆ ವಿಚಾರದಲ್ಲಿ ಯುಪಿಎ ಸರ್ಕಾರ ಹೇಗೆ ರಿಲಯನ್ಸ್ ಪರವಾಗಿ ನಿರ್ಧಾರ ಕೈಗೊಂಡಿತ್ತು ಎಂಬುದಕ್ಕೆ ಇಲ್ಲಿ ನಿದರ್ಶನವಿದೆ. ಯುಪಿಎ ಮಾಡಿದ್ದ ತಪ್ಪನ್ನು ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಿಪಡಿಸಿತ್ತು ಎಂಬ ಉಲ್ಲೇಖವೂ ಇದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಸ್ವ ಹಿತಕ್ಕಾಗಿ ದೇಶದ ಹಿತಾಸಕ್ತಿ ಕಡೆಗಣಿಸಿ ಖಾಸಗಿ ಕಂಪನಿಯೊಂದರ ನಿರ್ದೇಶನಕ್ಕೆ ಅನುಗುಣವಾಗಿ ನಿರ್ಧಾರ ಕೈಗೊಂಡಿದ್ದೇಕೆ? ರಾಹುಲ್ ಗಾಂಧಿ ಅವರ ಅಂಬಾನಿಗೋಸ್ಕರವೇ?’ ಎಂದು ಮಾಳವೀಯ ಟ್ವೀಟ್​ ಮಾಡಿದ್ದಾರೆ. ಅನಿಲ ಬೆಲೆ ನಿಗದಿ ವಿಚಾರಕ್ಕೆ ಸಂಬಂಧಿಸಿ ನಡೆದಿದ್ದ ವ್ಯವಹಾರಗಳಿಗೆ ಸಂಬಂಧಿಸಿ ಕೆ.ಎಂ. ಚಂದ್ರಶೇಖರ್ ಅವರು ಆತ್ಮಚರಿತ್ರೆಯಲ್ಲಿ ಉಲ್ಲೇಖಿಸಿರುವ ಅಂಶಗಳ ಪ್ರತಿಯನ್ನೂ ಟ್ವೀಟ್ ಜತೆ ಲಗತ್ತಿಸಿದ್ದಾರೆ.

ಇದನ್ನೂ ಓದಿ: Threat to Nitin Gadkari: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ 3 ಬಾರಿ ಕೊಲ್ಲುವುದಾಗಿ ಜೀವ ಬೆದರಿಕೆ ಕರೆ

ಸ್ವಾಯತ್ತ ಸಂಸ್ಥೆಯಾಗಿರುವ ಆರ್​ಬಿಐ ನೀತಿ ನಿರೂಪಣೆಯ ಮೇಲೆ ಯುಪಿಎ ಸರ್ಕಾರ ಹೇಗೆ ಪ್ರಭಾವ ಬೀರಿತ್ತು ಎಂಬುದಕ್ಕೆ ನಿದರ್ಶನ ಇಲ್ಲಿದೆ ಎಂದು ಮಾಳವೀಯ ಟ್ವೀಟ್ ಮಾಡಿದ್ದು, ಅದಕ್ಕೆ ಸಂಬಂಧಿಸಿದ ಹೇಳಿಕೆಯುಳ್ಳ ಪುಟವನ್ನು ಲಗತ್ತಿಸಿದ್ದಾರೆ.

‘ಭಯೋತ್ಪಾದನೆ ತಡೆಯಲು ಯುಪಿಎ ಸರ್ಕಾರ ವಿಫಲ’

20/11ರ ಮುಂಬೈ ದಾಳಿ ಸಂದರ್ಭದಲ್ಲಿ ತುರ್ತು ಸಂದರ್ಭವನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಯುಪಿಎ ಸರ್ಕಾರಕ್ಕೆ ಸ್ಪಷ್ಟ ಕಲ್ಪನೆಯೇ ಇರಲಿಲ್ಲ ಎಂದು ಮಾಳವೀಯ ಟೀಕಿಸಿದ್ದಾರೆ. ಅದಕ್ಕೆ ಸಂಬಂಧಿಸಿ ಆತ್ಮಚರಿತ್ರೆಯಲ್ಲಿ ಅಡಕವಾಗಿರುವ ಅಂಶವನ್ನೂ ಉಲ್ಲೇಖಿಸಿದ್ದಾರೆ.

‘ದುರದೃಷ್ಟವಶಾತ್, ಯುಪಿಎ ಸರ್ಕಾರದ ಅವಧಿಯಲ್ಲಿ ದೇಶದಲ್ಲಿ ಭಯೋತ್ಪಾದನೆ ಬಗ್ಗೆ ಸದಾ ಸುದ್ದಿಗಳು ಕೇಳಿಬರುತ್ತಿದ್ದವು. ಯಾವುದೇ ಕ್ಷಣದಲ್ಲಿ ಯಾವುದೇ ಪ್ರದೇಶದಲ್ಲಿ ಉಗ್ರ ದಾಳಿ ನಡೆಯಬಹುದು ಎಂಬ ಆತಂಕ ಜನರಲ್ಲಿ ಮನೆಮಾಡಿರುತ್ತಿತ್ತು. ಈಗ ಕೋವಿಡ್-19 ಸಾಂಕ್ರಾಮಿಕದ ಜತೆ ಜತೆಗೇ ಜೀವನ ಮಾಡಿದಂತೆ ಆಗ ಭಯೋತ್ಪಾದನೆ ಜತೆಗೇ ಜೀವನ ನಿರ್ವಹಿಸಬೇಕಾದ ಪರಿಸ್ಥಿತಿ ಇತ್ತು. 26/11ರ ದಾಳಿ ಸಂದರ್ಭದಲ್ಲಿ ಅಂಥ ತುರ್ತು ಪರಿಸ್ಥಿತಿಯನ್ನು ಉನ್ನತ ಮಟ್ಟದಲ್ಲಿ ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಸ್ಪಷ್ಟ ಕಲ್ಪನೆಯೇ ಇರಲಿಲ್ಲ. ಯಾರು ಏನು ಮಾಡಬೇಕು ಎಂಬ ಬಗ್ಗೆಯೂ ಸ್ಪಷ್ಟತೆ ಇರಲಿಲ್ಲ’ ಎಂದು ಆತ್ಮಚರಿತ್ರೆಯಲ್ಲಿ ಚಂದ್ರಶೇಖರ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Murugesh Nirani: ಪಿಂಪ್ ಸಚಿವ ಎಂಬ ಯತ್ನಾಳ್ ಹೇಳಿಕೆಗೆ ಮನನೊಂದು ಭಾವುಕರಾದ ಮುರುಗೇಶ್​ ನಿರಾಣಿ

ಆಡಳಿತಾತ್ಮಕ ಸುಧಾರಣೆಗಳ ಬಗ್ಗೆ ಡಾ. ಮನಮೋಹನ್ ಸಿಂಗ್ ಸರ್ಕಾರ ಉತ್ಸುಕವಾಗಿರಲಿಲ್ಲ ಮತ್ತು ನರೇಂದ್ರ ಮೋದಿ ಸರ್ಕಾರ ಹೇಗೆ ಯಶಸ್ಸು ಸಾಧಿಸಿತು ಎಂಬುದನ್ನೂ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ. ಎಲೆಕ್ಟ್ರಿಸಿಟಿ ಮತ್ತು ಆಧಾರ್ ಯೋಜನೆ ಅನುಷ್ಠಾನದಲ್ಲಿ ಮೋದಿ ಸರ್ಕಾರ ಮಾಡಿರುವ ಸುಧಾರಣೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಬಗ್ಗೆ ಸಹಾನುಭೂತಿಯುಳ್ಳವರಾಗಿಯೂ ಚಂದ್ರಶೇಖರ್ ಮೋದಿ ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮಾಳವೀಯ ಮತ್ತೊಂದು ಟ್ವೀಟ್​​ನಲ್ಲಿ ಹೇಳಿದ್ದಾರೆ. ಜತೆಗೆ, ಚಂದ್ರಶೇಖರ್ ಅವರ ಆತ್ಮಚರಿತ್ರೆಯ ಪುಟಗಳನ್ನು ಲಗತ್ತಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್