ಉತ್ತರಪ್ರದೇಶದ ಬ್ರಾಹ್ಮಣ ಸಮುದಾಯದ ಮುಖಂಡರೊಂದಿಗೆ ಜೆ.ಪಿ.ನಡ್ಡಾ ಸಭೆ; ಚುನಾವಣೆ ಕೆಲವೇ ತಿಂಗಳಿರುವಾಗ ಬಿಜೆಪಿಗೆ ಶುರುವಾದ ಹೊಸ ಆತಂಕ

ಇನ್ನು ಬಿಜೆಪಿ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದವರನ್ನು ತಲುಪಲು, ಇದೇ ಸಮುದಾಯದ ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.

ಉತ್ತರಪ್ರದೇಶದ ಬ್ರಾಹ್ಮಣ ಸಮುದಾಯದ ಮುಖಂಡರೊಂದಿಗೆ ಜೆ.ಪಿ.ನಡ್ಡಾ ಸಭೆ; ಚುನಾವಣೆ ಕೆಲವೇ ತಿಂಗಳಿರುವಾಗ ಬಿಜೆಪಿಗೆ ಶುರುವಾದ ಹೊಸ ಆತಂಕ
ಜೆ.ಪಿ. ನಡ್ಡಾ
Follow us
TV9 Web
| Updated By: Lakshmi Hegde

Updated on: Dec 27, 2021 | 3:55 PM

ಉತ್ತರಪ್ರದೇಶದಲ್ಲಿ 2022ರ ಮಾರ್ಚ್​ ತಿಂಗಳಲ್ಲಿ ಚುನಾವಣೆ (Uttar Pradesh Assembly Election 2022) ನಡೆಯಲಿದೆ. ಅದರ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ಸೇರಿ ಎಲ್ಲ ಪಕ್ಷಗಳೂ ಕೂಡ ತಮ್ಮದೇ ಮಾರ್ಗದಲ್ಲಿ ಪ್ರಚಾರ ಶುರುವಿಟ್ಟುಕೊಂಡಿವೆ. ರಾಜ್ಯದಲ್ಲಿ ಬಹುಮುಖ್ಯವಾಗಿರುವ ಬ್ರಾಹ್ಮಣರ ಮತಗಳಿಸುವುದಕ್ಕೋಸ್ಕರ ಬಿಜೆಪಿ ತನ್ನದೇ ಮಾರ್ಗದಲ್ಲಿ ಕೆಲಸ ಶುರು ಮಾಡಿದೆ. ಅದರ ಒಂದು ಭಾಗವಾಗಿ ಇಂದು ರಾಜ್ಯದ ಬ್ರಾಹ್ಮಣ ಸಮುದಾಯದ ಪ್ರಮುಖ ನಾಯಕರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದಾರೆ.  ಅದಕ್ಕೂ ಮೊದಲು, ಉತ್ತರ ಪ್ರದೇಶ ರಾಜ್ಯ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಅವರ ನಿವಾಸದಲ್ಲಿ ಭಾನುವಾರ ರಾಜ್ಯದ ಬ್ರಾಹ್ಮಣ ಮುಖಂಡರು ಸರಣಿ ಸಭೆ ನಡೆಸಿದ್ದಾರೆ. ಬ್ರಾಹ್ಮಣ ಸಮುದಾಯದ ಮತ ಬಿಜೆಪಿ ಪಾಲಾಗುವಂತೆ ಏನು ಮಾಡಬಹುದು ಎಂಬ ಬಗ್ಗೆ ಇಲ್ಲಿ ಚರ್ಚೆ ನಡೆದಿದೆ.

ಇನ್ನು ಬಿಜೆಪಿ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದವರನ್ನು ತಲುಪಲು, ಇದೇ ಸಮುದಾಯದ ನಾಯಕರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.  ಈ ಸಮಿತಿಯಲ್ಲಿ ಬ್ರಾಹ್ಮಣ ನಾಯಕರಾದ ಬಿಜೆಪಿ ರಾಜ್ಯ ಸಭಾ ಮುಖ್ಯ ಸಚೇತಕ ಶಿವ ಪ್ರತಾಪ್​ ಶುಕ್ಲಾ, ಮುಖಂಡರಾದ ಅಭಿಜಿತ್​ ಮಿಶ್ರಾ, ಗುಜರಾತ್​ ಎಂಪಿ ರಾಂ ಭಾಯ್​  ಮೊಕರಿಯಾ, ಮಹೇಶ್ ಶರ್ಮಾ ಇದ್ದಾರೆ.  ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಪ್ರಮುಖ ಆರೋಪಿಯಾಗಿರುವ ಆಶೀಶ್​ ಮಿಶ್ರಾ, ಕೇಂದ್ರ ಸಚಿವ ಅಜಯ್ ಮಿಶ್ರಾರ ಪುತ್ರ. ಇವರು ಬ್ರಾಹ್ಮಣ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇದು ಮುಂಬರುವ ಚುನಾವಣೆಯಲ್ಲಿ ಬ್ರಾಹ್ಮಣರ ಮತಗಳಿಸಲು ಅಡ್ಡಿಯನ್ನುಂಟುಮಾಡಬಹುದು ಎಂಬ ಹೊಸ ಆತಂಕದಲ್ಲಿ ಬಿಜೆಪಿ ಸರ್ಕಾರವಿದ್ದು, ಅದನ್ನು ಹೋಗಲಾಡಿಸಿಕೊಳ್ಳುವ ಸಲುವಾಗಿ ಸಮಿತಿ ರಚನೆ ಮಾಡಿದೆ. ಈ ಮೂಲಕ ಬ್ರಾಹ್ಮಣ ಸಮುದಾಯವನ್ನು ಹೆಚ್ಚೆಚ್ಚು ತಲುಪುವ ಪ್ರಯತ್ನ ಮಾಡುತ್ತಿದೆ.

ಉತ್ತರಪ್ರದೇಶದಲ್ಲಿ ಶೇ.9-11ರಷ್ಟು ಬ್ರಾಹ್ಮಣರಿದ್ದಾರೆ. ಅದೇ ಪೂರ್ವಾಂಚಲದಲ್ಲಿ ಶೇ.20ರಷ್ಟಿದ್ದಾರೆ. 1990ಕ್ಕೂ ಮೊದಲು ಉತ್ತರಪ್ರದೇಶದ ಸರ್ಕಾರದ ಕ್ಯಾಬಿನೆಟ್​ನಲ್ಲಿ 8ಕ್ಕೂ ಹೆಚ್ಚು ಬ್ರಾಹ್ಮಣ ಮಂತ್ರಿಗಳು ಇದ್ದರು.  ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷವಾದರೂ ಬ್ರಾಹ್ಮಣ ಮತವನ್ನು ನಿರ್ಲಕ್ಷಿಸುವಂತಿಲ್ಲ ಎಂದೇ ಹೇಳಲಾಗುತ್ತದೆ. ಹೀಗಾಗಿ ಈ ಬಾರಿ ಮಾಯಾವತಿಯ ಬಹುಜನ ಸಮಾಜವಾದಿ ಪಕ್ಷ ಕೂಡ ಬ್ರಾಹ್ಮಣರ ಮತ ಗಳಿಸಲು ಮುಂದಾಗಿದೆ. ಹೀಗಿರುವಾಗ, ಪ್ರಸ್ತುತ ಉತ್ತರಪ್ರದೇಶದಲ್ಲಿ ಬ್ರಾಹ್ಮಣರು ಬಿಜೆಪಿ ಸರ್ಕಾರದ ವಿರುದ್ಧ ಕೆಲವು ಕಾರಣಕ್ಕೆ ಅಸಮಾಧಾನ ಹೊಂದಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಚುನಾವಣೆಗೂ ಪೂರ್ವ ಅವರನ್ನು ಸಮಾಧಾನ ಪಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ರಾತ್ರಿ ಕರ್ಫ್ಯೂ ವಿಧಿಸಿ ಬೆಳಗ್ಗೆ ರ್ಯಾಲಿ ನಡೆಸುತ್ತಿರುವ ಯೋಗಿ ಆದಿತ್ಯನಾಥ ವಿರುದ್ಧ ವರುಣ್ ಗಾಂಧಿ ವಾಗ್ದಾಳಿ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ