JP Nadda: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕೊರೊನಾ ಪಾಸಿಟಿವ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗೆ ಕೊರೊನಾ ಪಾಸಿಟಿವ್​ ದೃಢವಾಗಿದೆ. ಜಗತ್ ಪ್ರಕಾಶ್​ ನಡ್ಡಾ ಮನೆಯಲ್ಲೇ ಐಸೋಲೇಷನ್​ ಆಗಿದ್ದಾರೆ.

JP Nadda: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕೊರೊನಾ ಪಾಸಿಟಿವ್
ಜೆ.ಪಿ. ನಡ್ಡಾ
Follow us
TV9 Web
| Updated By: ganapathi bhat

Updated on:Jan 10, 2022 | 9:32 PM

ದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗೆ (JP Nadda) ಕೊರೊನಾ ಪಾಸಿಟಿವ್​ (Corona Positive) ದೃಢವಾಗಿದೆ. ಜಗತ್ ಪ್ರಕಾಶ್​ ನಡ್ಡಾ ಮನೆಯಲ್ಲೇ ಐಸೋಲೇಷನ್​ ಆಗಿದ್ದಾರೆ. ಕೊರೊನಾ ಪ್ರಾಥಮಿಕ ಲಕ್ಷಣಗಳು ಕಂಡುಬಂದ ಕಾರಣ ನಾನು ಕೊವಿಡ್ ಪರೀಕ್ಷೆ (Covid19) ಮಾಡಿಸಿಕೊಂಡಿದ್ದೆ. ನನ್ನ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಈಗ ನಾನು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆಯಂತೆ ಹೋಮ್ ಐಸೋಲೇಷನ್​ನಲ್ಲಿ ಇದ್ದೇನೆ. ನನ್ನ ಜೊತೆಗೆ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಜೆಪಿ ನಡ್ಡಾ ಮಾಹಿತಿ ಹಂಚಿಕೊಂಡಿದ್ದಾರೆ.

ಇದಕ್ಕೂ ಮುನ್ನ ರಾಜನಾಥ್ ಸಿಂಗ್ ಕೊವಿಡ್​ಗೆ ತುತ್ತಾಗಿದ್ದಾರೆ. ಇತ್ತ ಕರ್ನಾಟಕದಲ್ಲಿ ಇಂದು (ಜನವರಿ 10) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಕೊವಿಡ್ ಪಾಸಿಟಿವ್ ಆಗಿದ್ದಾರೆ. ಇದಕ್ಕೂ ಮುನ್ನ ಕರ್ನಾಟಕದಲ್ಲಿ ಆರ್. ಅಶೋಕ್, ಬಿ.ಸಿ. ನಾಗೇಶ್​ಗೆ ಕೊರೊನಾ ದೃಢಪಟ್ಟಿತ್ತು.

ಕರ್ನಾಟಕ ಕೊರೊನಾ ವರದಿ

ಕರ್ನಾಟಕ ರಾಜ್ಯದಲ್ಲಿ ಇಂದು (ಜನವರಿ 10) ಹೊಸದಾಗಿ 11,698 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30,63,656 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,65,105 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,374 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 60,148 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 9,221 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 13,08,540 ಕ್ಕೆ ಏರಿಕೆಯಾಗಿದೆ. 13,08,540 ಸೋಂಕಿತರ ಪೈಕಿ 12,43,155 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,424 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 48,960 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 11,698 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಇದನ್ನೂ ಓದಿ: Basavaraj Bommai: ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್​

Published On - 9:18 pm, Mon, 10 January 22

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ