AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ತ್ರಿಪುರಾ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿಯಿಂದ ಮಾಜಿ ಸಿಎಂ ಬಿಪ್ಲಬ್ ದೇಬ್ ನಾಮನಿರ್ದೇಶನ

ತ್ರಿಪುರಾದ ಮಾಜಿ ಸಿಎಂ ಬಿಪ್ಲಬ್ ದೇಬ್ ಅವರನ್ನು ಬಿಜೆಪಿಯ ಹರಿಯಾಣ ರಾಜ್ಯ ಉಸ್ತುವಾರಿಯನ್ನಾಗಿ ಮಾಡಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಮಾಡಲಾಗಿದೆ.

Big News: ತ್ರಿಪುರಾ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿಯಿಂದ ಮಾಜಿ ಸಿಎಂ ಬಿಪ್ಲಬ್ ದೇಬ್ ನಾಮನಿರ್ದೇಶನ
ತ್ರಿಪುರಾದ ಮಾಜಿ ಸಿಎಂ ಬಿಪ್ಲಬ್ ದೇಬ್
TV9 Web
| Updated By: ಸುಷ್ಮಾ ಚಕ್ರೆ|

Updated on: Sep 10, 2022 | 9:06 AM

Share

ನವದೆಹಲಿ: ತ್ರಿಪುರಾದಿಂದ ಮುಂಬರುವ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿಪ್ಲಬ್ ದೇಬ್ (Biplab Deb) ಅವರನ್ನು ಘೋಷಿಸಲಾಗಿದೆ. ತ್ರಿಪುರಾದ (Tripura) ಮಾಜಿ ಸಿಎಂ ಬಿಪ್ಲಬ್ ದೇಬ್ ಅವರನ್ನು ಬಿಜೆಪಿಯ ಹರಿಯಾಣ ರಾಜ್ಯ ಉಸ್ತುವಾರಿಯನ್ನಾಗಿ ಮಾಡಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಮಾಡಲಾಗಿದೆ. ತ್ರಿಪುರಾದ ಮಾಜಿ ಸಿಎಂ ಬಿಪ್ಲಬ್ ದೇಬ್ ಅವರ ಜನಪ್ರಿಯತೆಯಿಂದ ಈಶಾನ್ಯ ರಾಜ್ಯದಲ್ಲಿ 2018ರಲ್ಲಿ ಭರ್ಜರಿ ಜಯ ಗಳಿಸಲಾಗಿತ್ತು. 2018ರ ಜಯ ತ್ರಿಪುರಾದಲ್ಲಿ ಎಡಪಕ್ಷಗಳ 25 ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿ, ಬಿಜೆಪಿಯನ್ನು ಆಡಳಿತಕ್ಕೆ ತರಲು ಕಾರಣವಾಯಿತು.

2018ರ ಮಾರ್ಚ್ 9ರಂದು ತ್ರಿಪುರಾದ 10ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಬಿಪ್ಲಬ್ ದೇಬ್ ಈ ವರ್ಷ ಮೇ 14ರಂದು ತ್ರಿಪುರಾದ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು. ನಂತರ ಅವರ ನಂತರ ಮಾಣಿಕ್ ಸಹಾ ಅವರು ಮೇ 15ರಂದು ತ್ರಿಪುರಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಇದನ್ನೂ ಓದಿ: Manik Saha: ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಾಹಾ ನೇಮಕ; ಶುಭ ಕೋರಿದ ಬಿಪ್ಲಬ್ ದೇಬ್

“ನನ್ನನ್ನು ತ್ರಿಪುರಾದಿಂದ ರಾಜ್ಯಸಭಾ ಸಂಸದರಾಗಿ ಬಿಜೆಪಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ, ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಕೃತಜ್ಞತೆಗಳು. ತ್ರಿಪುರಾ ಮತ್ತು ಇಲ್ಲಿನ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಬದ್ಧನಾಗಿದ್ದೇನೆ” ಎಂದು ಬಿಪ್ಲಬ್ ದೇಬ್ ಟ್ವೀಟ್ ಮಾಡಿದ್ದಾರೆ.

ಮಾಣಿಕ್ ಸಹಾ ಅವರಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ. ಈ ಚುನಾವಣೆಯು ಸೆಪ್ಟೆಂಬರ್ 22ರಂದು ನಡೆಯಲಿದೆ. ಮಾಣಿಕ್ ಸಹಾ ಈ ವರ್ಷದ ಏಪ್ರಿಲ್‌ನಲ್ಲಿ ಮೇಲ್ಮನೆಗೆ ಚುನಾಯಿತರಾಗಿದ್ದರು. ಅವರ ಅವಧಿಯು ಏಪ್ರಿಲ್ 2028ರವರೆಗೆ ಇರಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್