ದೆಹಲಿ ಆಗಸ್ಟ್ 20: ಸೆಪ್ಟೆಂಬರ್ 3 ರಂದು ಉಪಚುನಾವಣೆ (Rajya Sabha bypolls)ನಡೆಯಲಿರುವ 12 ರಾಜ್ಯಸಭಾ ಸ್ಥಾನಗಳ ಪೈಕಿ ಒಂಬತ್ತು ಸ್ಥಾನಗಳಿಗೆ ಬಿಜೆಪಿ ಮಂಗಳವಾರ ಅಭ್ಯರ್ಥಿಗಳನ್ನು ಘೋಷಿಸಿದೆ. ಸದ್ಯ ಬಿಜೆಪಿ (BJP) ಆಡಳಿತವಿರುವ ರಾಜಸ್ಥಾನದಿಂದ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು (Ravneet Bittu) ಕಣಕ್ಕಿಳಿದಿದ್ದಾರೆ. 48 ವರ್ಷದ ನಾಯಕ ಬಿಟ್ಟು ಅವರು ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರು ಪಂಜಾಬ್‌ನ ಲೂಧಿಯಾನದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು ಆದರೆ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ವಿರುದ್ಧ ಸೋತರು. ಬಿಟ್ಟು ಪ್ರಸ್ತುತ ಕೇಂದ್ರ ರೈಲ್ವೆ ಮತ್ತು ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವರಾಗಿದ್ದಾರೆ.
ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಕೇಂದ್ರದ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರನ್ನು ಮಧ್ಯಪ್ರದೇಶದಿಂದ ಬಿಜೆಪಿ ಕಣಕ್ಕಿಳಿಸಿದೆ. ರಾಜ್ಯಸಭಾ ಸದಸ್ಯ ಮತ್ತು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಗುನಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದ ನಂತರ ಲೋಕಸಭೆ ಸ್ಥಾನ ತೆರವಾಗಿದೆ.
भारतीय जनता पार्टी की केन्द्रीय चुनाव समिति ने विभिन्न राज्यों में होने वाले आगामी राज्यसभा के उप-चुनाव हेतु निम्नलिखित नामों पर अपनी स्वीकृति प्रदान की है। pic.twitter.com/0TFtIv3t9c
— BJP (@BJP4India) August 20, 2024
ಕುರಿಯನ್ ಅವರು ಬಿಜೆಪಿಯ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ನೊಂದಿಗೆ ರಾಜಕೀಯ ಪ್ರವೇಶಿಸಿದ ನಂತರ ಕಳೆದ ನಾಲ್ಕು ದಶಕಗಳಿಂದ ಕೇರಳ ಬಿಜೆಪಿ ಘಟಕದಲ್ಲಿ ಸಂಘಟನೆಯ ಪ್ರಮುಖ ವ್ಯಕ್ತಿಯಾಗಿದ್ದಾರೆ.
ಬಿಹಾರದಿಂದ ರಾಜ್ಯಸಭಾ ಉಪಚುನಾವಣೆಗೆ ಹಿರಿಯ ವಕೀಲ ಮನನ್ ಕುಮಾರ್ ಮಿಶ್ರಾ ಬಿಜೆಪಿ ಅಭ್ಯರ್ಥಿ ಆಗಿದ್ದಾರೆ. ಎರಡು ತಿಂಗಳ ಹಿಂದೆ ಕಾಂಗ್ರೆಸ್ ತೊರೆದು ಪಕ್ಷ ಸೇರಿದ್ದ ಕಿರಣ್ ಚೌಧರಿ ಅವರನ್ನು ಹರಿಯಾಣದ ಅಭ್ಯರ್ಥಿಯನ್ನಾಗಿ ಬಿಜೆಪಿ ನಾಮ ನಿರ್ದೇಶನ ಮಾಡಿದೆ. ಕಾಂಗ್ರೆಸ್ ನಾಯಕ ದೀಪೇಂದರ್ ಸಿಂಗ್ ಹೂಡಾ ಅವರು ರೋಹ್ಟಕ್‌ನಿಂದ ಲೋಕಸಭೆಗೆ ಆಯ್ಕೆಯಾದ ನಂತರ ಹರ್ಯಾಣ ಏಕೈಕ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ಅಗತ್ಯವಾಗಿತ್ತು.
ಮಹಾರಾಷ್ಟ್ರದಿಂದ, ಬಿಜೆಪಿ ಧೈರ್ಯಶೀಲ್ ಪಾಟೀಲ್ ಅವರನ್ನು ಕಣಕ್ಕಿಳಿಸಿದೆ. ಅದೇ ವೇಳೆ ಮಮತಾ ಮೊಹಾಂತಾ ಒಡಿಶಾದಿಂದ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಜೂನ್‌ನಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಇಲ್ಲಿ ಬಿಜೆಪಿ ಗೆದ್ದಿದೆ. ಬಿಜೆಪಿ ತ್ರಿಪುರಾದಿಂದ ರಾಜೀಬ್ ಭಟ್ಟಾಚಾರ್ಯ ಅವರನ್ನು ಕಣಕ್ಕಿಳಿಸಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:04 pm, Tue, 20 August 24