Big News: ಡಿಸಿಎಂ ಮನೀಶ್ ಸಿಸೋಡಿಯಾಗೆ ಬಿಜೆಪಿಯಿಂದ ಸಿಎಂ ಸ್ಥಾನದ ಆಫರ್; ಅರವಿಂದ್ ಕೇಜ್ರಿವಾಲ್ ಮತ್ತೊಂದು ಆರೋಪ

ಬಿಜೆಪಿಯವರು ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಸಿಎಂ ಸ್ಥಾನ ನೀಡಿ, ಅವರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದಾಗಿ ಆಮಿಷವೊಡ್ಡಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದು, ಇದರಿಂದ ದೆಹಲಿ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ.

Big News: ಡಿಸಿಎಂ ಮನೀಶ್ ಸಿಸೋಡಿಯಾಗೆ ಬಿಜೆಪಿಯಿಂದ ಸಿಎಂ ಸ್ಥಾನದ ಆಫರ್; ಅರವಿಂದ್ ಕೇಜ್ರಿವಾಲ್ ಮತ್ತೊಂದು ಆರೋಪ
ಅರವಿಂದ್ ಕೇಜ್ರಿವಾಲ್ - ಮನೀಶ್ ಸಿಸೋಡಿಯ
Follow us
| Updated By: ಸುಷ್ಮಾ ಚಕ್ರೆ

Updated on:Aug 25, 2022 | 3:02 PM

ನವದೆಹಲಿ: ಆಮ್ ಆದ್ಮಿ ಪಕ್ಷ (Aam Addmi Party) ಬಿಟ್ಟು ಬಿಜೆಪಿಗೆ ಬಂದರೆ ನಿಮ್ಮ ಮೇಲಿರುವ ಎಲ್ಲ ಕೇಸುಗಳನ್ನೂ ಖುಲಾಸೆಗೊಳಿಸುವುದಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ (Manish Sisodia) ಬಿಜೆಪಿ ಆಫರ್ ನೀಡಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಕೆಲವು ದಿನಗಳ ಹಿಂದೆ ಹೇಳಿದ್ದರು. ಬಿಜೆಪಿ ಆ ರೀತಿ ಮನೀಶ್ ಸಿಸೋಡಿಯಾಗೆ ಆಫರ್ ನೀಡಿರುವ ಆಡಿಯೋ ರೆಕಾರ್ಡ್ ಕೂಡ ಇದೆ ಎನ್ನಲಾಗಿತ್ತು. ಡಿಸಿಎಂ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಡೆದ ಬೆನ್ನಲ್ಲೇ ಈ ಬಗ್ಗೆ ಚರ್ಚೆಗಳು ಶುರುವಾಗಿದ್ದವು. ಅದಾದ ಬಳಿಕ ಮತ್ತೆ ಈ ಕುರಿತು ಮಾತನಾಡಿರುವ ಸಿಎಂ ಅರವಿಂದ್ ಕೇಜ್ರಿವಾಲ್, ಬಿಜೆಪಿ ದೆಹಲಿಯ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಆಮಿಷವೊಡ್ಡಿದೆ ಎಂದು ಹೇಳಿದ್ದಾರೆ. ಈ ಮೂಲಕ ದೆಹಲಿಯಲ್ಲಿ ರಾಜಕೀಯ ಗದ್ದಲ ಗುರುವಾರ ಮತ್ತಷ್ಟು ತೀವ್ರಗೊಂಡಿದೆ. ಪ್ರಸ್ತುತ ಸನ್ನಿವೇಶ ಮತ್ತು ಆಪ್ ನಾಯಕರ ಮೇಲೆ ಸಿಬಿಐ ಮತ್ತು ಇಡಿ ದಾಳಿಗಳ ಕುರಿತು ಚರ್ಚಿಸಲು ಕರೆದಿದ್ದ ತುರ್ತು ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ತಮ್ಮ ನಿವಾಸದಲ್ಲಿ ಈ ವಿಷಯ ತಿಳಿಸಿದ್ದಾರೆ.

  1. ಅರವಿಂದ್ ಕೇಜ್ರಿವಾಲ್ ಹೇಳಿದ್ದೇನು?: ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಬಿಜೆಪಿ ಸಂದೇಶ ರವಾನಿಸಿದ್ದು, ಆಪ್ ಮತ್ತು ಅರವಿಂದ್ ಕೇಜ್ರಿವಾಲ್ ಅವರನ್ನು ಬಿಟ್ಟು ಬರುವಂತೆ ಸೂಚಿಸಿದೆ.
  2. ಮನೀಶ್ ಸಿಸೋಡಿಯಾ ಆಮ್ ಆದ್ಮಿಯ ಇತರ ಕೆಲವು ಶಾಸಕರೊಂದಿಗೆ ಬಿಜೆಪಿ ಸೇರಬೇಕೆಂದು ಆಫರ್ ಬಂದಿದೆ.
  3. ಬಿಜೆಪಿಯವರು ಮನೀಷ್ ಸಿಸೋಡಿಯಾ ಅವರಿಗೆ ದೆಹಲಿ ಸಿಎಂ ಸ್ಥಾನ ನೀಡಿ, ಅವರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದಾಗಿಯೂ ಹೇಳಿದ್ದಾರೆ.
  4. ನನ್ನ ಹಿಂದಿನ ಜನ್ಮದಲ್ಲಿ ನಾನು ಒಳ್ಳೆಯ ಕೆಲಸಗಳನ್ನು ಮಾಡಿರಬೇಕು. ಹೀಗಾಗಿ, ಈ ಆಮಿಷಕ್ಕೆಲ್ಲ ಬಗ್ಗದ ಮನೀಶ್ ಸಿಸೋಡಿಯಾ ಅವರಂತಹ ವ್ಯಕ್ತಿ ನನಗೆ ಸಿಕ್ಕಿದ್ದಾರೆ. ಅವರು ಬಿಜೆಪಿಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.
  5. ಬಿಜೆಪಿ ಸೇರಲು ನಮ್ಮ ಶಾಸಕರಿಗೆ ಹಣದ ಆಮಿಷ ಒಡ್ಡುತ್ತಿದ್ದಾರೆ. ಎಎಪಿ ತೊರೆದು ಬಿಜೆಪಿ ಸೇರಲು ಬಿಜೆಪಿ ತಲಾ 20 ಕೋಟಿ ರೂ. ನೀಡುತ್ತಿದೆ ಎಂಬ ಸುದ್ದಿ ನನಗೆ ಸಿಕ್ಕಿದೆ.
  6. ಬಿಜೆಪಿಯವರ ಆಫರ್ ಅನ್ನು ನಮ್ಮ ಪಕ್ಷದ ಒಬ್ಬ ಶಾಸಕರೂ ಸಹ ಸ್ವೀಕರಿಸದಿರುವುದು ನನಗೆ ತುಂಬಾ ಸಂತೋಷವಾಗಿದೆ.
  7. ನೀವು ಪ್ರಾಮಾಣಿಕ ಪಕ್ಷಕ್ಕೆ ಮತ ಹಾಕಿದ್ದೀರಿ. ನಾವು ಸಾಯುತ್ತೇವೆಯೇ ವಿನಃ ದೇಶದ ಜನರಿಗೆ ಎಂದಿಗೂ ದ್ರೋಹ ಮಾಡುವುದಿಲ್ಲ ಎಂದು ನಾನು ದೆಹಲಿಯ ಜನರಿಗೆ ಹೇಳಲು ಬಯಸುತ್ತೇನೆ.

ನಿನ್ನೆಯಷ್ಟೇ ಆಮ್ ಆದ್ಮಿ ಪಕ್ಷದಿಂದ ಹೊರಬರಲು ಮತ್ತು ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪಕ್ಷವು ತನ್ನ 12 ಶಾಸಕರನ್ನು ಸಂಪರ್ಕಿಸಿದೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು. ಬಿಜೆಪಿ ನಮ್ಮ 12 ಶಾಸಕರನ್ನು ಸಂಪರ್ಕಿಸಿ ಆಪ್ ಒಡೆಯುವಂತೆ ಹೇಳಿದೆ. ಅವರು 40 ಶಾಸಕರನ್ನು ತಮ್ಮತ್ತ ಸೆಳೆಯಲು ಸಂಚು ಮಾಡಿದ್ದು, ತಲಾ 20 ಕೋಟಿ ರೂ.ಗಳನ್ನು ನೀಡಲು ಸಿದ್ಧರಿದ್ದಾರೆ. ಆದರೆ, ದೆಹಲಿಯಲ್ಲಿ ‘ಆಪರೇಷನ್ ಕಮಲ’ ವಿಫಲವಾಗಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕರು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Thu, 25 August 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ