ಬಿಜೆಪಿ ನಾಯಕರಿಗೆ ಜೀಪ್, ನಾಲಿಗೆಯನ್ನು ಓಡಿಸುವುದು ಹೇಗೆಂದು ಚೆನ್ನಾಗಿ ಗೊತ್ತಿದೆ; ಅಖಿಲೇಶ್ ಯಾದವ್ ವಾಗ್ದಾಳಿ

ಲಖೀಂಪುರ ಘಟನೆಯ ವಿಷಯವನ್ನು ಪ್ರಸ್ತಾಪಿಸಿದ ಅಖಿಲೇಶ್ ಯಾದವ್, ಲಖಿಂಪುರದಲ್ಲಿ ನಡೆದ ಘಟನೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಂತಿದೆ. ಬಿಜೆಪಿಯವರು ಬೆದರಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದಿದ್ದಾರೆ.

ಬಿಜೆಪಿ ನಾಯಕರಿಗೆ ಜೀಪ್, ನಾಲಿಗೆಯನ್ನು ಓಡಿಸುವುದು ಹೇಗೆಂದು ಚೆನ್ನಾಗಿ ಗೊತ್ತಿದೆ; ಅಖಿಲೇಶ್ ಯಾದವ್ ವಾಗ್ದಾಳಿ
ಅಖಿಲೇಶ್ ಯಾದವ್​
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 27, 2021 | 7:34 PM

ನವದೆಹಲಿ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರಿಗೆ ‘ಜೀಪ್ ಮತ್ತು ಜೀಬ್’ (ನಾಲಿಗೆ) ಓಡಿಸುವುದು ಹೇಗೆಂದು ಚೆನ್ನಾಗಿಯೇ ತಿಳಿದಿದೆ ಎಂದು ಲೇವಡಿ ಮಾಡಿದ್ದಾರೆ. ಸಲ್ಹಿಯಾ ಸಿಂಗ್ ಅರ್ಕವಂಶಿಯ 15ನೇ ಮೂರ್ತಿ ಸ್ಥಾಪನಾ ದಿವಸ್ ಸಂದರ್ಭದಲ್ಲಿ ಮಿತ್ರ ಪಕ್ಷವಾದ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷವು ಶನಿವಾರ ಆಯೋಜಿಸಿದ್ದ ಹರ್ದೋಯ್‌ನಲ್ಲಿ ನಡೆದ ‘ಭಾಗಿದರಿ ಸಂಕಲ್ಪ ಮೋರ್ಚಾ’ ರ್ಯಾಲಿಯಲ್ಲಿ ಎಸ್‌ಪಿ ಮುಖ್ಯಸ್ಥರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಇಂದಿನ ಜನಸಂದಣಿಯನ್ನು ನೋಡಿದ ನಂತರ ದೆಹಲಿ ಮತ್ತು ಲಕ್ನೋದಲ್ಲಿ ಕುಳಿತಿರುವ ನಾಯಕರು ಕೆಂಪು-ಹಳದಿ ಬಣ್ಣಕ್ಕೆ ತಿರುಗುತ್ತಿದ್ದಾರೆ. ಉತ್ತರ ಪ್ರದೇಶ ಈಗ ಬದಲಾವಣೆಯನ್ನು ಬಯಸುತ್ತಿದೆ. ಸದ್ಯದಲ್ಲೇ ಈಗಿರುವ ಸರ್ಕಾರಕ್ಕೆ ಮುಕ್ತಿ ಸಿಗಲಿದೆ ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಖೇಲಾ ಹೋಯ್ಬೆ ಹಾಡು ಬಹಳ ಫೇಮಸ್ ಆಗಿತ್ತು. ಆ ಹಾಡು ಮಮತಾ ಬ್ಯಾನರ್ಜಿ 3ನೇ ಬಾರಿಗೆ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಇದೀಗ ಅದೇ ರೀತಿ ಉತ್ತರ ಪ್ರದೇಶದ ಸಮಾಜವಾದಿ ಪಕ್ಷ ಖದೇಡಾ ಹೋಯ್ಬೆ ಸಾಲುಗಳನ್ನು ಬಿಜೆಪಿ ವಿರುದ್ಧ ಬಳಸಿಕೊಳ್ಳಲು ಮುಂದಾಗಿದೆ.

ಬಿಜೆಪಿ ಎಲ್ಲರ ಕೆಲಸವನ್ನೂ ಕಸಿದುಕೊಳ್ಳಲಾಗಿದೆ. ಇದೀಗ ಸಂದಿಲದ ಪ್ರಸಿದ್ಧ ಲಡ್ಡುವಿನ ಕೆಲಸವೂ ನಿಂತು ಹೋಗಿದೆ ಎನ್ನಲಾಗುತ್ತಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಜನರು ನಿರುದ್ಯೋಗಿಗಳಾಗಿದ್ದಾರೆ. 2022ರಲ್ಲಿ ಬದಲಾವಣೆ ಆಗಲಿರುವ ಸಂದಿಲದಲ್ಲಿ ಲಡ್ಡುಗಳ ವ್ಯಾಪಾರ ಮತ್ತೊಮ್ಮೆ ಜೋರಾಗಿದೆ. ರೈತರು ತಮ್ಮ ಭತ್ತದ ಉತ್ಪನ್ನಗಳನ್ನು ಮಾರುತ್ತಿದ್ದಾರೆ. ಆದರೆ, ಸರಿಯಾದ ಬೆಲೆ ಸಿಗುತ್ತಿಲ್ಲ. ಕೆಲವು ರೈತರು ತಮ್ಮ ಉತ್ಪನ್ನವನ್ನು ಮಾರುವಾಗಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಖಿಲೇಶ್ ಯಾದವ್ ಬೇಸರ ವ್ಯಕ್ತಪಡಿಸಿದ್ದಾರೆ.

ಲಖೀಂಪುರ ಘಟನೆಯ ವಿಷಯವನ್ನು ಪ್ರಸ್ತಾಪಿಸಿದ ಅಖಿಲೇಶ್ ಯಾದವ್, ಲಖಿಂಪುರದಲ್ಲಿ ನಡೆದ ಘಟನೆ ಜಲಿಯನ್ ವಾಲಾಬಾಗ್ ಹತ್ಯಾಕಾಂಡದಂತಿದೆ. ಬಿಜೆಪಿಯವರು ಬೆದರಿಸಿ ರಾಜಕೀಯ ಮಾಡುತ್ತಿದ್ದಾರೆ. ಜಾತಿವಾರು ಜನಗಣತಿಗೆ ಹೆದರುತ್ತಿದ್ದಾರೆ. ಅವರ ಸಂಖ್ಯೆ ಹೇಳಿಕೊಳ್ಳುವಷ್ಟು ಹೆಚ್ಚಿಲ್ಲ. ಈ ಜನರು ‘ಜೀಪ್ ಮತ್ತು ಜೀಬ್’ ಮಾತ್ರ ಓಡಿಸುತ್ತಾರೆ. ಬಿಜೆಪಿಯಿಂದ ವಿದ್ಯುತ್ ಸ್ಥಾವರ ನಿರ್ಮಿಸಲು ಸಾಧ್ಯವಾಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಸ್‌ಬಿಎಸ್‌ಪಿ ಮುಖ್ಯಸ್ಥ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದ ಮಾಜಿ ಸಚಿವ ರಾಜ್‌ಭರ್ ಮಾತನಾಡಿ, ಜನರು ವಿದ್ಯುತ್ ಬಿಲ್‌ಗಳ ಬಗ್ಗೆ ಚಿಂತಿತರಾಗಿದ್ದಾರೆ. ಅಖಿಲೇಶ್ ಮುಖ್ಯಮಂತ್ರಿಯಾದ ತಕ್ಷಣ ಗೃಹಬಳಕೆಯ ವಿದ್ಯುತ್ ಬಿಲ್ ಮನ್ನಾ ಆಗಲಿದೆ. ಇಂದು ಜನರು ಹಣದುಬ್ಬರದ ಬಗ್ಗೆ ಚಿಂತಿತರಾಗಿದ್ದಾರೆ. ಬಿಜೆಪಿಯ ವಿದಾಯ ನಂತರವೇ ಪೆಟ್ರೋಲ್, ಡೀಸೆಲ್ ದರ ಅರ್ಧದಷ್ಟು ಇಳಿಕೆಯಾಗಲಿದೆ ಎಂದಿದ್ದಾರೆ.

ಬಿಜೆಪಿಯವರು ಫೂಲನ್ ದೇವಿಜಿ ಅವರನ್ನು ಅವಮಾನಿಸಿದ್ದಾರೆ. ಫೂಲನ್ ದೇವಿಜಿಯ ಅವಮಾನಕ್ಕೆ ಮತದಾನದ ಮೂಲಕ ಸೇಡು ತೀರಿಸಿಕೊಳ್ಳುತ್ತೇನೆ. ಸರಕಾರ ರಚನೆಯಾದರೆ ಬಡವರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ. ನಾವು ಅಧಿಕಾರಕ್ಕೆ ಬಂದರೆ ಕಾವಲುಗಾರರ ಗೌರವಧನ ಹೆಚ್ಚಿಸಿ ಪೊಲೀಸರ ಕೆಲಸದ ಅವಧಿಯನ್ನು ಎಂಟು ಗಂಟೆಗೆ ನಿಗದಿ ಮಾಡಲಾಗುವುದು. ಪಕ್ಕದ ಜಿಲ್ಲೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು ಮತ್ತು ರಾಜ್ಯದಲ್ಲಿ ಹಳೆಯ ಪಿಂಚಣಿಯನ್ನು ಮರುಸ್ಥಾಪಿಸಲಾಗುವುದು, ಇದರ ಹೊರತಾಗಿ ಬಡವರಿಗೆ ಪಿಜಿವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು ಎಂದು ರಾಜ್‌ಭರ್ ಹೇಳಿದ್ದಾರೆ.

ಹಿಂದೂ-ಮುಸ್ಲಿಮರಾಗಿ ಹೋರಾಡುವ ಬದಲು ನಿಮ್ಮ ಹಕ್ಕುಗಳಿಗಾಗಿ ಹೋರಾಡಿ. ಮುಸ್ಲಿಮರಿಂದ ಜನರಿಗೆ ಯಾವುದೇ ಬೆದರಿಕೆ ಇಲ್ಲ. ಬದಲಿಗೆ, ಯೋಗಿ-ಮೋದಿ ಅವರ ಕುರ್ಚಿ ಅಪಾಯದಲ್ಲಿದೆ. ರೈಲ್ವೇ, ಎಲ್‌ಐಸಿ, ಬಿಎಸ್‌ಎನ್‌ಎಲ್ ಎಲ್ಲವೂ ಮಾರಾಟವಾಯಿತು. ಅಖಿಲೇಶ್ ಯಾದವ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ನಿಮ್ಮ ನೆರೆಹೊರೆಯವರಿಗೂ ಹೇಳಿ. ಆರ್‌ಎಸ್‌ಎಸ್‌ನವರು ಬಂದು ನಿಮ್ಮನ್ನು ಪ್ರಚೋದಿಸುತ್ತಾರೆ. ಆದರೆ 2022ರ ಚುನಾವಣೆ ನಿಮ್ಮೆಲ್ಲರಿಗೂ ಮಾಡು ಇಲ್ಲವೇ ಮಡಿ ಇದ್ದಂತೆ ಎಂದಿದ್ದಾರೆ.

ಇದನ್ನೂ ಓದಿ: MPI: ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ದೇಶದ ಅತ್ಯಂತ ಬಡ ರಾಜ್ಯಗಳು; ಕರ್ನಾಟಕಕ್ಕೆ ಎಷ್ಟನೇ ಸ್ಥಾನ? ಇಲ್ಲಿದೆ ಮಾಹಿತಿ

40,000ಕ್ಕೂ ಹೆಚ್ಚು ತಮಿಳು ಬ್ರಾಹ್ಮಣರಿಗೆ ಸಿಗುತ್ತಿಲ್ಲ ವಧು; ಉತ್ತರ ಪ್ರದೇಶ, ಬಿಹಾರಕ್ಕೂ ವ್ಯಾಪಿಸಿದ ವಧು ಅನ್ವೇಷಣೆ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ