AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಮೇನಿ ಅಂತ್ಯಕ್ರಿಯೆಗೆ ಇರಾನ್​ನಿಂದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಆಹ್ವಾನ

ಜುಲೈ 4ರಿಂದ 9ರವರೆಗೆ ಟೆಹ್ರಾನ್, ಕಾಮ್ (Qom) ಮತ್ತು ಮಶಾದ್ ನಗರಗಳಲ್ಲಿ ನಡೆಯಲಿರುವ ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸರ್ಕಾರಿ ಅಂತ್ಯಕ್ರಿಯೆಯು ಇತ್ತೀಚಿನ ಇತಿಹಾಸದಲ್ಲೇ ಅತ್ಯಂತ ದೊಡ್ಡ ಅಂತಿಮಯಾತ್ರೆಗಳಲ್ಲಿ ಒಂದಾಗುವ ಸಾಧ್ಯತೆಯಿದೆ. ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೈಯಕ್ತಿಕವಾಗಿ ಆಹ್ವಾನ ನೀಡಿದ್ದರೂ ಸಹ, ಭಾರತವು ಅವರ ಬದಲಿಗೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪವಿತ್ರ ಮಾರ್ಗರಿಟಾ ಮತ್ತು ಬಿಹಾರದ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹಸ್ನೈನ್ (ನಿವೃತ್ತ) ಅವರನ್ನು ಕಳುಹಿಸಲು ನಿರ್ಧರಿಸಿದೆ.

ಖಮೇನಿ ಅಂತ್ಯಕ್ರಿಯೆಗೆ ಇರಾನ್​ನಿಂದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಆಹ್ವಾನ
Nitin Nabin And KhargeImage Credit source: PTI
ಸುಷ್ಮಾ ಚಕ್ರೆ
|

Updated on: Jul 01, 2026 | 6:33 PM

Share

ನವದೆಹಲಿ, ಜುಲೈ 1: ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಅಂತ್ಯಕ್ರಿಯೆಗೆ ಭಾರತದ ಪ್ರಮುಖ ರಾಜಕೀಯ ಮುಖಂಡರಿಗೆ ಆಹ್ವಾನ ಬಂದಿದೆ. ಇರಾನ್‌ನ ದಿವಂಗತ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇರಾನ್ ಸರ್ಕಾರ ಅಧಿಕೃತ ಆಹ್ವಾನ ನೀಡಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಫೆಬ್ರವರಿ 28ರಂದು ಅಮೆರಿಕ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹತರಾಗಿದ್ದ ಖಮೇನಿ ಅವರ ಅಂತಿಮ ಸಂಸ್ಕಾರದ ವಿಧಿವಿಧಾನಗಳು ಮುಂದಿನ ವಾರ ಇರಾನ್‌ನಲ್ಲಿ ಜರುಗಲಿವೆ.

ಭಾರತ ಸರ್ಕಾರದ ಪರವಾಗಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪವಿತ್ರ ಮಾರ್ಗರಿಟಾ ಮತ್ತು ಬಿಹಾರದ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ಈ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾರತವನ್ನು ಪ್ರತಿನಿಧಿಸುವ ಸಾಧ್ಯತೆಯಿದೆ. ಭಾರತದಲ್ಲಿ ಸದ್ಯ ಸಾಂವಿಧಾನಿಕ ಹುದ್ದೆಯಲ್ಲಿರುವ ಶಿಯಾ ಸಮುದಾಯದ ಕೆಲವೇ ಕೆಲವು ಗಣ್ಯರಲ್ಲಿ ಒಬ್ಬರಾಗಿರುವ ಬಿಹಾರದ ರಾಜ್ಯಪಾಲ ಹಸ್ನೈನ್ ಮತ್ತು ಸಚಿವ ಮಾರ್ಗರಿಟಾ ಅವರು ಜುಲೈ 4ರಂದು ಟೆಹ್ರಾನ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಕಳೆದ ವಾರವಷ್ಟೇ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಅವರು ಪ್ರಧಾನಿ ನರೇಂದ್ರ ಮೋದಿಗೂ ಈ ಅಂತ್ಯಕ್ರಿಯೆಯ ಆಹ್ವಾನ ಪತ್ರಿಕೆಯನ್ನು ಕಳುಹಿಸಿದ್ದರು. ಭಾರತದ ವತಿಯಿಂದ ಯಾರು ಭಾಗವಹಿಸಲಿದ್ದಾರೆ ಎಂಬ ಅಧಿಕೃತ ಪ್ರಕಟಣೆ ಇನ್ನೂ ಹೊರಬಿದ್ದಿಲ್ಲವಾದರೂ, ಪ್ರಧಾನಿ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇರಾನ್ ಮನವಿ ಮಾಡಿದ್ದರಿಂದ ನಾಳೆ ದೋಹಾದಲ್ಲಿ ಮಾತುಕತೆ; ಅಮೆರಿಕ ಅಧ್ಯಕ್ಷ ಟ್ರಂಪ್ ಮಾಹಿತಿ

ಭಾರತ ಮಾತ್ರವಲ್ಲದೆ ಚೀನಾ, ರಷ್ಯಾ, ಪಾಕಿಸ್ತಾನ ಮತ್ತು ಕತಾರ್ ದೇಶಗಳ ಪ್ರಮುಖ ನಾಯಕರಿಗೂ ಇರಾನ್ ಆಹ್ವಾನ ನೀಡಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ತಮ್ಮ ದೇಶದ ಅಧಿಕೃತ ನಿಯೋಗವೊಂದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಈಗಾಗಲೇ ಖಚಿತಪಡಿಸಿದ್ದಾರೆ.

ಫೆಬ್ರವರಿಯಲ್ಲಿ ಖಮೇನಿ ಮೃತಪಟ್ಟ ನಂತರ ಇರಾನ್ ಸರ್ಕಾರವು ಅಂತ್ಯಕ್ರಿಯೆಯ ದಿನಾಂಕವನ್ನು ಹಲವು ಬಾರಿ ಬದಲಾಯಿಸಿತ್ತು. ಆದರೆ ಜೂನ್ ತಿಂಗಳಲ್ಲಿ ಅಂತಿಮ ನಿರ್ಧಾರಕ್ಕೆ ಬಂದಿರುವ ಇರಾನ್ ಅಧಿಕಾರಿಗಳು, ಖಮೇನಿ ಅವರ ಅಂತ್ಯಸಂಸ್ಕಾರದ ಸಂಪೂರ್ಣ ವಿವರಗಳನ್ನು ಬಿಡುಗಡೆ ಮಾಡಿದ್ದಾರೆ.

ಇರಾನ್ ಸರ್ಕಾರಿ ಮಾಧ್ಯಮಗಳ ಪ್ರಕಾರ, ಜುಲೈ 6ರಂದು ಟೆಹ್ರಾನ್, ಜುಲೈ 7ರಂದು ಕೋಮ್ ಮತ್ತು ಜುಲೈ 9ರಂದು ಮಶಾದ್ ನಗರಗಳಲ್ಲಿ ಅಂತಿಮ ದರ್ಶನ ಹಾಗೂ ಶೋಕಾಚರಣೆ ಸಭೆಗಳು ನಡೆಯಲಿವೆ. ನಂತರ ಜುಲೈ 9ರಂದು ಇಮಾಮ್ ರೆಜಾ ಅವರ ಪವಿತ್ರ ದರ್ಗಾದಲ್ಲಿ ಖಮೇನಿಯ ಪಾರ್ಥಿವ ಶರೀರವನ್ನು ದಫನ ಮಾಡಲಾಗುವುದು.

ಇದನ್ನೂ ಓದಿ: ಇರಾನ್‌ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿಗೆ ಆಹ್ವಾನ

1989ರಿಂದ 2026ರವರೆಗೆ ದೀರ್ಘಕಾಲದವರೆಗೆ ಇರಾನ್ ದೇಶವನ್ನು ಮುನ್ನಡೆಸಿದ್ದ ಅಲಿ ಖಮೇನಿ ಅವರ ಅಂತ್ಯಕ್ರಿಯೆಯನ್ನು ಶಿಯಾ ಮುಸ್ಲಿಮರ ಪವಿತ್ರ ಶೋಕಾಚರಣೆಯ ಮಾಸವಾದ ‘ಮೊಹರಂ’ ಸಮಯದಲ್ಲಿ ಆಯೋಜಿಸಲಾಗಿದೆ. ಆರಂಭದಲ್ಲಿ ಮಾರ್ಚ್ 4ರಂದೇ ಅಂತ್ಯಕ್ರಿಯೆ ನಡೆಸಲು ಯೋಜಿಸಲಾಗಿತ್ತು. ಆದರೆ ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿದ ನಂತರ ಇರಾನ್-ಅಮೆರಿಕ ಯುದ್ಧ ಆರಂಭವಾಗಿದ್ದರಿಂದ ಅಂತ್ಯಕ್ರಿಯೆಯನ್ನು ಮುಂದೂಡಲಾಗಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ಸಾಲದ ಗೋಳು ಹೇಳಿಕೊಂಡ ಮಾಜಿ ಬಿಗ್​​ಬಾಸ್ ಸ್ಪರ್ಧಿ ಸೋನು ಗೌಡ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ವೈದ್ಯಕೀಯ ಪರೀಕ್ಷೆಗೆ ಕರೆತಂದ ವೇಳೆ ಶಂಕಿತ ಉಗ್ರ ಸುಹೇಲ್ ಉದ್ದಟತನ
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಆಷಾಢದಲ್ಲಿ ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಗಮನಕ್ಕೆ ಬಿಗ್ ಅಪ್​ಡೇಟ್
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?
ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಸಚಿವ ಭೈರತಿ ಸುರೇಶ್ ಹೇಳಿದ್ದೇನು?