ಹೃದಯಾಘಾತದಿಂದ ಮಹಾರಾಷ್ಟ್ರದ ರಾಜ್ಯಸಭಾ ಸದಸ್ಯ ರಾಮರಾವ್ ವಡ್ಕುಟೆ ನಿಧನ

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯಸಭಾ ಸಂಸದ ರಾಮರಾವ್ ವಡ್ಕುಟೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎದೆನೋವು ಮತ್ತು ಅಸ್ವಸ್ಥತೆಯ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಸುಮಾರು 8 ತಿಂಗಳ ಹಿಂದೆಯಷ್ಟೇ ಬಿಜೆಪಿಯಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದ ವಡ್ಕುಟೆ, ಕಳಂಕರಹಿತ ವ್ಯಕ್ತಿತ್ವದ ಅನುಭವಿ ರಾಜಕಾರಣಿ ಮತ್ತು ಉತ್ತಮ ವಾಗ್ಮಿ ಎಂದು ಗುರುತಿಸಿಕೊಂಡಿದ್ದರು..

ಹೃದಯಾಘಾತದಿಂದ ಮಹಾರಾಷ್ಟ್ರದ ರಾಜ್ಯಸಭಾ ಸದಸ್ಯ ರಾಮರಾವ್ ವಡ್ಕುಟೆ ನಿಧನ
ರಾಮರಾವ್ ವಡ್ಕುಟೆ

Updated on: Nov 22, 2026 | 11:26 AM

ನವದೆಹಲಿ, ನವೆಂಬರ್ 22: ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಹಾಗೂ ರಾಜ್ಯಸಭಾ ಸದಸ್ಯ ರಾಮರಾವ್ ವಡ್ಕುಟೆ ಇಂದು ನವದೆಹಲಿಯ ಏಮ್ಸ್​​ನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ವೇಳೆ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಹಾಗೂ ತೀವ್ರ ಅನಾರೋಗ್ಯದ ಕಾರಣದಿಂದಾಗಿ ರಾಮರಾವ್ ವಡ್ಕುಟೆ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ತಜ್ಞ ವೈದ್ಯರ ತಂಡವು ನಿರಂತರ ಚಿಕಿತ್ಸೆ ನೀಡಿದರೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ನಿಧನರಾದರು ಎಂದು ಆಸ್ಪತ್ರೆ ಮತ್ತು ಕುಟುಂಬದ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಧಂಗರ್ ಸಮುದಾಯದ ಪ್ರಭಾವಿ ನಾಯಕರಾಗಿದ್ದ ರಾಮರಾವ್ ವಡ್ಕುಟೆ ಹಿಂಗೋಲಿ ಜಿಲ್ಲೆಯವರು. ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ಸಕ್ರಿಯವಾಗಿ ಶ್ರಮಿಸಿದ್ದರು.

Loading...

ಇದನ್ನೂ ಓದಿ: ರಾಜಿ ಮಾಡಿಕೊಂಡ ಪ್ರಧಾನಿ, ಮೋದಿ ವಿರುದ್ಧ ರಾಹುಲ್ ವಾಗ್ದಾಳಿ, ರಾಹುಲ್ ಪಾಕಿಸ್ತಾನದ ಅಭಿಮಾನಿ ಎಂದ ಬಿಜೆಪಿ

ವಡ್ಕುಟೆ ಈ ಹಿಂದೆ ಶೇಲಿ-ಮೇಂಧಿ ಮಹಾಸಂಘದ (ಮೇಕೆ ಮತ್ತು ಕುರಿ ಸಾಕಾಣಿಕೆದಾರರ ಒಕ್ಕೂಟ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಮೊದಲು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದೊಂದಿಗೆ (ಎನ್​ಸಿಪಿ) ಗುರುತಿಸಿಕೊಂಡಿದ್ದ ಅವರು, ಮಹಾರಾಷ್ಟ್ರ ವಿಧಾನ ಪರಿಷತ್ತಿನ (ಎಂಎಲ್​ಸಿ) ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.


2019ರ ಅಕ್ಟೋಬರ್‌ನಲ್ಲಿ ಎನ್‌ಸಿಪಿ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರನ್ನು, 2021ರಲ್ಲಿ ಬಿಜೆಪಿಯ ಹಿಂಗೋಲಿ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಅಲ್ಲದೆ, ಹಿಂಗೋಲಿ ಲೋಕಸಭಾ ಕ್ಷೇತ್ರದ ಪಕ್ಷದ ಚುನಾವಣಾ ಮುಖ್ಯಸ್ಥರಾಗಿ ಮತ್ತು ಉಸ್ತುವಾರಿಯಾಗಿಯೂ ಅವರು ಜವಾಬ್ದಾರಿ ನಿರ್ವಹಿಸಿದ್ದರು. ಮಹಾರಾಷ್ಟ್ರದಲ್ಲಿ ಧಂಗರ್ ಸಮುದಾಯದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ತಮ್ಮ ಕಳಂಕರಹಿತ ರಾಜಕೀಯ ಜೀವನಕ್ಕೆ ಹೆಸರಾಗಿದ್ದರು.


ಇದನ್ನೂ ಓದಿ: ತಮ್ಮ ಮನವಿಗೆ ಬೆಲೆ ಕೊಟ್ಟು ಕಡಿಮೆ ಚಿನ್ನ ಖರೀದಿಸಿದ ಜನರಿಗೆ ಪ್ರಧಾನಿ ಮೋದಿ ಮೆಚ್ಚುಗೆ

ಗಣ್ಯರ ಸಂತಾಪ:

ರಾಮರಾವ್ ವಡ್ಕುಟೆ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಮಹಾರಾಷ್ಟ್ರ ಮುಖ್ಯಮಂತ್ರಿ dಏವೇಂದ್ರ ಫಡ್ನವಿಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಸಂಸತ್ತಿನಲ್ಲಿ ಮತ್ತು ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ನೀಡಿದ ಕೊಡುಗೆಗಳನ್ನು ಗಣ್ಯರು ಸ್ಮರಿಸಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us