Breaking ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಸ್ಪರ್ಧೆ

Rajya Sabha Election ಎರಡು ಸ್ಥಾನಗಳಿಗೆ ಮಾತ್ರ ಅಭ್ಯರ್ಥಿ ಘೋಷಣೆ ಮಾಡಿರುವ ಬಿಜೆಪಿ ಮತ್ತೊಮ್ಮೆ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಿದ್ದು ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಜಗ್ಗೇಶ್ ಅವರನ್ನೂ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ

Breaking ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಸ್ಪರ್ಧೆ
ಜಗ್ಗೇಶ್- ನಿರ್ಮಲಾ ಸೀತಾರಾಮನ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 29, 2022 | 7:40 PM

ಬಿಜೆಪಿ (BJP) ರಾಜ್ಯಸಭಾ ಚುನಾವಣೆಗೆ (Rajya Sabha Election) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ (Nirmala sitharaman) ಮತ್ತು ನಟ ಜಗ್ಗೇಶ್ (Jaggesh) ಸ್ಪರ್ಧಿಸಲಿದ್ದಾರೆ. ಎರಡು ಸ್ಥಾನಗಳಿಗೆ ಮಾತ್ರ ಅಭ್ಯರ್ಥಿ ಘೋಷಣೆ ಮಾಡಿರುವ ಬಿಜೆಪಿ ಮತ್ತೊಮ್ಮೆ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸಿದ್ದು ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ಶಾಸಕ ಜಗ್ಗೇಶ್ ಅವರನ್ನೂ ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ. ಏತನ್ಮಧ್ಯೆ, 2ನೇ ಬಾರಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಲಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿಗೆ ಟಿಕೆಟ್ ಕೈ ತಪ್ಪಿದೆ. ಇನ್ನುಳಿದ ರಾಜ್ಯಗಳಲ್ಲಿ ಮಹಾರಾಷ್ಟ್ರದಿಂದ ಪಿಯೂಷ್ ಗೋಯಲ್, ಡಾ ಅನಿಲ್  ಸುಖದೇವ್​​ ರಾವ್ ಬೋಂಡೆ ಸ್ಪರ್ಧಿಸಲಿದ್ದಾರೆ. ರಾಜಸ್ಥಾನದಿಂದ ಘನಶ್ಯಾಮ್  ತಿವಾರಿ, ಉತ್ತರಪ್ರದೇಶದಿಂದ ಲಕ್ಷ್ಮೀಕಾಂತ್ ವಾಜಪೇಯಿ  ಮತ್ತು ಡಾ. ರಾಧಾ ಮೋಹನ್ ಅಗರವಾಲ್ ಕಣಕ್ಕಿಳಿಯಲಿದ್ದಾರೆ.

ಉತ್ತರ ಪ್ರದೇಶದಿಂದ ಸುಂದರ ಸಿಂಗ್ ನಾಗರ್, ಬಾಬುರಾಮ್ ನಿಶಾದ್, ದರ್ಶನಾ ಸಿಂಗ್  ,ಸಂಗೀತಾ ಯಾದವ್​ಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರಾಖಂಡದಿಂದ ಡಾ. ಕಲ್ಪನಾ ಸೈನಿ, ಬಿಹಾರದಿಂದ ಸತೀಶ್  ಚಂದ್ರ ದುಬೆ ಮತ್ತು ಶಂಭು ಶರಣ್ ಪಾಟೀಲ್,  ಹರ್ಯಾಣದಿಂದ ಕಷ್ಣ ಲಾಲ್ ಪನ್ವಾರ್ ಅವರಿಗೆ ಅವಕಾಶ ನೀಡಲಾಗಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 7:19 pm, Sun, 29 May 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್