TV9 Kannada National BJP releases the first list of candidates for the 2024 Lok Sabha elections
Lok Sabha elections: ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ವಾರಣಾಸಿಯಿಂದ ಮೋದಿ ಸ್ಪರ್ಧೆ
ದೆಹಲಿಯಲ್ಲಿ ಒಂದರ ಹಿಂದೆ ಒಂದು ಸಭೆ ನಡೆಸಿದ ನಂತರ ಬಿಜೆಪಿ ಈ ಪಟ್ಟಿ ಬಿಡುಗಡೆ ಮಾಡಿದ.ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ರಾತ್ರಿ ಸಭೆ ಸೇರಿದ್ದು, ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರಧಾನಿ ನರೇಂದ್ ಮೋದಿ ಸೇರಿದಂತೆ ಅದರ ಸದಸ್ಯರು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಸಮಾಲೋಚನೆ ನಡೆಸಿದ್ದರು.
ಅಮಿತ್ ಶಾ- ಮೋದಿ
ರಶ್ಮಿ ಕಲ್ಲಕಟ್ಟ
Updated on:
Mar 02, 2024 | 7:12 PM
ದೆಹಲಿ ಮಾರ್ಚ್ 02: 2024ರ ಲೋಕಸಭೆ ಚುನಾವಣೆಗೆ (Lok sabha Election) ಬಿಜೆಪಿ (BJP) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಶನಿವಾರ) ಬಿಡುಗಡೆ ಮಾಡಿದೆ. ಸಂಜೆ 6.15ಕ್ಕೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿನೋದ್ ತಾವ್ಡೆ ಸುದ್ದಿಗೋಷ್ಠಿ ನಡೆಸಿದ್ದು, ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ. ಕಳೆದ 1 ದಶಕದಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನಡೆಸಿದ್ದೇವೆ. ಈ ಬಾರಿ 400 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿದ್ದೇವೆ. ಕೇಂದ್ರದಲ್ಲಿ 3ನೇ ಬಾರಿ ಮೋದಿ ನೇತೃತ್ವದಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ತಾವ್ಡೆ ಹೇಳಿದ್ದಾರೆ.
195 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿದ್ದು, 34 ಸಚಿವರು ಈ ಪಟ್ಟಿಯಲ್ಲಿ ಇದ್ದಾರೆ. ಈ ಪೈಕಿ 28 ಮಹಿಳೆಯರು, 2ಮಾಜಿ ಸಿಎಂಗಳು ಇದ್ದಾರೆ
50 ವರ್ಷದ ಕೆಳಗಿನ 47 ಅಭ್ಯರ್ಥಿಗಳು ಇದ್ದಾರೆ. 27 ಮಂದಿ ಎಸ್ ಸಿ ಸಮುದಾಯದವರು ಇದ್ದಾರೆ. ಕರ್ನಾಟಕದಲ್ಲಿನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿಲ್ಲ.
ಬಿಜೆಪಿ ಸುದ್ದಿಗೋಷ್ಠಿ
LIVE: Watch BJP Press Conference at party headquarters in New Delhi. https://t.co/nppQvosHrd
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:27 pm, Sat, 2 March 24
ರಶ್ಮಿ ಕಲ್ಲಕಟ್ಟ
ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ