AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rozgar Mela: ಪ್ರಧಾನಿ ಮೋದಿಯಿಂದ ಒಂದು ಲಕ್ಷಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಒಂದು ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು. ಬಿಜೆಪಿ ಆಡಲಿತದಲ್ಲಿ ಸರ್ಕಾರಿ ಉದ್ಯೋಗಳಿಗೆ ನೇಮಕಾತಿ ಮಾಡುವುದರಲ್ಲಿ ಪಾರದರ್ಶಕಗೊಳಿಸಿದ್ದೇವೆ ಎಂದು ಹೇಳಿದ್ದಾರೆ. ಈ ಸಮಯದಲ್ಲಿ ಕಾಂಗ್ರೆಸ್​​​ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಬಗ್ಗೆ ಟೀಕಿಸಿದರು.

Rozgar Mela: ಪ್ರಧಾನಿ ಮೋದಿಯಿಂದ ಒಂದು ಲಕ್ಷಕ್ಕೂ ಹೆಚ್ಚು ಮಂದಿಗೆ ನೇಮಕಾತಿ ಪತ್ರ ವಿತರಣೆ
ಅಕ್ಷಯ್​ ಪಲ್ಲಮಜಲು​​
|

Updated on: Feb 12, 2024 | 12:37 PM

Share

ದೆಹಲಿ, ಫೆ.12: ಇಂದು ರೋಜ್‌ಗಾರ್ ಮೇಳದ (rozgar mela) ಅಡಿಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಒಂದು ಲಕ್ಷಕ್ಕೂ ಹೆಚ್ಚು ಸಿಬ್ಬಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಿದರು. ಹಿಂದಿನ ಸರ್ಕಾರಗಳು ನೇಮಕಾತಿ ನಡೆಸಲು ಬಹಳ ಸಮಯ ತೆಗೆದುಕೊಳ್ಳುತ್ತಿದ್ದವು, ಆದರೆ ಬಿಜೆಪಿ ಸರ್ಕಾರವು ತನ್ನ ದಶಕದ ಆಡಳಿತದಲ್ಲಿ ಹಿಂದಿನ ಸರ್ಕಾರಕ್ಕಿಂತ 10 ವರ್ಷಗಳಲ್ಲಿ ಸುಮಾರು 1.5 ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರಗಳಲ್ಲಿ, ಉದ್ಯೋಗ ಜಾಹೀರಾತಿನ ಸಮಸ್ಯೆಯಿಂದ ನೇಮಕಾತಿ ಪತ್ರಗಳ ವಿತರಣೆ ಮಾಡಲು ಬಹಳ ಸಮಯ ತೆಗೆದುಕೊಳ್ಳುತ್ತಿತ್ತು. ಈ ವಿಳಂಬದ ನೆಪದಲ್ಲಿ ಲಾಭವನ್ನು ಪಡೆದು ಹಣ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ನಮ್ಮ ಸರ್ಕಾರ 10 ವರ್ಷದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಿದ್ದೇವೆ ಎಂದು ಕಾಂಗ್ರೆಸ್​​​ ಆಡಳಿತವನ್ನು ಟೀಕಿಸಿದರು.

ನಮ್ಮ ಸರ್ಕಾರ ನಿಗದಿತ ಸಮಯದ ಚೌಕಟ್ಟಿನೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಾವು ಪ್ರಯತ್ನಿಸುತ್ತೇವೆ. ಇದರಿಂದ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ನೀಡುತ್ತಿದೆ ಎಂದು ಹೇಳಿದರು. ಇನ್ನು ರೋಜ್‌ಗಾರ್ ಮೇಳದ ಅಡಿಯಲ್ಲಿ ಆಯ್ಕೆಯಾದ ಸಿಬ್ಬಂದಿಗಳನ್ನು ಕಂದಾಯ, ಗೃಹ, ಉನ್ನತ ಶಿಕ್ಷಣ, ಅಣುಶಕ್ತಿ, ರಕ್ಷಣೆ, ಹಣಕಾಸು ಸೇವೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬುಡಕಟ್ಟು ವ್ಯವಹಾರಗಳು, ರೈಲ್ವೆಯಂತಹ ವಿವಿಧ ಸಚಿವಾಲಯಗಳಲ್ಲಿ ಮರುಸೇರ್ಪಡೆಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ 51,000 ಮಂದಿಗೆ ನೇಮಕಾತಿ ಪತ್ರ ವಿತರಣೆ

ಪ್ರತಿಯೊಬ್ಬ ಯುವಕನು ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಆಧಾರದ ಮೇಲೆ ತನ್ನ ಸ್ಥಾನವನ್ನು ಗಳಿಸಬಹುದು. 2014ರಿಂದ ಯುವಜನರನ್ನು ಭಾರತ ಸರ್ಕಾರದೊಂದಿಗೆ ಸಂಪರ್ಕಿಸುವ ಮೂಲಕ ರಾಷ್ಟ್ರ ನಿರ್ಮಾಣದ ಪಯಣದಲ್ಲಿ ತೊಡಗಿಸಿಕೊಳ್ಳುವುದು ಬಿಜೆಪಿ ಸರ್ಕಾರದ ಪ್ರಯತ್ನವಾಗಿದೆ ಎಂದರು.

ಇನ್ನು ‘ಕರ್ಮಯೋಗಿ ಭವನ’ದ ಮೂಲಕ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ iGOT ಕರ್ಮಯೋಗಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮಾಡ್ಯೂಲ್ ‘ಕರ್ಮಯೋಗಿ ಪ್ರಾರಂಭ’ ಮೂಲಕ ತರಬೇತಿ ನೀಡಲಾಗುತ್ತಿದೆ. iGOT ಕರ್ಮಯೋಗಿ ಪೋರ್ಟಲ್‌ನಲ್ಲಿ 800 ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್‌ಗಳನ್ನು ಒದಗಿಸಲಾಗಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ