ಬಿಜೆಪಿ 2ನೇ ಹಂತದ ಆಪರೇಷನ್ ಕಮಲ ನಡೆಸುತ್ತಿದೆ: ಎಎಪಿ ರಾಷ್ಟ್ರೀಯ ಸಮಾವೇಶದಲ್ಲಿ ಅರವಿಂದ ಕೇಜ್ರಿವಾಲ್

ಬಿಜೆಪಿ ಎರಡನೇ ಹಂತದ ಆಪರೇಷನ್ ಕಮಲವನ್ನು ಪ್ರಾರಂಭಿಸಿದೆ. ಇದು ಚುನಾಯಿತ ಸರ್ಕಾರಗಳನ್ನು ಉರುಳಿಸುವ ಉದ್ದೇಶವನ್ನು ಹೊಂದಿದೆ. ದೆಹಲಿ ಮತ್ತು ಪಂಜಾಬ್​​ನಲ್ಲಿ ನಡೆಸಿದ ಅವರ ಹಿಂದಿನ ಪ್ರಯತ್ನಗಳು...

ಬಿಜೆಪಿ 2ನೇ ಹಂತದ ಆಪರೇಷನ್ ಕಮಲ ನಡೆಸುತ್ತಿದೆ: ಎಎಪಿ ರಾಷ್ಟ್ರೀಯ ಸಮಾವೇಶದಲ್ಲಿ ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 18, 2022 | 1:01 PM

ದೆಹಲಿ: ಭಾನುವಾರ ಎಎಪಿಯ (AAP National Convention) ಮೊದಲ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅರವಿಂದ ಕೇಜ್ರಿವಾಲ್ (Arvind Kejriwal ) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ಬಿಜೆಪಿ ಎರಡನೇ ಹಂತದ ಆಪರೇಷನ್ ಕಮಲವನ್ನು ಪ್ರಾರಂಭಿಸಿದೆ ಎಂದು ಅವರು ಆರೋಪಿಸಿದರು. ಇದು ಚುನಾಯಿತ ಸರ್ಕಾರಗಳನ್ನು ಉರುಳಿಸುವ ಉದ್ದೇಶವನ್ನು ಹೊಂದಿದೆ. ದೆಹಲಿ ಮತ್ತು ಪಂಜಾಬ್​​ನಲ್ಲಿ ನಡೆಸಿದ ಅವರ ಹಿಂದಿನ ಪ್ರಯತ್ನಗಳು ವಿಫಲವಾಗಿದ್ದವು. ಈಗ, ಹೊಸ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಎಎಪಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದ ಒಂದು ದಿನದ ನಂತರ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ. ಮನೀಶ್ ಸಿಸೋಡಿಯಾ ನಂತರ ಅಮಾನತುಲ್ಲಾ ಅವರನ್ನು ಬಂಧಿಸಲಾಗಿದೆ. ಮುಂದೆ ಅವರು ಕೈಲಾಶ್ ಗಹ್ಲೋಟ್ (ದೆಹಲಿ ಸಾರಿಗೆ ಸಚಿವ) ಅವರನ್ನು ಗುರಿಯಾಗಿಸುತ್ತಾರೆ. ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದಿದ್ದಾರೆ ಕೇಜ್ರಿವಾಲ್. ಈ ದೇಶದ ಸಂವಿಧಾನವನ್ನು ಉಳಿಸಲು 2012 ನವೆಂಬರ್ 26ರಂದು ಎಎಪಿ ಸ್ಥಾಪಿಸಲಾಯಿತು.ಇದು ಕಾಕತಾಳೀಯವಲ್ಲ ಎಂದು ಅವರು ಒತ್ತಿ ಹೇಳಿದರು.

ಇಂದು ನಾವು ದೇಶದ 20 ರಾಜ್ಯಗಳಲ್ಲಿ 1446 ಜನ ಪ್ರತಿನಿಧಿಗಳನ್ನು ಹೊಂದಿದ್ದೇವೆ. ಇವು ದೇವರು ಬಿತ್ತಿದ ನಮ್ಮ ಬೀಜಗಳು. ದೆಹಲಿ ಮತ್ತು ಪಂಜಾಬ್‌ನಲ್ಲಿ ಈ ಬೀಜಗಳು ಮರಗಳಾಗಿ ಮಾರ್ಪಟ್ಟಿವೆ ಮತ್ತು ಜನರಿಗೆ ನೆರಳು ಮತ್ತು ಹಣ್ಣುಗಳನ್ನು ನೀಡುತ್ತಿವೆ. ದೇವರು ಗುಜರಾತ್‌ನಲ್ಲಿ 27 ಬೀಜಗಳನ್ನು ಬಿತ್ತಿದ್ದಾನೆ. ಅವು ವೃಕ್ಷಗಳಾಗಲಿವೆ, ಗುಜರಾತ್‌ನಲ್ಲಿ ನಮ್ಮ ಸರ್ಕಾರ ರಚನೆಯಾಗಲಿದೆ ಎಂದ ಕೇಜ್ರಿವಾಲ್, ರಾಜ್ಯ ಚುನಾವಣೆಯಲ್ಲಿ ಎಎಪಿ ಉತ್ತಮ ಸಾಧನೆ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Published On - 12:43 pm, Sun, 18 September 22

ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
ಹುಡುಗಿ ಯಾರೇ ಆದರೂ ಬಂಜಾರಾ ಸಂಪ್ರದಾಯದಂತೆ ಮದುವೆ: ಮಾರುತಿ
ಹುಡುಗಿ ಯಾರೇ ಆದರೂ ಬಂಜಾರಾ ಸಂಪ್ರದಾಯದಂತೆ ಮದುವೆ: ಮಾರುತಿ