AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಶೀಘ್ರದಲ್ಲೇ ಬಿಜೆಪಿಗೆ ಸಿಎಂ ಸ್ಥಾನ; ಏಪ್ರಿಲ್ 10ರ ಬಳಿಕ ಅಂತಿಮ ನಿರ್ಧಾರ ಸಾಧ್ಯತೆ

ಬಿಹಾರದಲ್ಲಿ ಏ. 10ರ ಬಳಿಕ ಬಿಜೆಪಿಯ ಮುಖ್ಯಮಂತ್ರಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳುವ ನಿರ್ಧಾರ ತೆಗೆದುಕೊಂಡ ನಂತರ ಬಿಹಾರದ ರಾಜಕೀಯಲ್ಲಿ ಪರಿವರ್ತನೆಯಾಗಲಿದೆ. ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಅವರ ಸ್ಥಾನವನ್ನು ಯಾರು ವಹಿಸಿಕೊಳ್ಳುತ್ತಾರೆ ಎಂಬುದರ ಕುರಿತು ಇನ್ನೂ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಮೂಲಗಳ ಪ್ರಕಾರ ಜೆಡಿಯು ಬದಲು ಬಿಜೆಪಿ ಅಭ್ಯರ್ಥಿ ಮುಖ್ಯಮಂತ್ರಿಯಾಗಲಿದ್ದಾರೆ. ಏಪ್ರಿಲ್ ಮೊದಲ ವಾರದೊಳಗೆ ಈ ಬಗ್ಗೆ ಸಮಗ್ರ ಚಿತ್ರಣ ಸಿಗುವ ಸಾಧ್ಯತೆಯಿದೆ.

ಬಿಹಾರದಲ್ಲಿ ಶೀಘ್ರದಲ್ಲೇ ಬಿಜೆಪಿಗೆ ಸಿಎಂ ಸ್ಥಾನ; ಏಪ್ರಿಲ್ 10ರ ಬಳಿಕ ಅಂತಿಮ ನಿರ್ಧಾರ ಸಾಧ್ಯತೆ
Nitish Kumar
ಸುಷ್ಮಾ ಚಕ್ರೆ
|

Updated on: Mar 06, 2026 | 4:23 PM

Share

ಪಾಟ್ನಾ, ಮಾರ್ಚ್ 6: ಬಿಹಾರದಲ್ಲಿ ಹೊಸ ರಾಜ್ಯ ಸರ್ಕಾರ ರಚನೆ ಕುರಿತು ಚರ್ಚೆಗಳು ತೀವ್ರಗೊಳ್ಳುತ್ತಿದ್ದಂತೆ ಬಿಜೆಪಿ ಮುಖ್ಯಮಂತ್ರಿ ಹುದ್ದೆಯನ್ನು ಭದ್ರಪಡಿಸಿಕೊಳ್ಳಲು ಸಜ್ಜಾಗಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ತಕ್ಷಣ ರಾಜೀನಾಮೆ ನೀಡುವ ಸಾಧ್ಯತೆಯಿಲ್ಲ. ಏಪ್ರಿಲ್ 10ರವರೆಗೆ ಅವರು ಅಧಿಕಾರದಲ್ಲಿ ಮುಂದುವರಿಯಬಹುದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ನಿತೀಶ್ ಕುಮಾರ್ ನಡುವೆ ರಾಜಕೀಯ ಪರಿವರ್ತನೆಯ ಕುರಿತು ಚರ್ಚೆಗಳು ನಡೆದಿವೆ ಎನ್ನಲಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದ ನಂತರವೇ ಸಿಎಂ ಸ್ಥಾನದ ಬದಲಾವಣೆಯಾಗುವ ನಿರೀಕ್ಷೆಯಿದೆ.

ರಾಜ್ಯಸಭೆಯ ಅವಧಿ ಪ್ರಾರಂಭವಾಗುವ ಏಪ್ರಿಲ್ 10ರವರೆಗೆ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಎಂದು ಮೂಲಗಳು ಸೂಚಿಸಿವೆ. ಆ ಸಮಯದಲ್ಲಿ ಹೊಸ ಸರ್ಕಾರದ ರಚನೆಯೂ ನಡೆಯುವ ನಿರೀಕ್ಷೆಯಿದೆ. ನಿತೀಶ್ ಕುಮಾರ್ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದರು. ಬಿಹಾರದಲ್ಲಿ ಸುಮಾರು 2 ದಶಕಗಳ ಕಾಲ ಅಧಿಕಾರದಲ್ಲಿದ್ದ ನಿತೀಶ್ ಕುಮಾರ್ ಕ್ರಮೇಣ ರಾಷ್ಟ್ರೀಯ ರಾಜಕೀಯದತ್ತ ಗಮನ ಹರಿಸಬಹುದೆಂಬ ಊಹಾಪೋಹಗಳಿಗೆ ಈ ಬೆಳವಣಿಗೆ ಪುಷ್ಟಿ ನೀಡಿದೆ. ಆದರೆ, ನಿತೀಶ್ ಕುಮಾರ್ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಬಗ್ಗೆ ಮೈತ್ರಿಕೂಟದೊಳಗೆ ಯಾವುದೇ ಚರ್ಚೆಗಳು ನಡೆದಿಲ್ಲ.

ಇದನ್ನೂ ಓದಿ: Video: ರಾಜ್ಯಸಭಾ ಚುನಾವಣೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ಹೊಸ ಸಂಪುಟ ರಚನೆಯಲ್ಲಿ, ಜೆಡಿಯು 14 ಸಚಿವ ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಬಿಜೆಪಿಗೆ ಮುಖ್ಯಮಂತ್ರಿ ಸೇರಿದಂತೆ 13 ಸಚಿವ ಸ್ಥಾನಗಳು ಸಿಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ