ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷ: ಕೊವಿಡ್​ನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಸಹಾಯ ಮಾಡಲು ಬಿಜೆಪಿ ಚಿಂತನೆ

May 30: ಸದ್ಯ ದೇಶ ಕೊವಿಡ್ ವಿರುದ್ಧದ ಹೋರಾಟದಲ್ಲಿದ್ದು, ಬಿಜೆಪಿ ಸಹ ತನ್ನ ಎರಡನೇ ಬಾರಿ ಅಧಿಕಾರಕ್ಕೆ ಬಂದ ಎರಡನೇ ವರ್ಷದ ಆಚರಣೆಯಲ್ಲಿ ಕೊವಿಡ್ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷ: ಕೊವಿಡ್​ನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ಸಹಾಯ ಮಾಡಲು ಬಿಜೆಪಿ ಚಿಂತನೆ
ಪ್ರಧಾನಿ ನರೇಂದ್ರ ಮೋದಿ
Follow us
guruganesh bhat
|

Updated on:May 22, 2021 | 9:54 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಮೇ 30ಕ್ಕೆ 7ನೇ ವರ್ಷ ತುಂಬುತ್ತಿದ್ದು, ದೇಶದಲ್ಲಿ ಕೊವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಯಾವುದೇ ಸಂಭ್ರಮಾಚರಣೆ ನಡೆಸದಿರಲು ಬಿಜೆಪಿ ನಿರ್ಧರಿಸಿದೆ. ಈ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಧಿಕೃತ ಘೋಷಣೆ ಮಾಡಿದ್ದಾರೆ. ಸಂಭ್ರಮಾಚರಣೆಯ ಬದಲು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲು ಬಿಜೆಪಿ ಚಿಂತನೆ ನಡೆಸಿದೆ. ಅಲ್ಲದೇ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕೊವಿಡ್​ನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸಹಾಯ ಆಗಬಲ್ಲ ಯೋಜನೆಗಳನ್ನು ಜಾರಿಗೊಳಿಸಲು ಬಿಜೆಪಿ ಯೋಜನೆ ರೂಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಪಕ್ಷವನ್ನು ಒಳಗೊಂಡ ಮೈತ್ರಿಕೂಟ ಎನ್​ಡಿಎ ಸರ್ಕಾರ ಕೇಂದ್ರದಲ್ಲಿ ಎರಡನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದು ಮೇ 30ರ ಎರಡು ವರ್ಷ ತುಂಬಲಿದೆ. ಹೀಗಾಗಿ ಈ ಸಂದರ್ಭದವನ್ನು ದೇಶದಾದ್ಯಂತ ಬಿಜೆಪಿ ಯಾವ ರೀತಿ ಆಚರಿಸಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿತ್ತು. ಸದ್ಯ ದೇಶ ಕೊವಿಡ್ ವಿರುದ್ಧದ ಹೋರಾಟದಲ್ಲಿದ್ದು, ಬಿಜೆಪಿ ಸಹ ತನ್ನ ಎರಡನೇ ಬಾರಿ ಅಧಿಕಾರಕ್ಕೆ ಬಂದ ಎರಡನೇ ವರ್ಷದ ಆಚರಣೆಯಲ್ಲಿ ಕೊವಿಡ್ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ದೇಶದಲ್ಲಿ ಕೊವಿಡ್ ಸೋಮಕು; ಪಾಸಿಟಿವಿಟಿ ದರದಲ್ಲಿ ಕುಸಿತ

ದೇಶದಲ್ಲಿ ಮೇ 10ರಂದು ಶೇ.24.8ರಷ್ಟಿದ್ದ ಪಾಸಿಟಿವಿಟಿ ದರ ಮೇ 22ರವರೆಗೆ ಶೇ.12.45ರಷ್ಟು ಕುಸಿದಿದೆ ಎಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್​ ತಿಳಿಸಿದರು. ದೇಶದ‌ 382 ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಈಗಲೂ ಶೇ.10ಕ್ಕಿಂತ ಹೆಚ್ಚಿದೆ. 8 ರಾಜ್ಯಗಳಲ್ಲಿ ಲಕ್ಷಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳಿವೆ. ಈ ರಾಜ್ಯಗಳ ಕುರಿತು ಹೆಚ್ಚಿನ ಮುಂಜಾಗೃತೆ ವಹಿಸಲಾಗಿದೆ ಎಂದು ಅವರು ವಿವರಿಸಿದರು. ಕೊರೊನಾ ನಿಯಂತ್ರಣಕ್ಕೆ ‌ಚೆನ್ನೈ ಪಾಲಿಕೆಯಿಂದ ಉತ್ತಮ ಕ್ರಮ ಕೈಗೊಳ್ಳಲಾಗಿದ್ದು ಇತರ ಮಹಾನಗರ ಪಾಲಿಕೆಗಳು ಸಹ ಚೆನ್ನೈ ಮಾದರಿಯನ್ನು ಅನುಸರಿಬಹುದು ಎಂದರು.

ವ್ಯಾಕ್ಸಿನ್ ಪಾಸ್​ಪೋರ್ಟ್​ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯಲ್ಲಿಯೇ ಒಮ್ಮತ ಮೂಡಿಲ್ಲ. ಇದರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಈಗ ಪ್ರಯಾಣಕ್ಕೆ ಕೇವಲ ಕೊರೊನಾ ಟೆಸ್ಟಿಂಗ್ ನೆಗೆಟಿವ್ ರಿಪೋರ್ಟ್​ನ್ನು ಮಾತ್ರ ವಿದೇಶಗಳು ಕೇಳುತ್ತಿವೆ ಎಂದು ಅವರು ತಿಳಿಸಿದರು.

ಬ್ಲ್ಯಾಕ್ ಫಂಗಸ್ ಸೋಂಕಿನ ಚಿಕಿತ್ಸೆಯಲ್ಲಿ ಬಳಸುವ ಅಂಫೋಟೆರಿಸಿನ್ ಬಿ ಡ್ರಗ್ಸ್ ಉತ್ಪಾದಿಸುವ ಕಂಪನಿಗಳು ತಮ್ಮ ಉತ್ಪಾದನೆಯನ್ನು ಹೆಚ್ಚಿಸುತ್ತಿವೆ. ಅಂಪೋಟೆರಿಸಿನ್ ಬಿ ಡ್ರಗ್ಸ್ ಲಸಿಕೆಯನ್ನು ಉತ್ಪಾದಿಸಲು ಐದು ಹೊಸ ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ದೇಶದಲ್ಲಿ ಇದುವರೆಗೂ 4.29 ಕೋಟಿ ಜನರಿಗೆ ಎರಡನೇ ಡೋಸ್ ಕೊವಿಡ್ ಲಸಿಕೆ ನೀಡಲಾಗಿದೆ 14.12 ಕೋಟಿ ಜನರಿಗೆ ಮೊದಲ‌‌ ಡೋಸ್ ಕೊವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಇದೇ ವೇಳೆ ಮಾತನಾಡಿದ ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, ದೇಶದಲ್ಲಿ ಮಕ್ಕಳಿಗೂ ಕೊರೊನಾ ಸೋಂಕು ತಗಲುತ್ತಿದೆ. ಆದರೆ ಕೊವಿಡ್ ತಗುಲಿದ ಹೆಚ್ಚಿನ ಮಕ್ಕಳಲ್ಲಿ ಸೋಂಕಿನ ಯಾವುದೇ ಲಕ್ಷಣ ಕಾಣಿಸಿಲ್ಲ. ಹೆಚ್ಚಿನ ಸಾವು ಸಹ ಸಂಭವಿಸುವ ಸಾಧ್ಯತೆಯಿಲ್ಲ. ಕೊವಿಡ್ ತಗುಲಿದ ಮಕ್ಕಳಿಗೆ ಸೋಂಕಿನ ಹೆಚ್ಚಿನ ಗುಣಲಕ್ಷಣ ಇರದಿದ್ದಲ್ಲಿ ಕಡ್ಡಾಯವಾಗಿ ಆಸ್ಪತ್ರೆಗೆ ಸೇರಿಸುವ ಅಗತ್ಯವಿಲ್ಲ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್‌ ತಿಳಿಸಿದರು.

ಭಾರತ ಮತ್ತು ಇತರ ದೇಶಗಳಲ್ಲಿ ವಿಡ್ ಸೋಂಕು ತಗುಲಿದ ಶೇಕಡಾ 3ರಿಂದ 4ರಷ್ಟು ಪ್ರಮಾಣದ ಮಕ್ಕಳನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ 10ರಿಂದ 12 ವರ್ಷದ ಮಕ್ಕಳನ್ನು ಈ ಸಂದರ್ಭದಲ್ಲಿ ಹೆಚ್ಚು ಗಮನಿಸಬೇಕಾದ ಅಗತ್ಯವಿದ್ದು, ಈ ವಯೋಮಾನದ ಮಕ್ಕಳು ಎಲ್ಲೆಂದರಲ್ಲಿ ತಿರುಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಪಾಲಕರು ಮಕ್ಕಳ ಮೇಲೆ ವಿಶೇಷ ಗಮನವಿರಿಸಬೇಕು ಎಂದು ಅವರು ಸೂಚಿಸಿದರು.

ಕೊರೊನಾ ಸೋಂಕಿಗೂ ಮೊದಲೇ ಬ್ಲ್ಯಾಕ್ ಫಂಗಸ್‌ ಸೋಂಕು ಇತ್ತು. ಹೆಚ್ಚಾಗಿ ಡಯಾಬಿಟಿಸ್ ಇರುವವರಿಗೆ ಬ್ಲ್ಯಾಕ್ ಫಂಗಸ್ ಸೋಂಕು ತಗಲುವ ಸಾರ್ಧಯತೆಗಳು ಹೆಚ್ಚಿವೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಸ್ಥಿರವಾಗುತ್ತಿದೆ. ಪಾಸಿಟಿವಿಟಿ ಪ್ರಮಾಣ, ಸಕ್ರಿಯ ಕೇಸ್ ಸಂಖ್ಯೆ ಕುಸಿತವಾಗುತ್ತಿದೆ. ಯಾವುದೇ ರಾಜ್ಯಕ್ಕೆ ಕೊವಿಡ್ ಲಸಿಕೆ ಕೊರತೆಯಾದರೆ ತುರ್ತಾಗಿ ಪೂರೈಸುತ್ತೇವೆ ಎಂದ ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, ಕೊವಿಡ್ ಚಿಕಿತ್ಸೆ ವೇಳೆ ಅನಗತ್ಯವಾಗಿ ಸ್ಟಿರಾಯ್ಡ್‌ ಅನ್ನು ಬಳಸಬಾರದು ಎಂದು ಸಹ ವಿವರಿಸಿದರು.

ಇದನ್ನೂ ಓದಿ: ಕೊವಿಡ್​ ಸೋಂಕಿತರಿಗೆ ನೆರವಾದ ಡಿ-ಬಾಸ್​; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್​

Karnataka Covid Update: ಕರ್ನಾಟಕದಲ್ಲಿ ಇಂದು 31,183 ಜನರಿಗೆ ಕೊವಿಡ್ ದೃಢ, 451 ಜನರು ನಿಧನ

(BJP thinking of helping children who lost parents by Covid On may 30)

Published On - 9:43 pm, Sat, 22 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್