ದೆಹಲಿ: ಇಂದು ಭಾರತೀಯ ಜನತಾ ಪಕ್ಷ ದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲಿದೆ. ಇಂದು ಬೆಳಗ್ಗೆಯಿಂದಲೇ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸುವರು. ಮಧ್ಯಾಹ್ನ 3ಗಂಟೆಯವರೆಗೂ ಈ ಸಭೆ ಮುಂದುವರಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ ಕೆಲವೇ ನಾಯಕರು ಭೌತಿಕವಾಗಿ ಹಾಜರಿರಲಿದ್ದಾರೆ. ಉಳಿದಂತೆ ವರ್ಚ್ಯುವಲ್ ಆಗಿ ನಡೆಯಲಿದೆ ಎಂದೂ ಮಾಹಿತಿ ನೀಡಿದ್ದಾರೆ. ಈ ಸಭೆಯಲ್ಲಿ ರಾಷ್ಟ್ರಾದ್ಯಂತ ಎಲ್ಲ ಕಾರ್ಯಕಾರಿಣಿಗಳಿಗೆ ಪ್ರಧಾನಿ ಮೋದಿ ಕೆಲವು ಮಾರ್ಗಸೂಚಿಗಳನ್ನು ನೀಡಲಿದ್ದಾರೆ ಎಂದೂ ಅರುಣ್ ಸಿಂಗ್ ಹೇಳಿದ್ದಾರೆ.
ಈ ಸಭೆಯಲ್ಲಿ 124 ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಹಲವು ಕೇಂದ್ರ ಸಚಿವರು ಈ ಸಭೆಯಲ್ಲಿ ಭೌತಿಕವಾಗಿ ಪಾಲ್ಗೊಳ್ಳಲಿದ್ದಾರೆ. ಉಳಿದಂತೆ ಬೇರೆ ರಾಜ್ಯಗಳ ಸದಸ್ಯರು, ಮುಖ್ಯಮಂತ್ರಿಗಳು ವರ್ಚ್ಯುವಲ್ ಆಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಸಂಬಂಧ ಚರ್ಚೆ ನಡೆಸಲು ಬಿಜೆಪಿ ಈ ಸಭೆ ಕರೆದಿದೆ ಎನ್ನಲಾಗಿದೆ.
ಇದನ್ನೂ ಓದಿ: ‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್